ತಿ.ನರಸೀಪುರ: ಸಚಿವ ಮಹದೇವಪ್ಪ ಹೆಸರಲ್ಲಿ 27 ಲಕ್ಷ ರೂ. ವಂಚನೆ: ಮಹಿಳೆ ವಿರುದ್ಧ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ
Megha03.09.2025

ತಿ.ನರಸೀಪುರ : ಸಚಿವ ಎಚ್.ಸಿ.ಮಹದೇವಪ್ಪ ಅವರ ಹೆಸರಿನಲ್ಲಿ ಖತರ್ನಾಕ್ ಮಹಿಳೆಯೊಬ್ಬಳು 27 ಲಕ್ಷ ರೂ. ವಂಚಿಸಿರುವ ಘಟನೆ ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲೂಕಿನ ಕೊಳತ್ತೂರು ಗ್ರಾಮದಲ್ಲಿ ನಡೆದಿದೆ.
ಸರ್ಕಾರದ ವಿವಿಧ ಯೋಜನೆಗಳ ಸವಲತ್ತು ಹಾಗೂ ಸಾಲ ಕೊಡಿಸುವುದಾಗಿ ನಂಬಿಸಿ ಕೊಳತ್ತೂರು ಗ್ರಾಮದ ಜ್ಯೋತಿ ಎಂಬ ಮಹಿಳೆ ನೂರಾರು ಮಹಿಳೆಯರು ಮತ್ತು ಯುವಕರಿಂದ ಲಕ್ಷಾಂತರ ರೂ. ಹಣ ಪಡೆದು ವಂಚಿಸಿದ್ದಾಳೆ ಎಂದು ಆರೋಪಿಸಲಾಗಿದೆ.

ಇನ್ನು ಬರೋಬ್ಬರಿ 27 ಲಕ್ಷ ರೂ. ವರೆಗೆ ಹಣ ವಂಚಿಸಿದ್ದಾಳೆ ಎಂದು ಆರೋಪಿಸಿರುವ ಗ್ರಾಮಸ್ಥರು ತಲಕಾಡು ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದಾರೆ. ನಮಗೆ ನ್ಯಾಯ ಕೊಡಿಸಬೇಕು ಎಂದು ಪೊಲೀಸರಿಗೆ ಮೊರೆ ಇಟ್ಟಿದ್ದಾರೆ.
ಈ ಸಂಬಂಧ ಮಾಹಿತಿ ಕಲೆಹಾಕುತ್ತಿರುವ ಪೊಲೀಸರು ತನಿಖೆಗೆ ತಯಾರಿ ನಡೆಸಿದ್ದು, ಆರೋಪಿತ ಮಹಿಳೆಯ ವಿಚಾರಣೆ ಮಾಡಿ ಕಾನೂನು ರೀತಿ ಕ್ರಮ ತೆಗೆದುಕೊಳ್ಳುವುದಾಗಿದೆ ತಿಳಿಸಿದ್ದಾರೆ.
Related

Megha







