Friday, November 1, 2024
CrimeNEWSದೇಶ-ವಿದೇಶಸಿನಿಪಥ

ವಿಶ್ವಮಾರಿ ಕೊರೊನಾಗೆ ಬಾಲಿವುಡ್‌ ಸಂಗೀತ ನಿರ್ದೇಶಕ ವಾಜಿದ್ ಖಾನ್ ಬಲಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಮುಂಬೈವಿಶ್ವಮಾರಿ ಕೊರೊನಾಗೆ ಬಾಲಿವುಡ್‌ನ ಹೆಸರಾಂತ ಸಂಗೀತ ನಿರ್ದೇಶಕ ಮತ್ತು ಗಾಯಕ ಸಾಜಿದ್-ವಾಜಿದ್ ಖ್ಯಾತಿಯ ವಾಜಿದ್ ಖಾನ್ ಬಲಿಯಾಗಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

42 ವರ್ಷದ ವಾಜಿದ್ ಖಾನ್  ಮಾರಕ ಕೊರೋನಾ ವೈರಸ್ ಸೋಂಕಿಗೆ ತುತ್ತಾಗಿದ್ದರು. ಇದರಿಂದ ಅವರನ್ನು ಕೋಕಿಲಾಬೆನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಭಾನುವಾರ ರಾತ್ರಿ ತೀವ್ರ ಉಸಿರಾಟದ ತೊಂದರೆ ಉಂಟಾಗಿದ್ದರಿಂದ ನಿಗಾಘಟಕದಲ್ಲಿ ಇರಿಸಲಾಗಿತ್ತು. ಆದರೂ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಕಿಡ್ನಿ ಸಂಬಂಧಿತ ಕಾಯಿಲೆಯಿಂದಲೂ ಬಳಲುತ್ತಿದ್ದ ವಾಜಿದ್ ಖಾನ್, ಕೆಲವೇ ತಿಂಗಳುಗಳ ಹಿಂದೆಯಷ್ಟೇ ಕಿಡ್ನಿ ಟ್ರಾನ್ಸ್ ಪ್ಲಾಂಟ್‌ಗೆ ಒಳಗಾಗಿದ್ದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ತೋ ಡರ್ನಾ ಕ್ಯಾ’ ಸಿನಿಮಾದ ಮೂಲಕ ಬಾಲಿವುಡ್ ಪ್ರವೇಶಿಸಿದ್ದ ಖಾನ್‌. ಬಾಲಿವುಡ್‌ಲ್ಲಿ ಸಾಜಿದ್-ವಾಜಿದ್ ಜೋಡಿ ಎಂದೇ ಖ್ಯಾತಿಗಳಿಸಿದ್ದರು.  1998ರಲ್ಲಿ ಬಿಡುಗಡೆಗೊಂಡ ಸಲ್ಮಾನ್ ಖಾನ್ ಅಭಿನಯದ ‘ಪ್ಯಾರ್ ಕಿಯಾ ‘ಚೋರಿ ಚೋರಿ’, ‘ಹಲೋ ಬ್ರದರ್’, ‘ಮುಜ್ಸೆ  ಶಾದಿ ಕರೋಗಿ’, ‘ಪಾರ್ಟ್ನರ್’, ‘ವಾಂಟೆಡ್’, ‘ದಬಾಂಗ್’ ಮುಂತಾದ ಚಲನಚಿತ್ರಗಳಿಗೆ ಸಹೋದರ ಸಾಜಿದ್ ಖಾನ್ ಜತೆಗೆ ಸೇರಿ ವಾಜಿದ್ ಖಾನ್ ಸಂಗೀತ ಸಂಯೋಜಿಸಿ ಬಹಳ ಎತ್ತರಕ್ಕೆ ಬೆಳೆದಿದ್ದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

‘ಹುಡ್ ಹುಡ್ ದಬಾಂಗ್’, ‘ಜಲ್ವಾ’, ‘ಚಿಂತಾ ತ..’  ಮುಂತಾದ ಹಿಟ್ ಸಾಂಗ್ಸ್ ಗೆ ವಾಜಿದ್ ಖಾನ್ ದನಿಯಾಗಿದ್ದರು. ಸಾಜಿದ್-ವಾಜಿದ್ ಬ್ರದರ್ಸ್ ಕಾಂಬಿನೇಷನ್ ನಿಂದ ಬಾಲಿವುಡ್‌ಗೆ ಹಲವು ಸೂಪರ್ ಹಿಟ್ ಹಾಡುಗಳು ಲಭಿಸಿವೆ. 2008ರಲ್ಲಿ ಬಿಡುಗಡೆಯಾದ ‘ಪಾರ್ಟ್ನರ್’ ಚಿತ್ರದ ಮೂಲಕ ವಾಜಿದ್ ಖಾನ್ ಗಾಯಕರಾಗಿ ಗುರುತಿಸಿಕೊಂಡರು.

ವಾಜಿದ್ ಖಾನ್ ನಿಧನಕ್ಕೆ ಬಾಲಿವುಡ್ ಕಂಬನಿ ಮಿಡಿದಿದೆ. ವಾಜಿದ್ ಖಾನ್ ನಿಧನದ ಸುದ್ದಿ ತಿಳಿಯುತ್ತಿದ್ದಂತೆಯೇ ಪ್ರಿಯಾಂಕಾ ಛೋಪ್ರಾ, ಪತ್ರಕರ್ತ ರಜತ್ ಶರ್ಮಾ, ಗಾಯಕ ಅದ್ನಾನ್ ಸಮಿ ಟ್ವಿಟ್‌ ಮಾಡಿ ಸಂತಾಪ ಸೂಚಿಸಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!
LATEST
KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ: ಈಗಲೇ ಅರ್ಜಿ ಹಾಕಿ ಬಿಬಿಎಂಪಿ: ಅನಧಿಕೃತ ಹೆಚ್ಚುವರಿ ಮಹಡಿಗಳು, ಪಾದಚಾರಿ ಮಾರ್ಗ ಒತ್ತುವರಿ ತೆರವು KSRTC ಸಮಸ್ತ 4ನಿಗಮಗಳ ಅಧಿಕಾರಿಗಳು ನೌಕರರು ಒಗ್ಗಟ್ಟಾಗಿ: ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವತ್ತ ಚಿಂತಿಸಿದರೆ ಅಸಾ...