Please assign a menu to the primary menu location under menu

NEWSನಮ್ಮರಾಜ್ಯ

ರಮೇಶ್ ಜಾರಕಿಹೊಳಿಗೆ ಬೆಳಗಾವಿ, ಗೋಪಾಲಯ್ಯಗೆ ಹಾಸನ ಜಿಲ್ಲಾ ಉಸ್ತುವಾರಿ

ಮಹೇಶ್ ಕುಮಠಹಳ್ಳಿಗೆ ಕರ್ನಾಟಕ ಕೊಳಗೇರಿ ಜವಾಬ್ದಾರಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಬೆಳಗಾವಿ ಜಿಲ್ಲೆಯ ಉಸ್ತುವಾರಿ ಸಚಿವರನ್ನಾಗಿ ಮತ್ತು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಗೋಪಾಲಯ್ಯ ಅವರನ್ನು  ಹಾಸನ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.

ಈ ಮೊದಲು ಹಾಸನ ಜಿಲ್ಲಾ ಉಸ್ತುವಾರಿ ಜವಾಬ್ದಾರಿಯನ್ನು ಜೆ.ಸಿ.ಮಾಧುಸ್ವಾಮಿ  ಮತ್ತು ಬೆಳಗಾವಿ ಜಿಲ್ಲೆಯ ಉಸ್ತುವಾರಿಯನ್ನು ಜಗದೀಶ ಶೆಟ್ಟರ್‌ ಅವರು ಹೊತ್ತಿದ್ದರು. ರಾಜಕೀಯ ದಿಢೀರ್‌ ಬೆಳವಣಿಗೆಯಲ್ಲಿ ಇಂದು  ಕೆ.ಗೋಪಾಲಯ್ಯ ಮತ್ತು ರಮೇಶ್‌ ಜಾರಕಿಹೊಳಿ ಅವರಿಗೆ ವಹಿಸಲಾಗಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಬೆಳಗಾವಿ ಉಸ್ತುವಾರಿ ಸ್ಥಾನಕ್ಕಾಗಿ ಈ ಮೊದಲು ಶಶಿಕಲಾ ಜೊಲ್ಲೆ, ಲಕ್ಷ್ಮಣ್ ಸವದಿ ಹಾಗೂ ರಮೇಶ್ ಜಾರಕಿಹೊಳಿ ನಡುವೆ ಪೈಪೋಟಿ ಉಂಟಾಗಿದ್ದರಿಂದ ಮೂರನೇ ವ್ಯಕ್ತಿಯಾದ ಜಗದೀಶ್ ಶೆಟ್ಟರ್ ಅವರಿಗೆ ನೀಡಿ ಪೈಪೋಟಿ ನಡೆಯದಂತೆ ಮುಖ್ಯಮಂತ್ರಿ ಯಡಿಯೂರಪ್ಪ ತಡೆದಿದ್ದರು. ಇದೀಗ ಅನಿವಾರ್ಯವಾಗಿ ರಮೇಶ್ ಜಾರಕಿಹೊಳಿಗೆ ಬೆಳಗಾವಿ ಉಸ್ತುವಾರಿ ನೀಡಿದ್ದಾರೆ.

ಅದರಂತೆ ಹಾಸನ ಉಸ್ತುವಾರಿಯನ್ನು ಬಿ.ಗೋಪಾಲಯ್ಯ ಅವರಿಗೆ ನೀಡಲಾಗಿದೆ. ಗೋಪಾಲಯ್ಯ ಈ ಹಿಂದೆ ಜೆಡಿಎಸ್‌ನಲ್ಲಿ ಇದ್ದರು. ಹಾಸನ ಜಿಲ್ಲೆ ಜೆಡಿಎಸ್‌ನ ಭದ್ರಕೋಟೆ. ಅಲ್ಲಿ ದೇವೇಗೌಡರ ಕುಟುಂಬವನ್ನು ಎದುರಿಸಲು ಗೋಪಾಲಯ್ಯ ಅವರಿಗೆ ಜಿಲ್ಲಾ ಉಸ್ತುವಾರಿ ಸ್ಥಾನ ನೀಡಲಾಗಿದೆ ಎಂದು ವ್ಯಾಖ್ಯಾನಿಸಲಾಗುತ್ತಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಈ ಮಧ್ಯೆ ಶಾಸಕ ಮಹೇಶ್ ಕುಮಠಹಳ್ಳಿಗೆ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ಸರ್ಕಾರದ ಆದೇಶ ಹೊರಡಿಸಿದೆ.

ಇನ್ನು ಇತ್ತೀಚೆಗೆ ಆರಂಭವಾಗಿರುವ ಬಿಜೆಪಿಯೊಳಗಿ ಬಂಡಾಯವನ್ನು ಶಮನಗೊಳಿಸುವಲ್ಲಿ ಈ ಮೂಲಕ ಹೊಸ ತಂತ್ರವನ್ನು ಸಿಎಂ ಹೆಣೆಯುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಮಂಗಳವಾರ ನಡೆದ ಈ ದಿಢೀರ್‌ ಬೆಳವಣಿಗೆಯನ್ನು ಗಮನಿಸಿದರೆ ಉತ್ತರ ಭಾಗದ ಬಿಜೆಪಿ ಶಾಸಕರು ಸಿಎಂ ವಿರುದ್ಧ ಅಸಮಾಧಾನಗೊಂಡು ಪರ್ಯಾಯ  ನಾಯಕರನ್ನು ಹುಟ್ಟುಹಾಕಲು ಹೊರಟಿರುವುದಕ್ಕೆ ಕೊಕ್ಕೆ ಹಾಕುವ ಉದ್ದೇಶ ಇದೆಯೇ ಎಂಬುದು ಪಕ್ಷದೊಳಗಿನ ಕುದಿ ಮೌನಕ್ಕೆ ಸಾಕ್ಷಿ ಎಂಬಂತ್ತಿದೆ. ಈ ಬಗ್ಗೆ ಮುಂದಿನ ದಿನಗಳಲ್ಲಿ ಏನಾಗುವುದೋ ಎಂಬುದನ್ನು ಕಾದು ನೋಡಬೇಕಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!
LATEST
ಕನಿಷ್ಠ ಪಿಂಚಣಿ ಶೀಘ್ರ ಜಾರಿ: ಕಾರ್ಮಿಕ ಸಚಿವ ಮನ್ಸುಖ್ ಮಾಂಡವಿಯಾ ಭರವಸೆ ಸಾರಿಗೆ ನೌಕರರ ಕಾರ್ಮಿಕರು ಎಂದು ಸಂಬೋಧಿಸದಿದ್ದರೆ ಜಂಟಿಯವರಿಗೆ ತಿಂದದ್ದು ಜೀರ್ಣವಾಗುವುದಿಲ್ಲವೇ: ಒಕ್ಕೂಟ ಕಿಡಿ ಸರ್ಕಾರಿ ವಾಹನ ಚಾಲಕರಿಗೆ ಕನಿಷ್ಠ ವೇತನ ₹34,100 ನಿಗದಿಗೊಳಿಸಿ ಸರ್ಕಾರ ಆದೇಶ ಇಂದಿನಿಂದ ನಿವೃತ್ತ ಸಾರಿಗೆ ನೌಕರರಿಗೆ ಉಪಧನ, ನಿವೃತ್ತಿ ಗಳಿಕೆ ರಜೆ ನಗದೀಕರಣ ಪಾವತಿಗೆ ಎಂಡಿ ಆದೇಶ BMTC: ಡಿ.24ರಂದು ನೌಕರರಿಗೆ 7 ತಿಂಗಳ ತುಟ್ಟಿಭತ್ಯೆ ಹಿಂಬಾಕಿ ಪಾವತಿಗೆ ಎಂಡಿ ಆದೇಶ KKRTC ಸಂಸ್ಥೆಯ ಸಿಬ್ಬಂದಿಗಳಿಗೆ ಉಚಿತ ಒಂದು ಕೋಟಿ ರೂ. ಅಪಘಾತ ವಿಮೆ ಜತೆಗೆ ನೌಕರರಿಗೆ ಸಿಗುವ ಇತರ ಸೌಲಭ್ಯಗಳು KKRTC: ನಗದು ರಹಿತ ಚಿಕಿತ್ಸೆಗಾಗಿ ಸಿಬ್ಬಂದಿಗಳ ವೈಯಕ್ತಿಕ, ಅವಲಂಬಿತರ ಮಾಹಿತಿ ಸಂಗ್ರಹಿಸಿ- ಅಧಿಕಾರಿಗಳಿಗೆ ಆದೇಶ ಹೈಕೋರ್ಟ್‌ ಆದೇಶದ ಬೆನ್ನಲ್ಲೇ ದಾವಣಗೆರೆಯಲ್ಲಿ ಪೊಲೀಸರಿಂದ ಸಿ.ಟಿ.ರವಿ ಬಿಡುಗಡೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ: ಮಂಡ್ಯಕ್ಕೆ ಆಗಮಿಸಿದ ಸಮ್ಮೇಳನಾಧ್ಯಕ್ಷರಿಗೆ ಸ್ವಾಗತ ಉತ್ತಮ ಆಡಳಿತ ಸಪ್ತಾಹ: ಹಿರಿಯ ನಾಗರಿಕರಿಗೆ ಗುರುತಿನ ಚೀಟಿ ವಿತರಿಸಿದ ಡಿಸಿ