NEWSಶಿಕ್ಷಣ-

ಪೋಷಕರು ಸರ್ಕಾರಿ ಶಾಲೆಗೇ ಮಕ್ಕಳ ಸೇರಿಸುವ ಕಾಲ ಸನ್ನಿಹಿತ

1ರಿಂದ 10ನೇ ತರಗತಿವರೆಗೆ ಏಕರೀತಿಯ ಶಿಕ್ಷಣಕ್ಕೆ ಆದ್ಯತೆ l ಸಚಿವ ಸುರೇಶ್‌ಕುಮಾರ್‌ ಭರವಸೆ

ವಿಜಯಪಥ ಸಮಗ್ರ ಸುದ್ದಿ

ತುಮಕೂರು:  ಇನ್ನು ಸರ್ಕಾರಿ ಶಾಲೆಗಳಿಗೇ  ಶ್ರೀಮಂತರೂ ಕೂಡ ತಮ್ಮ ಮಕ್ಕಳನ್ನು ಸೇರಿಸುವರು. ಆ ರೀತಿಯ ವಾತಾವರಣವನ್ನು ಮುಂದಿನದಿನಗಳಲ್ಲಿ ನಿರ್ಮಾಣ ಮಾಡುವ ಗುರಿ ನಮ್ಮ ಸರ್ಕಾರದ ಮೇಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಚಿವ ಎಸ್.ಸುರೇಶ್‍ಕುಮಾರ್ ಹೇಳಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿಂದು ನಡೆದ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಪೂರ್ವ ಸಿದ್ಧತೆ ಕುರಿತಂತೆ ಡಿಡಿಪಿಐ ಮತ್ತು ಬಿಇಒಗಳೊಂದಿಗೆ ಪ್ರಗತಿ ಪರೀಶೀಲನಾ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ  ಮಾತನಾಡಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಮುಂದಿನ ವರ್ಷಗಳಲ್ಲಿ ಸರ್ಕಾರಿ ಶಾಲೆಗಳನ್ನು ಸಬಲೀಕರಣಗೊಳಿಸುವುದು ನಮ್ಮ ಜವಾಬ್ದಾರಿಯಾಗಿದೆ ಏಕೆಂದರೆ ಇಂದು ಕೂಲಿಗನು ಸಹ ತನ್ನ ಮಗುವನ್ನು ಕಷ್ಟವಾದರೂ  ಖಾಸಗಿ ಶಾಲೆಗೆ ಸೇರಿಸುತ್ತಿದ್ದಾನೆ ಕಾರಣ ನಮ್ಮ ಮಗು ಉತ್ತಮ ಗುಣಮಟ್ಟದ ಶಿಕ್ಷಣ ಪಡೆಯಲಿ ಎಂದು. ಅಂದರೆ ಸರ್ಕಾರಿ ಶಾಲೆಗಳಲ್ಲಿ ಅಂಥ ಶಿಕ್ಷಣ ಮತ್ತು ವಾತಾವರಣ ಇಲ್ಲ ಎಂಬುವುದು ಆತನಿಗೂ ಗೊತ್ತಿದೆ. ಹೀಗಾಗಿ ನಾವು ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ಮುಂದಾಗಬೇಕಿದೆ ಎಂದು ತಿಳಿಸಿದರು.

ಇಂದು ಅಮೆರಿಕಾದಲ್ಲಿ ಒಂದರಿಂದ 10ನೇ ತರಗತಿಯವರೆಗೆ ಎಂಥ ಶ್ರೀಮಂತ ಎಂದರೂ ಅವರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ, ಅದೂ ಉಚಿತವಾಗಿ ಶಿಕ್ಷಣ ನೀಡುವ ವ್ಯವಸ್ಥೆ ಜಾರಿಯಲ್ಲಿದೆ. ಆದರೆ ನಮ್ಮ ದೇಶ ಮತ್ತು ರಾಜ್ಯದಲ್ಲಿ ಅಂಥ ವಾತಾವರಣ ಇಲ್ಲವಾಗಿದೆ. ಆದ್ದರಿಂದ ಮೊದಲು ನಮ್ಮ ರಾಜ್ಯದಿಂದಲೇ ಅಂತಹ ಒಂದು ಹೊಸ ಪ್ರಯತ್ನವಾಗಲಿ ಎಂಬುವುದೇ ನಮ್ಮ ಸದಾಶಯವಾಗಿದೆ ಎಂದು ಹೇಳಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಇನ್ನು ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ತಡಮಾಡದೇ ಬರುವ ವರ್ಷಗಳಲ್ಲಿ  ಬದಲಾವಣೆ ತಂದು ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಲಾಗುವುದು ಆ ಮೂಲಕ ಮಗುವನ್ನು ಖಾಸಗಿ ಶಾಲೆಗೆ ಸೇರಿಸಿ  ಇದಕ್ಕಾಗಿ ಒಬ್ಬ ಕೂಲಿ ಮಾಡುವವ  ತನ್ನ ದುಡಿಮೆಯ ಶೇ.40ರಷ್ಟು ಹಣವನ್ನು ಮಗುವಿನ ಶಿಕ್ಷಣಕ್ಕಾಗಿ ಖಾಸಗಿ ಶಾಲೆಗೆ ನೀಡುತ್ತಿದ್ದು, ಅದರ ಬದಲಾವಣೆಗೆ ಮುನ್ನುಡಿ ಬರೆಯುತ್ತೇವೆ ಎಂದು ಹೇಳಿದರು.

ಕೂಲಿಗನು ಸರ್ಕಾರಿ ಶಾಲೆಯಲ್ಲಿ ಉತ್ತಮ ಗುಣಮಟ್ಟದ  ಶಿಕ್ಷಣ  ನೀಡುತ್ತಿಲ್ಲ ಎಂದು ತನ್ನ ದುಡಿಮೆಯ ಶೇ.40ರಷ್ಟು ಪಾಲನ್ನು ಶಾಲೆಗೆ ವ್ಯಯಿಸುತ್ತಿರುವುದರಿಂದ ಆತ ಆರ್ಥಿಕವಾಗಿ ಮತ್ತಷ್ಟು ಕುಗ್ಗಿಹೋಗುತ್ತಿದ್ದಾನೆ. ಅದನ್ನು ತಪ್ಪಿಸುವ ನಿಟ್ಟಿನಲ್ಲಿ ಮತ್ತು   ಅಂತಹ ಕುಟುಂಬಗಳ ಆದಾಯ ಉಳಿಸುವ ಮಾರ್ಗದಲ್ಲಿ ನಮ್ಮ ಸರ್ಕಾರ ಪ್ರಯತ್ನ ಮಾಡುತ್ತಿದೆ. ಹೀಗಾದರೆ ಆ ಕೂಲಿಗನ ಕುಟುಂಬ ಆರೋಗ್ಯವಾಗಿ ಬದುಕನ್ನು ನಡೆಸಬಹುದು  ಎಂದು ತಿಳಿಸಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ