KKRTC ನೌಕರ ನಿಧನ ಪ್ರಕರಣ: ಸಹೋದರನಿಗೆ ಅನುಕಂಪದ ಉದ್ಯೋಗ ಪಡೆಯುವ ಹಕ್ಕಿದೆ- ಹೈಕೋರ್ಟ್ ತೀರ್ಪು

ಬೆಂಗಳೂರು: ಸರ್ಕಾರಿ ನೌಕರನ ಪತ್ನಿ, ಪತಿಗಿಂತ ಮೊದಲೇ ನಿಧನರಾಗಿ ಆಕೆಗೆ ಮಕ್ಕಳಿರಲಿಲ್ಲದಿದ್ದಾಗ ಹಾಗೂ ಆನಂತರದಲ್ಲಿ ಸರ್ಕಾರಿ ನೌಕರನೂ ನಿಧನರಾದಾಗ ಅಂತಹ ಪ್ರಕರಣಗಳಲ್ಲಿ ನೌಕರನ ಸಹೋದರರಿಗೆ ಅನುಕಂಪದ ಆಧಾರದಲ್ಲಿ ಉದ್ಯೋಗ ಪಡೆಯುವ ಹಕ್ಕಿದೆ ಎಂದು ಕರ್ನಾಟಕ ಹೈಕೋರ್ಟ್ ಆದೇಶಿಸಿದೆ.
ವಿಜಯಪುರದ ಮುದ್ದೇ ಬಿಹಾಳದ ಅರಸನಾಳ ಗ್ರಾಮದ ಮೃತ ಉದ್ಯೋಗಿ ವೀರೇಶ್ ಮಂಟಪ್ಪ ಲೋಳಸರ ಅವರ ತಾಯಿ ಮಾಂತವ್ವ ಹಾಗೂ ಸಹೋದರ ಸಂಗಣ್ಣ ಸಲ್ಲಿಸಿದ್ದ ಅರ್ಜಿಯನ್ನು ಮಾನ್ಯ ಮಾಡಿರುವ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ಪೀಠ, ಸಹೋದರ ಸಂಗಣ್ಣನಿಗೆ ನೌಕರಿ ನೀಡುವಂತೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (KKRTC) ಬಳ್ಳಾರಿ ವಿಭಾಗಕ್ಕೆ ಆದೇಶಿಸಿದೆ.
ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ ”ಎರಡನೇ ಅರ್ಜಿದಾರರ (ಸಹೋದರ) ಮನವಿ ಪರಿಗಣಿಸಿ, ಹನ್ನೆರಡು ವಾರಗಳ ಅವಧಿಯಲ್ಲಿ ಅವರ ಅರ್ಹತೆಗೆ ಅನುಗುಣವಾಗಿ ಸೂಕ್ತ ಹುದ್ದೆಗೆ ಅನುಕಂಪದ ಆಧಾರದ ಮೇಲೆ ಅವರನ್ನು ನೇಮಕ ಮಾಡಿಕೊಳ್ಳಬೇಕು ಎಂದು ನಿಗಮಕ್ಕೆ ನಿರ್ದೇಶಿಸಿತು. ಅಲ್ಲದೆ ಒಂದು ವೇಳೆ ಎರಡನೇ ಅರ್ಜಿದಾರರು ಅವರ ತಾಯಿಯನ್ನು ಸರಿಯಾಗಿ ನೋಡಿಕೊಳ್ಳದಿದ್ದರೆ ಆಕೆ ನೇಮಕ ಆದೇಶ ರದ್ದುಗೊಳಿಸುವಂತೆ ಕೋರಿ ಅರ್ಜಿ ಸಲ್ಲಿಸುವ ಸ್ವಾತಂತ್ರ್ಯ ಹೊಂದಿರಲಿದ್ದಾರೆ ಎಂದು ನ್ಯಾಯಪೀಠ ಆದೇಶಿಸಿದೆ.
ವೀರೇಶ್ ಮಂಟಪ್ಪ ಲೋಳಸರ ಅವರ ಪತ್ನಿ ಸುನಂದಾ 2022ರ ಏ.9ರಂದು ನಿಧನ ರಾಗಿದ್ದರು. ಅವರಿಗೆ ಮಕ್ಕಳಿರಲಿಲ್ಲ ಮತ್ತು ವೀರೇಶ್ ತಮ್ಮ ತಾಯಿ ಮತ್ತು ಸಹೋದರನನ್ನು ನೋಡಿಕೊಳ್ಳುತ್ತಿದ್ದರು. ಆದ್ದರಿಂದ, ತಾಯಿ ನೋಡಿಕೊಳ್ಳುತ್ತಿರುವ ಅವರ ಸಹೋದರನಿಗೆ ಅನುಕಂಪದ ಆಧಾರದ ಮೇಲೆ ನೇಮಕಾತಿ ಒದಗಿಸುವುದು ಸರಿಯಾಗಿಯೇ ಇದೆ ಎಂದು ನ್ಯಾಯಪೀಠ ಹೇಳಿದೆ.
ಅನುಕಂಪದ ಆಧಾರದ ಮೇಲೆ ನೇಮಕದ ಉದ್ದೇಶವು ಮೃತ ಉದ್ಯೋಗಿಯ ಕುಟುಂಬವನ್ನು ನೋಡಿಕೊಳ್ಳುವುದನ್ನು ಖಾತ್ರಿಪಡಿಸಿಕೊಳ್ಳುವುದಾಗಿದೆ ಮತ್ತು ಸಾವಿನಿಂದ ಉಂಟಾಗುವ ತುರ್ತು ಪರಿಸ್ಥಿತಿಗಳು ಕುಟುಂಬಕ್ಕೆ ಆರ್ಥಿಕ ಹೊರೆಯಾಗಬಾರದು ಎಂದು ನ್ಯಾಯ ಪೀಠ ಅಭಿಪ್ರಾಯಪಟ್ಟಿದೆ.
ಮೃತ ಉದ್ಯೋಗಿಯ ಸಂಗಾತಿಯು 2022ರ ಏ.9ರಂದು ಅವರಿಗಿಂತ ಮೊದಲೇ ನಿಧನರಾಗಿದ್ದರು ಮತ್ತು ಅವರಿಗೆ ಅನುಕಂಪದ ನೇಮಕ ಹಕ್ಕು ಮಂಡಿಸಲು ಯಾವುದೇ ಮಕ್ಕಳಿಲ್ಲ ಎಂಬುದು ವಾಸ್ತವ. ತಾಯಿ ಮತ್ತು ಸಹೋದರ ಒಟ್ಟಿಗೆ ವಾಸಿಸುತ್ತಿದ್ದಾರೆ ಮತ್ತು ಸಂಗಾತಿಯ ಮರಣದ ನಂತರ, ಮೃತ ಉದ್ಯೋಗಿ ತನ್ನ ತಾಯಿ ಮತ್ತು ಸಹೋದರ ಇಬ್ಬರನ್ನೂ ನೋಡಿಕೊಳ್ಳುತ್ತಿದ್ದರು ಎಂದು ನ್ಯಾಯಾಲಯ ಹೇಳಿದೆ.

ಈ ದೃಷ್ಟಿ ಕೋನದ ಹಿನ್ನೆಲೆಯಲ್ಲಿ ಎರಡನೇ ಪುತ್ರ ತಾಯಿ ನೋಡಿಕೊಳ್ಳುತ್ತಿರುವುದರಿಂದ ಅನುಕಂಪದ ಆಧಾರದ ಮೇಲೆ ನೇಮಕಾತಿಗಾಗಿ ಎರಡನೇ ಅರ್ಜಿದಾರರು ಸಲ್ಲಿಸಿರುವ ಅರ್ಜಿಯನ್ನು ಸರಿಯಾದ ದೃಷ್ಟಿಕೋನದಿಂದ ಪರಿಗಣಿಸಬೇಕಾಗುತ್ತದೆ ಎಂದು ಹೇಳಿರುವ ನ್ಯಾಯಪೀಠ ರಸ್ತೆ ಸಾರಿಗೆ ಸಂಸ್ಥೆಯ ನೀತಿಯ ಪ್ರಕಾರ, ಮೃತರು ವಿವಾಹಿತರಾಗಿದ್ದರೆ, ಪತ್ನಿ ಮತ್ತು ಮಕ್ಕಳನ್ನು ಹೊರತುಪಡಿಸಿ ಬೇರೆ ಯಾರಿಗೂ ಅನುಕಂಪದ ಹುದ್ದೆ ನೀಡಲಾಗದೆಂಬ ಕೆಕೆಆರ್ಟಿಸಿ ಪರ ವಕೀಲರ ವಾದ ಒಪ್ಪಲಾಗದು ಎಂದು ಹೇಳಿದೆ.
Related


You Might Also Like
KKRTC: ಲಾರಿಗೆ ಡಿಕ್ಕಿ ಹೊಡೆಯುವುದ ತಪ್ಪಿಸಲು ಹೋಗಿ ರಸ್ತೆಬದಿ ಕಂದಕಕ್ಕೆ ನುಗ್ಗಿd ಬಸ್- ತಪ್ಪಿದ ಭಾರಿ ಅನಾಹುತ
ವಿಭಾಗೀಯ ನಿಯಂತ್ರಣಾಧಿಕಾರಿಗಳ ಆದೇಶ ಪಾಲಿಸದ ಬೀದರ್ ಘಟಕ-1ರ ಡಿಎಂ ಬೀದರ್: ಎದುರಿಗೆ ಬಂದ ಲಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ...
BMTC: ಕರ್ತವ್ಯ ನಿರತ ಚಾಲಕರು ಮೊಬೈಲ್ ಬಳಸಿದರೆ ಗಂಭೀರ ಕೆಂಪು ಗುರುತಿನ ಪ್ರಕರಣ ದಾಖಲಿಸಿ- ತನಿಖಾ ಸಿಬ್ಬಂದಿಗೆ ಎಂಡಿ ಆದೇಶ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಚಾಲನಾ ಸಿಬ್ಬಂದಿಗಳು ಮಾರ್ಗದ ಮೇಲೆ ಕರ್ತವ್ಯ ನಿರ್ವಹಿಸುತ್ತಿದ್ದಾಗ ಮೊಬೈಲ್ ಮತ್ತು ಡಿಜಿಟಲ್ ಗ್ಯಾಜೆಟ್ಸ್ (Bluetooth, Earphone ಇತ್ಯಾದಿಗಳನ್ನು ಬಳಸಿದರೆ ಅವರ...
ಕೆಐಎಡಿಬಿ: ಭೂ ಸ್ವಾಧೀನ ಕುರಿತು ಕೈಗಾರಿಕಾ ಮಂತ್ರಿ ಎಂ.ಬಿ.ಪಾಟೀಲ್ ರೈತರ ನಿಯೋಗದ ಜತೆ ಚರ್ಚೆ- ರಾಮಲಿಂಗಾರೆಡ್ಡಿ
ಆನೇಕಲ್: ತಾಲೂಕಿನ ಭೂ ಸ್ವಾಧೀನ ವಿರೋಧಿ ಹೋರಾಟ ಸಮಿತಿಯ ರೈತರ ನಿಯೋಗದ ಜತೆ ಇಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಮಂತ್ರಿ ಎಂ.ಬಿ.ಪಾಟೀಲ ಅವರನ್ನು ಭೇಟಿಯಾಗಿ ಪ್ರಸ್ತುತ...
ದೇವನಹಳ್ಳಿ ಸರ್ಕಾರಿ ಶಾಲೆ ಕಿಟಕಿ ಛಾವಣಿ ಕುಸಿದು ವಿದ್ಯಾರ್ಥಿಗಳಿಗೆ ಗಾಯ ಪ್ರಕರಣ: ಆಯೋಗದ ಅಧ್ಯಕ್ಷ ನಾಗಣ್ಣಗೌಡ ಭೇಟಿ
ಗಾಯಗೊಂಡ ಮೂವರು ವಿದ್ಯಾರ್ಥಿಗಳ ಚಿಕಿತ್ಸಾ ವೆಚ್ಚ ಸರ್ಕಾರ ಭರಿಸಲಿದೆ ಬೆಂಗಳೂರು ಗ್ರಾಮಾಂತರ: ದೇವನಹಳ್ಳಿಯ ಕೋಟೆ ಬೀದಿಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಶಾಲೆ ಕಟ್ಟಡದ ಕಿಟಕಿ ಚಾವಣಿ...
NWKRTC: DA ಅರಿಯರ್ಸ್ ಬಗ್ಗೆ ಚರ್ಚಿಸಿ ಆದೇಶ ಮಾಡುವೆ-ಕೂಟದ ಪದಾಧಿಕಾರಿಗಳ ಜತೆ ವ್ಯವಸ್ಥಾಪಕ ನಿರ್ದೇಶಕರ ಚರ್ಚೆ
ಹುಬ್ಬಳ್ಳಿ: ಸಾರಿಗೆ ನೌಕರರ ಕೂಟದಿಂದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಲಯ ಮಟ್ಟದ ಕುಂದು ಕೊರತೆ ಬಗ್ಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಪ್ರಿಯಾಂಗಾ ಅವರ ಜತೆ...
ಗಣಪನ ವಿಸರ್ಜನೆಗೆ 41 ಕಲ್ಯಾಣಿಗಳು, 489 ಸಂಚಾರಿ ವಾಹನಗಳು ಸಜ್ಜು
ಬೆಂಗಳೂರು: ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಬಿಬಿಎಂಪಿ ವತಿಯಿಂದ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಗಣೇಶ ಮೂರ್ತಿಗಳ ವಿಸರ್ಜನೆಗಾಗಿ 41 ಕೆರೆ ಅಂಗಳದ ಶಾಶ್ವತ/ ತಾತ್ಕಾಲಿಕ ಕಲ್ಯಾಣಿಗಳು ಹಾಗೂ...
ರಸ್ತೆ ಅಗೆದೆಡೆ ಪುನರ್ ಸ್ಥಾಪನೆ ಮಾಡುವ ವೇಳಾಪಟ್ಟಿ ಕೊಡಿ: ಆಡಳಿತಗಾರ ತುಷಾರ್ ಗಿರಿನಾಥ್
ಬೆಂಗಳೂರು: ನಗರದಲ್ಲಿ ಜಲಮಂಡಳಿ ವತಿಯಿಂದ ರಸ್ತೆ ಅಗೆದ ಭಾಗಗಳ ಪುನರ್ ಸ್ಥಾಪನೆ ಮಾಡುವ ವೇಳಾಪಟ್ಟಿ ನೀಡಲು ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಆಡಳಿತಗಾರರಾದ ತುಷಾರ್...
ಆ.28ರಂದು ಕನಿಷ್ಠ ಪಿಂಚಣಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ EPS ಪಿಂಚಣಿದಾರರ ಬೃಹತ್ ಪ್ರತಿಭಟನೆ
ಬೆಂಗಳೂರು: ಕೇಂದ್ರ ಸರ್ಕಾರ ಮುಸ್ಸಂಜೆಯ ಇಳಿವಯಸ್ಸಿನಲ್ಲಿರುವ ಪ್ರಬುದ್ಧ ಇಪಿಎಸ್-95 ನಿವೃತ್ತರು ಕಳೆದೊಂದು ದಶಕದಿಂದ ದೇಶಾದ್ಯಂತ ನಡೆಸಿದ ಹೋರಾಟಕ್ಕೆ ಯಾವುದೇ ಪ್ರತಿಫಲ ಕೊಡದೆ ಉದ್ಧಟತನದಿಂದ ನಡೆದುಕೊಳ್ಳುತ್ತಿರುವುದಕ್ಕೆ ಸಮಸ್ತ ನಿವೃತ್ತರು...
ನ್ಯೂಡೆಲ್ಲಿ: ವಿವಿಧ ಬೇಡಿಕೆಗಳ ಈಡೇರಿಸದ ಕೇಂದ್ರ ಸರ್ಕಾರದ ವಿರುದ್ಧ ಮತ್ತೆ ಸಮರ ಸಾರಿದ ದೇಶದ ಅನ್ನದಾತರು
ನ್ಯೂಡೆಲ್ಲಿ: ದೇಶದ ರೈತರ ಬೃಹತ್ ರ್ಯಾಲಿ ಸೋಮವಾರ ದೆಹಲಿಯಲ್ಲಿ ನಡೆದು ಜಂತರ್ ಮಂತರ್ನಲ್ಲಿ ಸಮಾವೇಶಗೊಂಡಿತು. ಸಂಯುಕ್ತ ಕಿಸಾನ್ ಮೋರ್ಚಾ ರಾಜಕೀಯತರ ಸಂಘಟನೆಯ ಕರೆಯ ಮೇರೆಗೆ ಸಹಸ್ರಾರು ರೈತರು...