ಬೆಂಗಳೂರು: ಸ್ವಾತಂತ್ರ್ಯ ಬಂದ ಮೇಲೆ ದೇಶವನ್ನು ಉಳಿಸುವುದಕ್ಕಾಗಿ ನಮ್ಮ ಸಂವಿಧಾನ, ಗಣರಾಜ್ಯವನ್ನು ದೊಡ್ಡ ಆಸ್ತಿಯಾಗಿ ಸ್ವೀಕಾರ ಮಾಡಿದ್ದೇವೆ. ಆದರೆ ಮೋದಿ ನೇತೃತ್ವದ ಸರ್ಕಾರ ನಾನು ಭಾರತೀಯನಾ ಎಂಬ ಪ್ರಶ್ನೆ ಮೂಡುವಂತೆ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕುಟುಕಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಇಂದು ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೇಂದ್ರದ ಒಂದು ವರ್ಷದ ಆಡಳಿತವನ್ನು ಗಮನಿಸಿದ್ದು, ನಮ್ಮ 40 ವರ್ಷದ ರಾಜಕೀಯ ಜೀವನದಲ್ಲಿ ಸ್ವಾತಂತ್ರ್ಯ ಬಂದ ಮೇಲೆ ಮೋದಿಯಂತಹ ಜನವಿರೋಧಿ ಸರ್ಕಾರವನ್ನು ಇದೂವರೆಗೂ ನೋಡಿಯೇ ಇಲ್ಲ ಎಂದು ಹರಿಹಾಯ್ದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಅಲ್ಲದೆ ಕಳೆದ 50 ವರ್ಷಗಳಲ್ಲಿ ನಿರ್ಮಾಣವಾಗಿದ್ದ ನವ ಭಾರತವನ್ನು ಪ್ರಧಾನಿ ನರೇಂದ್ರ ಮೋದಿ ತಮ್ಮ ಆಡಳಿತಾವಧಿಯಲ್ಲಿ ಶೂನ್ಯಸ್ಥಿತಿಗೆ ಕೊಂಡೊಯ್ದಿದ್ದಾರೆ ಎಂದು ಅಸಮಾಧಾನವ್ಯಕ್ತಪಡಿಸಿದ್ದಾರೆ.
ಇನ್ನು ಯುವಕರ ಸಹಕಾರದಿಂದ ಮೋದಿ ಪ್ರಧಾನಿಯಾದರು. ಆದರೆ ಯುವಕರಿಗೆ ದೊಡ್ಡಮಟ್ಟದ ನಿರುದ್ಯೋಗವನ್ನು ಸೃಷ್ಟಿ ಮಾಡಿಕೊಟ್ಟಿದ್ದು ಎಲ್ಲರೂ ಮನೆಯಲ್ಲೇ ಇರಿ ಎಂದಿದ್ದಾರೆ. ಜತೆಗೆ ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿದಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಇಂಧನ ತೈಲದ ಬೆಲೆ ಕುಸಿದಿದೆ. ಆದರೆ ನಮ್ಮ ದೇಶದಲ್ಲಿ ಮಾತ್ರ ಬೆಲೆಯನ್ನು ಹೆಚ್ಚಿಸಲಾಗಿದೆ. ಬೇರೆ ದೇಶಗಳಲ್ಲಿ ತೆರಿಗೆ ಕಡಿಮೆಯಾದರೆ ನಮ್ಮ ದೇಶದಲ್ಲಿ ಜನಸಾಮಾನ್ಯರ ಬದುಕಿನ ಮೇಲೆ ಬರೆ ಎಳೆಯುವಂತೆ ತೆರಿಗೆ ಹೆಚ್ಚಿಸಲಾಗಿದೆ. ಜಿಡಿಪಿ ಶೇ. 0.1ರಷ್ಟು ಆಗಿದೆ. ದೇಶದಲ್ಲಿ ಸರಿಯಾದ ಆರ್ಥಿಕ ನೀತಿ ಇಲ್ಲ. 40 ವರ್ಷಗಳಲ್ಲಿ ಇಲ್ಲದ ದಾಖಲೆ ಪ್ರಮಾಣದಲ್ಲಿ ಶೇ.24 ರಷ್ಟು ನಿರುದ್ಯೋಗ ಸೃಷ್ಟಿಯಾಗಿದೆ. ಕೋವಿಡ್‌ನಿಂದ ಇದು ಇನ್ನೂ ಹೆಚ್ಚಿದೆ ಎಂದು ಕೇಂದ್ರದ ವಿರುದ್ಧ ಹರಿಹಾಯ್ದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಕೊರೊನಾ ಸಂಕಷ್ಟವನ್ನು ಎದುರಿಸಲು ಸರ್ಕಾರ ಸಂಪೂರ್ಣ ವಿಫಲವಾಗಿದೆ. ಸರ್ಕಾರಕ್ಕೆ ವ್ಯಾವಹಾರಿಕ ಜ್ಞಾನ ಇಲ್ಲ, ಅಧಿಕಾರಿಗಳಿಗೆ ಬೆಲೆ ಇಲ್ಲ. ರಾಜ್ಯ ಸರ್ಕಾರಕ್ಕೆ ಕೋವಿಡ್ ವಿಷಯದಲ್ಲಿ ವಿಪಕ್ಷವಾಗಿ ತಾವು ಸಹಕಾರ ನೀಡಿದ್ದೆವು. ಆದರೆ ಯಾವುದೇ ಉಪಯೋಗವಾಗಲಿಲ್ಲ. ಫುಲ್ ಪ್ಲಾಪ್ ಆಗಿದೆ ಎಂದು ದೂರಿದರು.
ಹಸಿವಿನಿಂದ ಇಂದು ಸಾವಿರಾರು ಜನ ಸತ್ತಿದ್ದಾರೆ. ರೈತರ ಸಾವಿಗೆ ಸರ್ಕಾರವೇ ಕಾರಣ. ಈ ವರ್ಷ ಮಾರಕವಾದ ವರ್ಷ , ಪ್ರತಿಯೊಬ್ಬರ ಬದುಕು ಶೂನ್ಯ ಆಗುವುದಕ್ಕೆ ಬಿಜೆಪಿಯ ನಾಯಕರೇ ಕಾರಣರಾಗಿದ್ದಾರೆ. ರೈತ , ಶ್ರಮಿಕ ವರ್ಗದ ಜನರಿಗೆ ನ್ಯಾಯ ಕೊಡುವುದಕ್ಕೆ ಈ ಸರ್ಕಾರ ಚಿಂತನೆ ಮಾಡಿಲ್ಲ. ಸಣ್ಣ ಉದ್ಯಮಿಗಳಿಗೆ ಯಾವುದೇ ಸಹಾಯ ಮಾಡಲಿಲ್ಲ. ಒಟ್ಟಾರೆ ಅಭಿವೃದ್ಧಿಗೆ ಒಂದೇ ಒಂದು ಕಾರ್ಯಕ್ರಮ ರೂಪಿಸಲಿಲ್ಲ. ರೈತರು ಬದುಕಿದ್ದಾಗ ಪರಿಹಾರ ಕೊಡದ ಸರ್ಕಾರ ಅವರ ತಿಥಿಗೆ ಹಣ ಕೊಡುತ್ತದೆಯೇ ಎಂದು ಕಿಡಿಕಾರಿದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail