CRIMENEWSಸಿನಿಪಥ

ವಸತಿ ಸಚಿವ ಜಮೀರ್ ಅಹ್ಮದ್ ಖಾನ್  ಅಕ್ರಮ ಆಸ್ತಿ ಗಳಿಕೆ ಪ್ರಕರಣ: ನಟಿ ರಾಧಿಕಾ ವಿಚಾರಣೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ನಟಿ ರಾಧಿಕಾ ಕುಮಾರಸ್ವಾಮಿ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

ಎರಡು ಕೋಟಿ ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ನಟಿ ರಾಧಿಕಾ ಕುಮಾರಸ್ವಾಮಿ ಅವರಿಗೆ ಮೊದಲೇ ನೋಟಿಸ್ ನೀಡಿದ್ದ ಅಧಿಕಾರಿಗಳು ಅವರನ್ನು ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿಕೊಂಡಿದ್ದಾರೆ.

ಇನ್ನು ಹಣಕಾಸು ವ್ಯವಹಾರ ಬಗ್ಗೆ ಸಿನಿಮಾ ನಿರ್ಮಾಣದಿಂದ ಬಂದ ಹಣವನ್ನು ಜಮೀರ್ ಅಹ್ಮದ್ ಖಾನ್ ಅವರಿಗೆ ನೆರವು ನೀಡಲಾಗಿದೆ ಎಂದು ಲೋಕಾಯುಕ್ತ ತನಿಖೆ ವೇಳೆ ಬೆಳಕಿಗೆ ಬಂದಿದೆ.

ಅಲ್ಲದೆ ಈ ಬಗ್ಗೆ ವಿವರಣೆ ನೀಡುವಂತೆ ಲೋಕಾಯುಕ್ತ ಪೊಲೀಸರು ರಾಧಿಕಾ ಅವರಿಗೆ ನೋಟಿಸ್ ನೀಡಿದ್ದರು. ನೋಟಿಸ್ ನೀಡಿದ ಹಿನ್ನೆಲೆಯಲ್ಲಿ ಕಳೆದ ತಿಂಗಳು ರಾಧಿಕಾ ವಿಚಾರಣೆಗೆ ಹಾಜರಾಗಿದ್ದರು. ಅವರಿಗೆ ಹಣ ನೀಡಿದ ಬಗ್ಗೆ ಸೂಕ್ತ ದಾಖಲೆಗಳನ್ನು ಒದಗಿಸಲು ಸೂಚನೆ ನೀಡಲಾಗಿತ್ತು.

ಯಶ್ ಅಭಿನಯದ ಲಕ್ಕಿ ಸಿನಿಮಾ ನಿರ್ಮಾಣ ಮಾಡಿದ್ದ ರಾಧಿಕಾ, ಈ ವೇಳೆ ಜಮೀರ್ ಅಹ್ಮದ್ ಖಾನ್​ ಜತೆಗೆ ಹಣಕಾಸು ವ್ಯವಹಾರ ನಡೆಸಿರುವುದು ಪತ್ತೆ ಆಗಿತ್ತು. ಹೀಗಾಗಿ ಈ ಹಣಕಾಸು ವ್ಯವಹಾರದ ಬಗ್ಗೆ ತನಿಖಾಧಿಕಾರಿ ಬಳಿ‌ ರಾಧಿಕಾ ಅವರು ನೀಡಿದ್ದ ಹೇಳಿಕೆ ದಾಖಲಿಸಲಾಗಿದೆ.

Megha
the authorMegha

Leave a Reply

error: Content is protected !!
Latest news
KSRTC: ಪಲ್ಲಕ್ಕಿಯಲ್ಲಿ ಆಕಸ್ಮಿಕ ಬೆಂಕಿ- ಧಗಧಗಿಸಿದ ಬಸ್‌- ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ KSRTC ಕಡೂರು: ಘಟಕದಲ್ಲೊಬ್ಬಳು ಟಾರ್ಚರ್‌ ಟಿಸಿ- ನೌಕರರಿಗೆ ಮಾನಸಿಕ ಕಿರುಕುಳ- ರಜೆ ಬದಲು ಗೈರು ತೋರಿಸುವ ನಟ ಭಯಂಕರಿ! EPS ಪಿಂಚಣಿದಾರರ 100ನೇ ಮಾಸಿಕ, ಶತದಿನೋತ್ಸವದಲ್ಲಿ ಮುಸ್ಸಂಜೆಯ ತರುಣರ ಸಂಭ್ರಮ KSRTC: ಫ್ರೀಡಂ ಪಾರ್ಕ್‌ನಲ್ಲಿ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿಗೆ ಆಗ್ರಹಿಸಿ ಸಾರಿಗೆ ನೌಕರರ ಪ್ರತಿಭಟನೆ- ಸರ್ಕಾರ... ಗೆದ್ದ3ವರ್ಷದ ಬಳಿಕ ಶಾಸಕರಾದ ಜೀವರಾಜ್: ಅಧಿಕಾರಿಗಳ ಎಡವಟ್ಟಿಗೆ ಸೋತರು 3ವರ್ಷ ಶಾಸಕರಾಗಿದ್ದ ರಾಜೇಗೌಡ KSRTC: ಇಂದು ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡಲು ಆಗ್ರಹಿಸಿ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KSRTC: ನಾಳೆ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡದ ಸರ್ಕಾರದ ವಿರುದ್ಧ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KKRTC: ನೋಡಿ ಎಂಡಿ ಅವರೇ ನಿಮ್ಮ ಸಂಸ್ಥೆಯಲ್ಲಿ ಚಾಲನಾ ಸಿಬ್ಬಂದಿಗಳು ಮೇ 1ರಂದು ರಜೆ ತೆಗೆದುಕೊಂಡರೆ ಆಬ್ಸೆಂಟ್‌ ಹಾಕುವ ... ಪ್ರಾಮಾಣಿಕತೆ ಮೆರೆದ KSRTC ಸಿಬ್ಬಂದಿ - ಆಭರಣ ಅಡವಿಟ್ಟು ತಂದಿದ್ದ ಹಣ ಕಳೆದು ಕೊಂಡ ಪ್ರಯಾಣಿಕನಿಗೆ ಮರಳಿ ಕೊಟ್ಟ ನೌಕರರ... KSRTC: ಚಾಲನಾ ಸಿಬ್ಬಂದಿ ವಿರುದ್ಧ ಮೆಮೊ ನೀಡುವುದಕಷ್ಟೇ ತಮ್ಮ ಕಾರ್ಯ ವ್ಯಾಪ್ತಿಯ ಸೀಮಿತಗೊಳಿಸಿಕೊಂಡ ತನಿಖಾಧಿಕಾರಿಗಳು?...