NEWSದೇಶ-ವಿದೇಶನಮ್ಮರಾಜ್ಯ

ಜೂ.4-ರಾಜ್ಯದಲ್ಲಿ 257 ಕೊರೊನಾ ಪಾಸಿಟಿವ್,‌ 4 ಮಂದಿ ಬಲಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮಹಾಮಾರಿ ತನ್ನ ರೌದ್ರನರ್ತನ ಮುಂದುವರಿಸಿದ್ದು, ಇಂದು 257 ಮಂದಿಯಲ್ಲಿ ಕೊರೊನಾ ಪಾಸಿಟಿವ್‌ ದೃಢಪಟ್ಟಿದ್ದು,  ನಾಲ್ವರು ಬಲಿಯಾಗಿದ್ದಾರೆ.

ಬೆಂಗಳೂರಿನಲ್ಲಿ ಇಬ್ಬರು, ರಾಯಚೂರಿನಲ್ಲಿ ಇಬ್ಬರು ಕೊರೊನಾಗೆ ಬಲಿಯಾಗಿದ್ದು, ಈ ಮೂಲಕ ಒಟ್ಟು ರಾಜ್ಯದಲ್ಲಿ ಕೊರೊನಾದಿಂದ ಅಸುನೀಗಿದವರ ಸಂಖ್ಯೆ 59 ಕ್ಕೆ ಏರಿಕೆ ಆಗಿದೆ. (ಇದರಲ್ಲಿ ಎರಡು ಅನ್ಯಕಾರಣದಿಂದ ಬಲಿಯಾಗಿದ್ದಾರೆ).

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

 ಇಂದು ಉಡುಪಿ ಜಿಲ್ಲೆಯಲ್ಲಿ92 ಮಂದಿಗೆ ಪಾಸಿಟಿವ್‌ ಬರುವ ಮೂಲಕ  ಅತ್ಯಂತ ಹೆಚ್ಚು ಸೋಂಕಿತರು ಪತ್ತೆಯಾಗಿದ್ದು, ರಾಯಚೂರು 88, ಬೆಂಗಳೂರು 9, ಮಂಡ್ಯ 15,  ಹಾಸನ 15, ದಾವಣಗೆರೆ 13, ಬೆಳಗಾವಿ 12, ದಕ್ಷಿಣ ಕನ್ನಡ 4, ಗದಗ ಮತ್ತು ಚಿಕ್ಕಬಳ್ಳಾಪುರದಲ್ಲಿ ತಲಾ 2, ವಿಜಯಪುರ, ಮೈಸೂರು, ತುಮಕೂರು, ಹಾವೇರಿ ಮತ್ತು ಬಳ್ಳಾರಿಯಲ್ಲಿ ತಲಾ ಒಂದೊಂದು ಪ್ರಕರಣ ಇಂದು ಪತ್ತೆಯಾಗಿದೆ.

ಇನ್ನು ರಾಜ್ಯದಲ್ಲಿ 4,320 ಮಂದಿಗೆ ಈವರೆಗೆ ಕೊರೊನಾ ಪಾಸಿಟಿವ್‌ ಇರುವುದು ದೃಢಪಟ್ಟಿದ್ದು, ಅದರಲ್ಲಿ 1,610  ಮಂದಿ ಗುಣಮುಖರಾಗಿ ಮನೆಗೆ ಮರಳಿದ್ದಾರೆ. 2,653 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ದೇಶದಲ್ಲಿ 217,967 ಕ್ಕೇರಿದ ಸೋಂಕಿತರ ಸಂಖ್ಯೆ
ಇನ್ನು ದೇಶದಲ್ಲಿ ಈವರೆಗೆ 217,967  ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. 6,094 ಮಂದಿ ಮೃತಪಟ್ಟಿದ್ದಾರೆ. 104,371 ಮಂದಿ ರೋಗಮುಕ್ತರಾಗಿದ್ದಾರೆ. ಪ್ರಪಂಚಾದ್ಯಂತ ಈವರೆಗೆ 6,607,778  ಜನರಲ್ಲಿ ಸೋಂಕು ಇರುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಖಚಿತಪಡಿಸಿದೆ. ಇನ್ನು 388,575 ಜನರು ಮೃತಪಟ್ಟಿದ್ದಾರೆ 3,193,377 ಮಂದಿ ರೋಗದಿಂದ ಮುಕ್ತಗೊಂಡಿದ್ದಾರೆ. view by country

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್