Breaking NewsNEWSನಮ್ಮರಾಜ್ಯ

ಜೂ.3ರಂದು ಕರ್ನಾಟಕದಲ್ಲಿ ಕೊರೊನಾ ರೌದ್ರನರ್ತನ, 267 ಮಂದಿಗೆ ಪಾಸಿಟಿವ್‌ ದೃಢ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮಹಾಮಾರಿ ತನ್ನ ರೌದ್ರನರ್ತನ ಮುಂದುವರಿಸಿದ್ದು, ಇಂದು 267 ಮಂದಿಯನ್ನು ಸುತ್ತಿಕೊಂಡಿದೆ. ಈ ಮೂಲಕ ರಾಜ್ಯದಲ್ಲಿ 4063ಕ್ಕೆ ಏರಿಕೆ ಕಂಡಿದೆ. ಜತೆಗೆ ಇಂದು ದಾವಣಗೆರೆಯಲ್ಲಿ ಒಬ್ಬರು ಕೊರೊನಾಗೆ ಬಲಿಯಾಗಿದ್ದಾರೆ.

 ಇಂದು  ಕಲಬುರಗಿ ಮತ್ತೆ ಶತಕಬಾರಿದ್ದು 105 ಮಂದಿಗೆ ಕೊರೊನಾ  ಸೋಂಕು ತಗುಲಿದೆ. ಉಡುಪಿ 62, ರಾಯಚೂರು 35, ಬೆಂಗಳೂರು 20, ಮಂಡ್ಯ 13, ಯಾದಗಿರಿ 9, ವಿಜಯಪುರ 6, ದಾವಣಗೆರೆ 3, ದಕ್ಷಿಣ ಕನ್ನಡ, ಮೈಸೂರು, ಬಾಗಲಕೋಟೆ, ಶಿವಮೊಗ್ಗ ಮತ್ತು ಕೋಲಾರದಲ್ಲಿ ತಲಾ ಎರಡು, ಬಳ್ಳಾರಿ, ಧಾರವಾಡ, ಹಾಸನ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ತಲಾ ಒಂದೊಂದು ಪ್ರಕರಣ ಇಂದು ಪತ್ತೆಯಾಗಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಈವರೆಗೆ ರಾಜ್ಯದಲ್ಲಿ ಕೊರೊನಾದಿಂದ ಅಸುನೀಗಿದವರ ಸಂಖ್ಯೆ 55 ಕ್ಕೆ ಏರಿಕೆ ಆಗಿದೆ. (ಇದರಲ್ಲಿ ಎರಡು ಅನ್ಯಕಾರಣದಿಂದ ಬಲಿಯಾಗಿದ್ದಾರೆ). ಇನ್ನು 4063 ಮಂದಿಗೆ ಈವರೆಗೆ ಕೊರೊನಾ ಪಾಸಿಟಿವ್‌ ಇರುವುದು ದೃಢಪಟ್ಟಿದ್ದು, ಅದರಲ್ಲಿ 1514 ಮಂದಿ ಗುಣಮುಖರಾಗಿ ಮನೆಗೆ ಮರಳಿದ್ದಾರೆ. 2494 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ದೇಶದಲ್ಲಿ 208,800 ಕ್ಕೇರಿದ ಸೋಂಕಿತರ ಸಂಖ್ಯೆ
ಇನ್ನು ದೇಶದಲ್ಲಿ ಈವರೆಗೆ 208,800 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. 5,834 ಮಂದಿ ಮೃತಪಟ್ಟಿದ್ದಾರೆ. 100,602 ಮಂದಿ ರೋಗಮುಕ್ತರಾಗಿದ್ದಾರೆ. ಪ್ರಪಂಚಾದ್ಯಂತ ಈವರೆಗೆ 6,484,630 ಜನರಲ್ಲಿ ಸೋಂಕು ಇರುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಖಚಿತಪಡಿಸಿದೆ. ಇನ್ನು 383,109 ಜನರು ಮೃತಪಟ್ಟಿದ್ದಾರೆ 3,089,845 ಮಂದಿ ರೋಗದಿಂದ ಮುಕ್ತಗೊಂಡಿದ್ದಾರೆ. view by country

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ