ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ಏರುಗತಿಯಲ್ಲಿ ಸಾಗುತ್ತಿರುವ ಕೊರನಾವನ್ನು ನಿಯಂತ್ರಿಸುವತ್ತ ಗಮನ ಹರಿಸಿದ್ದು ಇದೆ ನನ್ನ ಕೆಲಸ ಹೀಗಿರುವಾಗ ಬೇರೆ ವಿಷಯದ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಕೇಂದ್ರ ಸರ್ಕಾರಕ್ಕೆ ವರ್ಷ ತುಂಬಿದ ಹಿನ್ನೆಲೆಯಲ್ಲಿ ಇಂದು ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪಕ್ಷದಲ್ಲಿನ ಬಂಡಾಯದ ಬಗ್ಗೆ ನಾನು ತಲೆಕೆಡಿಸಿಕೊಂಡಿಲ್ಲ ಸದ್ಯದ ಪರಿಸ್ಥಿತಿಯಲ್ಲಿ ಕೊರೊನಾ ಮಟ್ಟಹಾಕುವುದೊಂದೆ ನನ್ನ ಪ್ರಮುಖ ಕೆಲಸವಾಗಿದೆ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಇನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಅಭಿನಂದನೆ ಸಲ್ಲಿಸಿದ ಅವರು ಮೋದಿ ಗುಣಗಾನ ಮಾಡುವುದರಲ್ಲೇ ಹೆಚ್ಚು ಸಮಯ ವ್ಯಯಿಸಿದರು. ಕೆಲ ಬಿಜೆಪಿ ನಾಯಕರು ಯಡಿಯೂರಪ್ಪ ನಮ್ಮ ನಾಯಕರಲ್ಲ ಎಂದು ಹೇಳುತ್ತಿದ್ದಾರಲ್ಲ ಎಂಬುದಕ್ಕೆ ಆ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದ ಅವರು, ಇಡೀ ದೇಶ ಆರ್ಥಿಕ ಸಮಸ್ಯೆಯಿಂದ ನಲುಗುತ್ತಿದೆ ಹಾಗಾಗಿ ಕೇಂದ್ರದಿಂದ ಅನುದಾನ ಕಡಿಮೆ ಬಿಡುಗಡೆ ಆಗಿದೆ. ಮುಂದೆ ಆರ್ಥಿಕ ಸ್ಥಿತಿ ಸರಿಯಾಗುವ ವಿಶ್ವಾಸವಿದೆ. ಆ ಬಳಿಕ ಹೆಚ್ಚು ಅನುದಾನ ಸಿಗುವ ನಿರೀಕ್ಷೆ ಇದೆ ಎಂದು ಮಾತು ಬದಲಿಸಿದರು.
ಮಹಾಮಾರಿ ಕೋರನಾದಿಂದ ದೇಶಕ್ಕೆ ರಕ್ಷಣೆ ನೀಡುವಲ್ಲಿ ಪ್ರಧಾನಿ ಯಶಸ್ವಿಯಾಗಿದ್ದಾರೆ. ದೇಶದ ಜನರ ಜೀವನ ರಕ್ಷಣೆ ಮಾಡಿದ ಕೀರ್ತಿ ಮೋದಿ ಅವರಿಗೆ ಸಲ್ಲಲಿದೆ. ಕೊರೊನಾಗೆ 20 ಲಕ್ಷ ಕೋಟಿ ರೂ. ಪ್ಯಾಕೇಜ್ ನೀಡಿದ್ದಾರೆ. 8 ಲಕ್ಷ ಆಹಾರ ಪದಾರ್ಥಗಳನ್ನು ರಾಜ್ಯಕ್ಕೆ ನೀಡಿದ್ದಾರೆ. ರಾಜ್ಯ ಕೂಡ 1610 ಕೋಟಿ ರೂ. ಪ್ಯಾಕೇಜ್ ಘೋಷಣೆ ಮಾಡಿದೆ. ಇದಾದ ಬಳಿಕ 137ಕೋಟಿ, ಮತ್ತೆ 500 ಕೋಟಿ ಮೂರು ಪ್ಯಾಕೇಜ್ ನೀಡಿದೆ ಎಂದು ವಿವರಿಸಿದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಹಲವು ದಶಕಗಳಿಂದ ತುಕ್ಕು ಹಿಡಿದಿದ್ದ ಆಡಳಿತ ವ್ಯವಸ್ಥೆಯಲ್ಲಿ ಸುಧಾರಣೆ ತಂದಿದ್ದು, ಕಾಯಕ ಯೋಗಿಯಾಗಿ ಪಾರದರ್ಶಕ ಹಾಗೂ ಭ್ರಷ್ಟಾಚಾರ ರಹಿತ ಆಡಳಿತವನ್ನು ಪ್ರಧಾನಿ ಮೋದಿಯವರು ನೀಡುತ್ತಿದ್ದಾರೆ. ಈ ಮೂಲಕ ದೇಶ ಕಟ್ಟುವ ಕಾಯಕಕ್ಕೆ ತನ್ನನ್ನು ತಾನೇ ಅರ್ಪಿಸಿಕೊಂಡಿದ್ದಾರೆ ಎಂದು ಬಣ್ಣಿಸಿದರು.
ರಾಜ್ಯದಲ್ಲಿ ಬಿಜೆಪಿ 25 ಸ್ಥಾನ ಗೆಲ್ಲುವ ಮೂಲಕ ಮೋದಿ ಅಲೆಯಲ್ಲಿ ಘಟಾನುಘಟಿ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಕೆ.ಎಚ್. ಮುನಿಯಪ್ಪ, ಎಚ್.ಡಿ. ದೇವೇಗೌಡರಂತಹ ನಾಯಕರು ಸೋಲನ್ನು ಅನುಭವಿಸಿದರು ಎಂದು ಮೋದಿ ಅವರ ಅಲೆಯನ್ನು ಶ್ಲಾಘಿಸಿದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ವಾಹನ ಅಪಘಾತ ತಗ್ಗಿಸಲು ರಸ್ತೆ ಸುರಕ್ಷತಾ ಕಾಯ್ದೆ ಜಾರಿಗೆ ತರಲಾಯಿತು. ರೈತರ, ಸಾಮಾನ್ಯ ಜನರು, ಕೈಗಾರಿಕಾ ವಲಯಕ್ಕೆ ಯೋಜನೆ ರೂಪಿಸಲಾಯಿತು. ಕಿಸಾನ್ ಸಮ್ಮಾನ್ ಯೋಜನೆ, ಜಲ ಜೀವನ್ ಮಿಷನ್, ಅಸಂಘಟಿತ ಕಾರ್ಮಿಕ ವಲಯಕ್ಕೆ ಪಿಂಚಣಿ ವ್ಯವಸ್ಥೆ, ಭ್ರಷ್ಟಾಚಾರ ನಿಯಂತ್ರಣ ಕಾರ್ಯಕ್ರಮ ಸೇರಿದಂತೆ ಹತ್ತು ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ ಎಂದು ಹೇಳಿದರು.
ಬ್ಯಾಂಕ್ ಸುಧಾರಣೆಗಾಗಿ ಸಣ್ಣಪುಟ್ಟ ಬ್ಯಾಂಕ್ ವಿಲೀನಗೊಳಿಸಿದರು. ಮಕ್ಕಳ ದೌರ್ಜನ್ಯಕ್ಕೆ ಕಠಿಣ ಕಾನೂನು ಜಾರಿ, ಜಮ್ಮು ಕಾಶ್ಮೀರ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370 ರದ್ದುಗೊಳಿಸಲಾಯಿತು. ವಿದೇಶದಲ್ಲಿ ನೆಲೆ ಇಲ್ಲದ ನಿರಾಶ್ರಿತರಿಗೆ ಸಿಎಎ ಮೂಲಕ ಅಭಯ ಹಸ್ತ ನೀಡಿದ್ದಾರೆ ಎಂದು ಮೋದಿ ಅವರ ಕಾರ್ಯ ವೈಕರಿಯನ್ನು ಕೊಂಡಾಡಿದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail