NEWSನಮ್ಮಜಿಲ್ಲೆ

ಚಾಮರಾಜನಗರ ಜಿಪಂ ಅಧ್ಯಕ್ಷರಾಗಿ  ಅಶ್ವಿನಿ ಆಯ್ಕೆ

ವಿಜಯಪಥ ಸಮಗ್ರ ಸುದ್ದಿ

ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ಜಿ.ಪಂ. ಕ್ಷೇತ್ರದ ಸದಸ್ಯರಾದ ಎಂ. ಅಶ್ವಿನಿ ಚಾಮರಾಜನಗರ ಜಿಲ್ಲಾ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮೈಸೂರು ವಿಭಾಗೀಯ ಪ್ರಾದೇಶಿಕ ಆಯುಕ್ತಎನ್. ಜಯರಾಮ್ ಅಧ್ಯಕ್ಷತೆಯಲ್ಲಿ ಅಧ್ಯಕ್ಷರ ಚುನಾವಣೆ ಸಂಬಂಧ ಸಭೆ ನಡೆಯಿತು.   ಎಂ. ಅಶ್ವಿನಿ ಅವರೊಬ್ಬರೆ ನಾಮಪತ್ರ ಸಲ್ಲಿಕೆ ಮಾಡಿದ್ದು, ನಾಮಪತ್ರ ಕ್ರಮಬದ್ಧವಾಗಿರುವ ಹಿನ್ನೆಲೆಯಲ್ಲಿ ಅಶ್ವಿನಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಪ್ರಾದೇಶಿಕ ಆಯುಕ್ತರು ಘೋಷಿಸಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ನೂತನ ಅಧ್ಯಕ್ಷೆ ಅಶ್ವಿನಿ ಮಾತನಾಡಿ ಕುಡಿಯುವ ನೀರು, ನೈರ್ಮಲ್ಯ ಸ್ವಚ್ಛತೆ ಹಾಗೂ ಶೈಕ್ಷಣಿಕ ಅಭಿವೃದ್ಧಿಗೆ ಹೆಚ್ಚು ಗಮನ ಹರಿಸಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದರು.

ಮೈಸೂರು ವಿಭಾಗೀಯ ಹೆಚ್ಚುವರಿ ಪ್ರಾದೇಶಿಕ ಆಯುಕ್ತರಾದ ಕೆ.ಎಂ. ಗಾಯಿತ್ರಿ, ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಬೋಯರ್ ನಾರಾಯಣರಾವ್, ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್. ಆನಂದ್ ಇತರರು ಹಾಜರಿದ್ದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು