NEWSನಮ್ಮರಾಜ್ಯವಿಜ್ಞಾನ

ಸಾರಿಗೆ ನೌಕರರನ್ನು ಕೆಲಸದಿಂದ ತೆಗೆದುಹಾಕುವುದಿಲ್ಲ, ಭಯಪಡಬೇಡಿ

ನಷ್ಟದ ಹಿನ್ನೆಲೆ ನೌಕರರ ಕೆಲಸಕ್ಕೆ ಕಂಟಕ ಎಂಬುದು ಸುಳ್ಳು l ಸಚಿವ ಲಕ್ಷ್ಮಣ ಸವದಿ ಸ್ಪಷ್ಟನೆ

ವಿಜಯಪಥ ಸಮಗ್ರ ಸುದ್ದಿ

ಬಳ್ಳಾರಿ: ಸಾರಿಗೆ ಇಲಾಖೆ ಕಳೆದ ಎರಡು ತಿಂಗಳಿಂದ ತನ್ನ ಬಸ್‌ಗಳನ್ನು ರಸ್ತೆಗಳಿಸಲಾಗದೆ ತುಂಬ ನಷ್ಟ ಅನುಭವಿಸಿದ್ದು, ಈ ಹಿನ್ನೆಲೆಯಲ್ಲಿ ಕೆಲ ನೌಕರರನ್ನು ಕೆಲಸದಿಂದ ತೆಗೆದಹಾಕುತ್ತಾರೆ ಎಂದು ಹರಿದಾಡುತ್ತಿರುವ ಸುದ್ದಿ ಶುದ್ಧಸುಳ್ಳು ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಎರಡು ತಿಂಗಳ ಲಾಕ್ ಡೌನ್ನಿಂದಾಗಿ ಸಾರಿಗೆ ಇಲಾಖೆ   1,800 ಕೋಟಿ ರೂ. ನಷ್ಟು ಅನುಭವಿಸಿದೆ. ಆದರೆ ಈಗ ಸಾರಿಗೆ ಬಸ್‌ ಸೇವೆ ಆರಂಭಗೊಂಡ  ಮೇಲೂ ನಾಲ್ಕು ನಿಗಮಗಳಲ್ಲಿ ಪ್ರತಿ ದಿನ 24 ಕೋಟಿ ರೂ. ನಷ್ಟು ಆಗುತ್ತಿದೆ ಎಂದು ವಿವರಿಸಿದರು. 

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಇನ್ನು ಸಾರಿಗೆ ಇಲಾಖೆ ತುಂಬ ನಷ್ಟ ಅನುಭವಿಸಿರುವುದು ನಿಜ,    ನಷ್ಟವನ್ನು ಸರಿದೂಗಿಸಲು ಸದ್ಯಕ್ಕೆ ಕಷ್ಟ ಸಾಧ್ಯವಾಗಿದೆ. ಹೀಗಾದ ಮಾತ್ರಕ್ಕೆ   ನೌಕರರನ್ನು ಕೆಲಸದಿಂದ ತೆಗೆದು ಹಾಕಲು ಸಾಧ್ಯವಿಲ್ಲ. ಈ ಬಗ್ಗೆ  ಸುದ್ದಿ ಹರಿದಾಡುತ್ತಿರುವುದು ಸುಳ್ಳು. ಆದ್ದರಿಂದ ಈ ಬಗ್ಗೆ ಯಾವ ನೌಕರರು ಹೆದರುವ ಅವಶ್ಯಕತೆ ಇಲ್ಲಾ ಎಂದು ಹೇಳಿದರು.

ಸಾಮಾಜಿಕ ಅಂತರ ಕಾಯ್ದುಕೊಂಡು ಪ್ರಯಾಣ ಮಾಡಬೇಕಿದ್ದು, ಈ ಹಿನ್ನೆಲೆಯಲ್ಲಿ ಪ್ರತಿ ಕಿಲೋಮೀಟರ್‌ಗೆ 22 ರೂಪಾಯಿ ಹೊರೆ ಬೀಳುತ್ತಿದೆ ಜತೆಗೆ ನೌಕರರಿಗೆ ಸಂಬಳ ಕೊಡುವಷ್ಟು  ಆದಾಯಕೂಡ ಸಂಸ್ಥೆಗೆ ಬರುತ್ತಿಲ್ಲ.   ಹೀಗಾಗಿ ಸರ್ಕಾರವೇ ಸಾರಿಗೆ ನೌಕರರ ಸಂಬಳ ನೀಡಬೇಕು. ವಿಷಯವಾಗಿ ಸಿಎಂ ಜತೆ ಮಾತುಕತೆ ನಡೆಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಇನ್ನು ಈ ಕಷ್ಟದ ಪರಿಸ್ಥಿತಿಯನ್ನು ನಿಭಾಯಿಸುವ ನಿಟ್ಟಿನಲ್ಲಿ ಸಾರಿಗೆ ಇಲಾಖೆಯ ಕೆಲ ಹುದ್ದೆಗಳನ್ನು ತೆಗೆದು ಹಾಕಿ ಅನಾವಶ್ಯಕ ಸಂಬಳಕ್ಕೆ ಕಡಿವಾಣ ಹಾಕಲಾಗುವುದು. ತೆಗೆದು ಹಾಕಿದ ಹುದ್ದೆಗಳನ್ನು ಬೇರೆ ಕಡೆಗೆ ಸ್ಥಳಾಂತರ ಮಾಡಿ ವೆಚ್ಚ ಕಡಿಮೆ ಮಾಡುಲಾಗುವುದು ಎಂದು ಹೇಳಿದರು.

ಇನ್ನು ಇಂದು ಬೆಂಗಳೂರಿನಲ್ಲಿ 75 ಹವಾನಿಯಂತ್ರಿತ ಬಸ್‌ಗಳನ್ನು ರಸ್ತೆಗೆ ಇಳಿಸಲಾಗಿದೆ.  ಜತೆಗೆ  ಎರಡು ದಿನಗಳಲ್ಲಿ ರಾಜ್ಯಾದ್ಯಂತ ಬಸ್ ಸಂಚಾರವನ್ನು ಈ ಹಿಂದಿನಂತೆ ಆರಂಭಿಸಲು ಚಿಂತನೆ ನಡೆಸಲಾಗಿದೆ. ಆದರೆ ರೆಡ್‌ಜೋನ್‌ಗಳಲ್ಲಿ ಬಸ್‌ ಓಡಿಸುವ ಬಗ್ಗೆ  ಯೋಚನೆ ಇಲ್ಲ ಎಂದು ವಿವರಿಸಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು