Please assign a menu to the primary menu location under menu

CrimeNEWSನಮ್ಮಜಿಲ್ಲೆ

ಐದುವರ್ಷದ ಪ್ರೀತಿ ಆತ್ಮಹತ್ಯೆಯಲ್ಲಿ ಅಂತ್ಯ

ಪ್ರೀತಿಗೆ ಮಾತ್ರ ಓಕೆ ಮದುವೆ ನೋ ಎನ್ನುತ್ತಿದ್ದ ಪ್ರಿಯಕರನ ನಡೆಗೆ ನೊಂದು ವಿಷ ಸೇವನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಪ್ರೀತಿಯ ಪಾಷದಲ್ಲಿ ಸಿಲುಕಿದ ಕಿರುತೆರೆ ನಟಿ ಪ್ರಿಯಕರ ಮದುವೆ ನಿರಾಕರಿಸಿದ್ದಕ್ಕೆ ಮನನೊಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ತಾವರೆಕೆರೆಯಲ್ಲಿ ನಡೆದಿದೆ.

ತಾವರೆಕೆರೆಯ ಕೃಷ್ಣಮೂರ್ತಿ ಲೇಔಟಿನ ನಿವಾಸಿ ಚಂದನಾ (29)  ಆತ್ಮಹತ್ಯೆ ಮಾಡಿಕೊಂಡವರು. ವಿಷ ಸೇವಿಸಿದ್ದ ಚಂದನಾ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತರಾಗಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಕನ್ನಡ ಕಿರುತೆರೆ, ಜಾಹೀರಾತು, ಚಲನಚಿತ್ರಗಳಲ್ಲಿ ನಟಿಸುತ್ತಿದ್ದರು. ಈ ನಡುವೆ ಐದು ವರ್ಷದ ಹಿಂದೆ ದಿನೇಶ್‌ ಎಂಬುವರ ಪರಿಚಯವಾಗಿದ್ದು, ಆತನ ಜತೆ ಪ್ರೇಮಾಂಕುರವಾಗಿದೆ. ಇದನ್ನೆ ಗಾಳವಾಗಿ ಮಾಡಿಕೊಂಡ ದಿನೇಶ್‌ ಚಂದನಾಳಿಂದ ಲಕ್ಷಾಂತರ ರೂ. ಪೀಕಿದ್ದಾನೆ. ನಂತರ ಈಕೆಯನ್ನು ನಿರ್ಲಕ್ಷ್ಯ ಮಾಡಿದ್ದಾನೆ. ಇದರಿಂದ ಬೇಸತ್ತ ಈಕೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ವಿಷ ಸೇವನೆಯ ಸೆಲ್ಫಿ ವಿಡಿಯೋ ಮಾಡಿರುವ ಚಂದನಾ ತಮ್ಮ ಪ್ರಿಯಕರ ದಿನೇಶ್ ಎಂಬುವರ ಮೇಲೆ ಆರೋಪ ಮಾಡಿದ್ದಾರೆ. ದಿನೇಶ್ ಸದ್ಯ ನಾಪತ್ತೆಯಾಗಿದ್ದಾನೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಐದು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಚಂದನಾ ವಾಸವಿದ್ದ ಬೆಂಗಳೂರು ಮನೆಗೆ ದಿನೇಶ್ ಆಗಾಗ ಬರುತ್ತಿದ್ದ. ಮದುವೆ ಪ್ರಸ್ತಾಪ ಬಂದಾಗ ಮಾತ್ರ ಒಲ್ಲೆ ಎನ್ನುತ್ತಿದ್ದ. ಲಕ್ಷಾಂತರ ದುಡ್ಡು ಪಡೆದಿದ್ದ ದಿನೇಶ್ ಮದುವೆ ಬಗ್ಗೆ ನಿರಾಕರಿಸುತ್ತಿರುವುದರಿಂದ ಅನುಮಾನಗೊಂಡ ಆಕೆ ಈ ಬಗ್ಗೆ ತಮ್ಮ ಕುಟುಂಬದವರೊಂದಿಗೆ ಈ ವಿಷಯವನ್ನು ತಿಳಿಸಿದ್ದಾರೆ.

ನಂತರ ಚಂದನಾ ಕುಟುಂಬಸ್ಥರು ಮದುವೆ ಪ್ರಸ್ತಾಪ ಮುಂದಿಟ್ಟುಕೊಂಡು ದಿನೇಶ್ ಮನೆಗೆ ಹೋಗಿದ್ದಾರೆ. ಆದರೆ, ದಿನೇಶ್ ತಾಯಿ ಗಾಯತ್ರಿ, ಮಾವ ದಯಾನಂದ ಎಂಬುವರು ಚಂದನಾಳ ನಡವಳಿಕೆ ಸರಿಯಿಲ್ಲ, ನಿಮ್ಮ ಹುಡುಗಿಯನ್ನು ಸರಿಯಾಗಿ ನೋಡಿಕೊಳ್ಳಿ ಎಂದು ಹೇಳಿ ಅವಮಾನ ಮಾಡಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಇದರಿಂದ ನೊಂದ ಚಂದನಾ ಈ ಬಗ್ಗೆ ದಿನೇಶ್ಗೆ ಪ್ರಶ್ನಿಸಿದ್ದಾರೆ. ಆದರೆ, ದಿನೇಶ್ ಕೊಟ್ಟ ಉತ್ತರ ಚಂದನಾಗೆ ತೃಪ್ತಿ ತಂದಿಲ್ಲ, ಇನ್ನು ಮಾತುಕತೆಯಿಂದ ಯಾವುದೇ ಪ್ರಯೋಜನವಾಗಿಲ್ಲ ಎಂದು ತೀವ್ರವಾಗಿ ನೋವಿನಲ್ಲಿ ಕಣ್ಣೀರಿಡುತ್ತಾ ಚಂದನಾ ವಿಷ ಸೇವಿಸಿದ್ದಾರೆ.

ದಿನೇಶ್, ಈತನ ಅಪ್ಪ, ಅಮ್ಮ, ಮಾವ ಹಾಗೂ ಮತ್ತೊಬ್ಬ ಕುಟುಂಬಸ್ಥರು ಸೇರಿ ಐವರ ವಿರುದ್ಧ ಸದ್ದುಗುಂಟೆ ಪಾಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿಸಲಾಗಿದೆ. ದುಡ್ಡು ಪಡೆದು ವಂಚನೆ, ಮದುವೆಯಾಗುವುದಾಗಿ ನಂಬಿಸಿ ಮೋಸ, ಆತ್ಮಹತ್ಯೆಗೆ ಪ್ರಚೋದನೆ ಆರೋಪದಡಿ ಈ ಐವರ ವಿರುದ್ಧ ಎಫ್ಐಆರ್ ದಾಖಲಾಗಿದೆ ಎಂದು ಚಂದನಾ ಅವರ ಮಾವ ಸಂತೋಷ್ ಹೇಳಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!
LATEST
ಚನ್ನರಾಯಪಟ್ಟಣ ರೈತ ನಿಯೋಗದಿಂದ ಸಿಎಂ ಭೇಟಿ: ಭೂ ಸ್ವಾಧೀನ ಕೈಬಿಡಲು ಮನವಿ KSRTC: ಟಿಸಿಗಳಿಂದ ಪ್ರತಿ ತಿಂಗಳು ಸಾವಿರ ರೂ. ಭಿಕ್ಷೆ ಬೇಡುತ್ತಿರುವ ಡಿಸಿ, ಡಿಟಿಒಗಳು..! ಇ-ಖಾತಾ ಕಾಲಮಿತಿಯೊಳಗೆ ಅಧಿಕಾರಿಗಳು ವಿಲೇಮಾಡಿ: ತುಷಾರ್ ಗಿರಿನಾಥ್ ಕನಿಷ್ಠ ಪಿಂಚಣಿ ಶೀಘ್ರ ಜಾರಿ: ಕಾರ್ಮಿಕ ಸಚಿವ ಮನ್ಸುಖ್ ಮಾಂಡವಿಯಾ ಭರವಸೆ ಸಾರಿಗೆ ನೌಕರರ ಕಾರ್ಮಿಕರು ಎಂದು ಸಂಬೋಧಿಸದಿದ್ದರೆ ಜಂಟಿಯವರಿಗೆ ತಿಂದದ್ದು ಜೀರ್ಣವಾಗುವುದಿಲ್ಲವೇ: ಒಕ್ಕೂಟ ಕಿಡಿ ಸರ್ಕಾರಿ ವಾಹನ ಚಾಲಕರಿಗೆ ಕನಿಷ್ಠ ವೇತನ ₹34,100 ನಿಗದಿಗೊಳಿಸಿ ಸರ್ಕಾರ ಆದೇಶ ಇಂದಿನಿಂದ ನಿವೃತ್ತ ಸಾರಿಗೆ ನೌಕರರಿಗೆ ಉಪಧನ, ನಿವೃತ್ತಿ ಗಳಿಕೆ ರಜೆ ನಗದೀಕರಣ ಪಾವತಿಗೆ ಎಂಡಿ ಆದೇಶ BMTC: ಡಿ.24ರಂದು ನೌಕರರಿಗೆ 7 ತಿಂಗಳ ತುಟ್ಟಿಭತ್ಯೆ ಹಿಂಬಾಕಿ ಪಾವತಿಗೆ ಎಂಡಿ ಆದೇಶ KKRTC ಸಂಸ್ಥೆಯ ಸಿಬ್ಬಂದಿಗಳಿಗೆ ಉಚಿತ ಒಂದು ಕೋಟಿ ರೂ. ಅಪಘಾತ ವಿಮೆ ಜತೆಗೆ ನೌಕರರಿಗೆ ಸಿಗುವ ಇತರ ಸೌಲಭ್ಯಗಳು KKRTC: ನಗದು ರಹಿತ ಚಿಕಿತ್ಸೆಗಾಗಿ ಸಿಬ್ಬಂದಿಗಳ ವೈಯಕ್ತಿಕ, ಅವಲಂಬಿತರ ಮಾಹಿತಿ ಸಂಗ್ರಹಿಸಿ- ಅಧಿಕಾರಿಗಳಿಗೆ ಆದೇಶ