Please assign a menu to the primary menu location under menu

NEWSನಮ್ಮರಾಜ್ಯ

ಸಚಿವಾಲಯದಲ್ಲಿ “ಇ-ಆಫೀಸ್” ಮೂಲಕ ಕಡತ ನಿರ್ವಹಣೆ  ಕಡ್ಡಾಯ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಚಿವಾಲಯದ ಎಲ್ಲಾ ಕಚೇರಿಗಳಲ್ಲಿ  ಜೂನ್ 10 ರಿಂದ ಜಾರಿಗೆ ಬರುವಂತೆ “ಇ-ಆಫೀಸ್”ಅನ್ನು ಅನುಷ್ಠಾನಗೊಳಿಸಲಾಗಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ಅದೇ ರೀತಿ ‘ಇ-ಆಫೀಸ್” ತಂತ್ರಾಶವನ್ನು ಬಳಸಿ 1.11.2019 ರಿಂದ ಜಾರಿಗೆ ಬರುವಂತೆ ನನ್ನ ಕಚೇರಿಯಿಂದ ಸಚಿವಾಲಯದ ಎಲ್ಲಾ ಇಲಾಖೆಗಳು/ಅಧೀನ ಸಂಸ್ಥೆಗಳಿಗೆ “ಇ-ಆಫೀಸ್” ಮೂಲಕವೇ ವ್ಯವಹರಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ರಾಜ್ಯ ಮಟ್ಟದ ಎಲ್ಲಾ ಇಲಾಖೆಗಳ ಮುಖ್ಯಸ್ಥರ ಕಚೇರಿ, ಎಲ್ಲಾ ಪ್ರಾದೇಶಿಕ ಆಯುಕ್ತರ ಕಚೇರಿ, ಜಿಲ್ಲಾಧಿಕಾರಿಗಳ, ಜಿಲ್ಲಾ ಪಂಚಾಯಿತಿ, ಪೊಲೀಸ್ ವರಿಷ್ಠಾಧಿಕಾರಿಗಳ,  ಉಪ ಅರಣ್ಯ ಸಂರಕ್ಷಣಾಧಿಕಾರಿ (ಪ್ರಾದೇಶಿಕ) ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ (ಸಾಮಾಜಿಕ)ಗಳ ಕಚೇರಿಗಳಲ್ಲಿ  ಜೂನ್ 1 ರಿಂದ ಜಾರಿಗೆ ಬರುವಂತೆ “ಇ-ಅಫೀಸ್”ಅನ್ನು ಜಾರಿಗೆ ತರಲಾಗಿದೆ ಎಂದರು.

ಕೊರೊನಾ ಸೋಂಕು ದಿನದಿಂದ ದಿನ ಏರಿಕೆಯಾಗುತ್ತಿರುವುದರಿಂದ ಇನ್ನು ಮುಂದೆ ಕಡತಗಳನ್ನು ಭೌತಿಕ ರೂಪದಲ್ಲಿ ಸಲ್ಲಿಸುವ ಬದಲಾಗಿ ನನ್ನ ಕಚೇರಿಗೆ ಇ-ಅಫೀಸ್” ಮೂಲಕ ಮಾತ್ರ ಕಡತ ಮತ್ತು ಪತ್ರಗಳನ್ನು ಸಲ್ಲಿಸಬೇಕು ಹಾಗೂ ಎಲ್ಲಾ ಸಚಿವರು ನಿಮ್ಮ ಕಚೇರಿಗಳಲ್ಲಿ “ಇ-ಆಫೀಸ್” ತಂತ್ರಾಶವನ್ನು ಅನುಷ್ಠಾನಗೊಳಿಸಿ ಎಲ್ಲ ಕಡತ ಹಾಗೂ ಪತ್ರಗಳ ಈ ತಂತ್ರಾಂಶದ ಮೂಲಕ ನಿರ್ವಹಿಸಲು ಅಗತ್ಯ ಕ್ರಮ ವಹಿಸುವಂತೆ ಎಲ್ಲಾ ಸಚಿವರು ಮತ್ತು ಮುಖ್ಯ ಕಾರ್ಯದರ್ಶಿಗಳು ಸೂಚನೆ ನೀಡಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!
LATEST
ಕನಿಷ್ಠ ಪಿಂಚಣಿ ಶೀಘ್ರ ಜಾರಿ: ಕಾರ್ಮಿಕ ಸಚಿವ ಮನ್ಸುಖ್ ಮಾಂಡವಿಯಾ ಭರವಸೆ ಸಾರಿಗೆ ನೌಕರರ ಕಾರ್ಮಿಕರು ಎಂದು ಸಂಬೋಧಿಸದಿದ್ದರೆ ಜಂಟಿಯವರಿಗೆ ತಿಂದದ್ದು ಜೀರ್ಣವಾಗುವುದಿಲ್ಲವೇ: ಒಕ್ಕೂಟ ಕಿಡಿ ಸರ್ಕಾರಿ ವಾಹನ ಚಾಲಕರಿಗೆ ಕನಿಷ್ಠ ವೇತನ ₹34,100 ನಿಗದಿಗೊಳಿಸಿ ಸರ್ಕಾರ ಆದೇಶ ಇಂದಿನಿಂದ ನಿವೃತ್ತ ಸಾರಿಗೆ ನೌಕರರಿಗೆ ಉಪಧನ, ನಿವೃತ್ತಿ ಗಳಿಕೆ ರಜೆ ನಗದೀಕರಣ ಪಾವತಿಗೆ ಎಂಡಿ ಆದೇಶ BMTC: ಡಿ.24ರಂದು ನೌಕರರಿಗೆ 7 ತಿಂಗಳ ತುಟ್ಟಿಭತ್ಯೆ ಹಿಂಬಾಕಿ ಪಾವತಿಗೆ ಎಂಡಿ ಆದೇಶ KKRTC ಸಂಸ್ಥೆಯ ಸಿಬ್ಬಂದಿಗಳಿಗೆ ಉಚಿತ ಒಂದು ಕೋಟಿ ರೂ. ಅಪಘಾತ ವಿಮೆ ಜತೆಗೆ ನೌಕರರಿಗೆ ಸಿಗುವ ಇತರ ಸೌಲಭ್ಯಗಳು KKRTC: ನಗದು ರಹಿತ ಚಿಕಿತ್ಸೆಗಾಗಿ ಸಿಬ್ಬಂದಿಗಳ ವೈಯಕ್ತಿಕ, ಅವಲಂಬಿತರ ಮಾಹಿತಿ ಸಂಗ್ರಹಿಸಿ- ಅಧಿಕಾರಿಗಳಿಗೆ ಆದೇಶ ಹೈಕೋರ್ಟ್‌ ಆದೇಶದ ಬೆನ್ನಲ್ಲೇ ದಾವಣಗೆರೆಯಲ್ಲಿ ಪೊಲೀಸರಿಂದ ಸಿ.ಟಿ.ರವಿ ಬಿಡುಗಡೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ: ಮಂಡ್ಯಕ್ಕೆ ಆಗಮಿಸಿದ ಸಮ್ಮೇಳನಾಧ್ಯಕ್ಷರಿಗೆ ಸ್ವಾಗತ ಉತ್ತಮ ಆಡಳಿತ ಸಪ್ತಾಹ: ಹಿರಿಯ ನಾಗರಿಕರಿಗೆ ಗುರುತಿನ ಚೀಟಿ ವಿತರಿಸಿದ ಡಿಸಿ