ಜಿಬಿಎ: ನೂತನ ಪಾಲಿಕೆ ಕಚೇರಿಗಳ ನಿರ್ಮಾಣಕ್ಕೆ ನ.1 ರಂದು ಭೂಮಿಪೂಜೆ: ಉಪಮುಖ್ಯಮಂತ್ರಿ ಶಿವಕುಮಾರ್

- ಐದು ಪಾಲಿಕೆಗಳಿಗೆ 300 ಕೋಟಿ ರೂ. ಅನುದಾನ ಹಂಚಿಕೆ
ಬೆಂಗಳೂರು: “ಐದು ಪಾಲಿಕೆಗಳ ನೂತನ ಕಚೇರಿಗೆ ಭೂಮಿಪೂಜೆಯನ್ನು ನವೆಂಬರ್ 1 ರಂದು ನೆರವೇರಿಸಲಾಗುವುದು. ಎಲ್ಲ ಪಾಲಿಕೆಗಳ ಗಡಿ ಭಾಗಗಳಲ್ಲಿ ಗಡಿ ಗೋಪುರಗಳನ್ನು ನಿರ್ಮಾಣ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಕಚೇರಿಯ ನಾಮಫಲಕ ಅನಾವರಣಗೊಳಿಸಿದ ನಂತರ ಶಿವಕುಮಾರ್ ಅವರು ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದರು.
“ಪ್ರತಿ ಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆಗಳ ಸುಧಾರಣೆ ಹಾಗೂ ಆಡಳಿತಾತ್ಮಕ ದೃಷ್ಟಿಯಿಂದ 500 ಮಂದಿ ಎಂಜಿನಿಯರ್ ಗಳಿಗೆ ಅನುಮೋದನೆ ನೀಡಲಾಗಿದೆ. ಈ ಹಿಂದೆ 198 ವಾರ್ಡ್ ಗಳಿದ್ದವು. ಈಗ 500 ವಾರ್ಡ್ ಗಳ ರಚನೆಯ ಅನುಮತಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಪಾಲಿಕೆಗಳ ಆಡಳಿತಾತ್ಮಕ ವೆಚ್ಚ, ಸಂಬಳ ಹಾಗೂ ನಿವೃತ್ತಿ ವೇತನಕ್ಕೆ ಎಂದು ಬಿಬಿಎಂಪಿಯಿಂದ ಸುಮಾರು 300 ಕೋಟಿ ರೂ. ಹಣ ಬಿಡುಗಡೆಗೆ ಮಾಡಲಾಗುವುದು” ಎಂದರು.
“ನಾಗರಿಕರು, ವಾಸ್ತುಶಿಲ್ಪಿಗಳು ಪಾಲಿಕೆ ಕಚೇರಿಗಳ ವಿನ್ಯಾಸ ಹೇಗಿರಬೇಕು ಎಂದು ಸಲಹೆ ನೀಡಬಹುದು. ಜೊತೆಗೆ ವಿನ್ಯಾಸಗಳನ್ನು ಸಹ ನೀಡಬಹುದು. ಇದರಲ್ಲಿ ಅತ್ಯುತ್ತಮ ಮೂರು ಅಥವಾ ಐದು ವಿನ್ಯಾಸಗಳನ್ನು ಆಯ್ಕೆ ಮಾಡಲಾಗುವುದು. ಇದಕ್ಕೆ 5 ಲಕ್ಷ ರೂ. ಬಹುಮಾನ ನೀಡಲಾಗುವುದು” ಎಂದರು.
“ಪ್ರತಿ ಪಾಲಿಕೆಗಳಲ್ಲಿ ಇಬ್ಬರು ಐಎಎಸ್ ಅಧಿಕಾರಿಗಳು, ಒಬ್ಬರು ಕೆಎಎಸ್, ಇಬ್ಬರು ಮುಖ್ಯ ಎಂಜಿನಿಯರ್ ಗಳು ಹಾಗೂ ಅಗತ್ಯ ಕಚೇರಿ ಸಿಬ್ಬಂದಿ ಕೆಲಸ ಮಾಡಲಿದ್ದಾರೆ. ಬೆಂಗಳೂರು ನಗರಕ್ಕೆ ಉತ್ತಮವಾದ ಆಡಳಿತ ಹಾಗೂ ಜನರ ಬಾಗಿಲಿಗೆ ಸರ್ಕಾರವನ್ನು ತೆಗೆದುಕೊಂಡು ಹೋಗಬೇಕು ಎಂದು ನಿರ್ಣಯಗಳನ್ನು ತೆಗೆದುಕೊಂಡು ಪಾಲಿಕೆಗಳು ಕೆಲಸ ಮಾಡಲಿವೆ. ಪಾಲಿಕೆಗಳ ವ್ಯಾಪ್ತಿಗೆ ಬರುವ ರಸ್ತೆ, ಚರಂಡಿ ಸೇರಿದಂತೆ ಇತರೇ ಸಂಗತಿಗಳನ್ನು ಗುರುತಿಸುವ ಕೆಲಸವಾಗಲಿದೆ” ಎಂದು ಹೇಳಿದರು.

ಹೊಸ ಪ್ರದೇಶಗಳನ್ನು ಐದು ಪಾಲಿಕೆಗಳ ವ್ಯಾಪ್ತಿಗೆ ಸೇರಿಸಿಕೊಳ್ಳುವ ಬಗ್ಗೆ ಕೇಳಿದಾಗ, “ಬೆಂಗಳೂರು ನಗರಕ್ಕೆ ಹೊಂದಿಕೊಂಡಿರುವ ಸ್ಥಳೀಯ ಸಂಸ್ಥೆಗಳನ್ನು ಜಿಬಿಎ ವ್ಯಾಪ್ತಿಗೆ ಈಗಲೇ ಸೇರಿಸಿದರೆ ಪ್ರಸ್ತುತ ಪ್ರತಿನಿಧಿಗಳಾಗಿರುವವನ್ನೂ ಪಾಲಿಕೆ ಸದಸ್ಯರು ಎಂದು ಪರಿಗಣಿಸಬೇಕಾಗುತ್ತದೆ. ಮೊದಲು ಈಗ ರಚನೆಯಾಗಿರುವ ಪಾಲಿಕೆಗಳಿಗೆ ಚುನಾವಣೆ ನಡೆದ ನಂತರ ಇತರೇ ಪ್ರದೇಶಗಳ ವಿಲೀನದ ಬಗ್ಗೆ ಭವಿಷ್ಯದಲ್ಲಿ ಯೋಚಿಸಲಾಗವುದು” ಎಂದರು.
ನೂತನ ಆಯುಕ್ತರುಗಳ ಜವಾಬ್ದಾರಿಗಳ ಬಗ್ಗೆ ಕೇಳಿದಾಗ, “ನೂತನ ಆಯುಕ್ತರುಗಳು ಜನರ ನಡುವೆಯಿದ್ದು ಕೆಲಸ ಮಾಡಬೇಕು. ಜಿಬಿಎ ಆಯುಕ್ತರು ಫುಟ್ ಪಾತ್, ನೀರು, ರಸ್ತೆ ಸೇರಿದಂತೆ ಇತರೇ ಕೆಲಸಗಳ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ. ದಿನಕ್ಕೆ 17- 18 ಗಂಟೆ ಕೆಲಸ ಮಾಡಬೇಕಾಗುತ್ತದೆ. ಆದ ಕಾರಣಕ್ಕೆ ಹಿರಿಯ ಅಧಿಕಾರಿಗಳ ಜೊತೆ ಯುವ ಅಧಿಕಾರಿಗಳನ್ನೂ ನಿಯೋಜನೆ ಮಾಡಲಾಗಿದೆ” ಎಂದರು.
“ಮಹೇಶ್ವರ್ ರಾವ್ ಅವರು ಜಿಬಿಎಗೆ ಮುಖ್ಯ ಆಯುಕ್ತರಾಗಿ ಹಾಗೂ ಆಡಳಿತಾಧಿಕಾರಿಯಾಗಿ ಚುನಾವಣೆ ನಡೆಯುವವರೆಗೂ ಕಾರ್ಯನಿರ್ವಹಣೆ ಮಾಡಲಿದ್ದಾರೆ. ಪ್ರಾಧಿಕಾರದ ಸಮಿತಿಗೆ 75 ಸದಸ್ಯರನ್ನು ನೇಮಕ ಮಾಡಲಾಗಿದೆ” ಎಂದು ತಿಳಿಸಿದರು.
ಉತ್ತಮ ಪದ ಸಿಕ್ಕರೆ ಹೆಸರು ಬದಲಾವಣೆ: ಗ್ರೇಟರ್ ಬೆಂಗಳೂರು ಎಂದು ಇಂಗ್ಲಿಷ್ ಹೆಸರಿಟ್ಟಿರುವ ಬಗ್ಗೆ ಶಾಸಕ ಅಶ್ವಥನಾರಾಯಣ ಅವರ ಆಕ್ಷೇಪದ ಬಗ್ಗೆ ಕೇಳಿದಾಗ, “ಅವರನ್ನೇ ಯಾವ ಹೆಸರು ಇಡಬೇಕು ಎಂದು ಸಲಹೆ ಕೇಳುತ್ತೇನೆ. ಮುಂಬೈ ಸೇರಿದಂತೆ ಬೇರೆ ಕಡೆಯು ಇದೇ ಪರಿಸ್ಥಿತಿ ಬಂದಿತ್ತು. ಮಾತೃಭಾಷೆಯನ್ನು ಕಡೆಗಣಿಸುವ ಮಾತಿಲ್ಲ. ಆದರೆ ಒಳ್ಳೆ ಪದ ಸಿಕ್ಕರೆ ಬದಲಾವಣೆ ಮಾಡೋಣ” ಎಂದರು.
“ಬೆಂಗಳೂರಿನ ಸಮಸ್ಯೆಗಳು ದಿನ ಬೆಳಗಾಗುವುದರಲ್ಲಿ ಬಗೆಹರಿಯುವುದಿಲ್ಲ. ಆದರೆ ಮುಂದಿನ ದಿನಗಳಲ್ಲಿ ನಾವು ಬಗೆಹರಿಸುವ ವಿಶ್ವಾಸವಿದೆ. ಕುಡಿಯುವ ನೀರು, ರಸ್ತೆ ಗುಂಡಿ, ಸಂಚಾರ ದಟ್ಟಣೆ ವಿಚಾರದಲ್ಲಿ ಉತ್ತಮವಾಗಿ ಕೆಲಸ ಮಾಡಲಾಗುವುದು” ಎಂದರು.
ಜಿಬಿಎಯಿಂದ ಬೆಂಗಳೂರು ಅಭಿವೃದ್ಧಿ ಸಾಧ್ಯವೇ ಎಂದು ಕೇಳಿದಾಗ, “ಖಂಡಿತವಾಗಿಯೂ ಸಾಧ್ಯವಾಗಲಿದೆ. ಸಾರ್ವಜನಿಕರು ಸಹ ಪಾಲಿಕೆಗಳ ಜೊತೆ ಕೈ ಜೋಡಿಸಬೇಕು. ಆಗ ಮಾತ್ರ ಪಾರದರ್ಶಕ ಆಡಳಿತ ನಡೆಸಲು ಸಾಧ್ಯವಾಗುತ್ತದೆ. ಜನರು ಪ್ರಾಮಾಣಿಕವಾಗಿ ತಮ್ಮ ಆಸ್ತಿಗಳನ್ನು ಘೋಷಣೆ ಮಾಡಿಕೊಳ್ಳಬೇಕು, ತೆರಿಗೆ ಪಾವತಿ ಮಾಡಬೇಕು” ಎಂದರು.
ಜಿಬಿಎಯ ಕಾರ್ಯನಿರ್ವಹಣೆ ಏನೆಂದು ಕೇಳಿದಾಗ, “ಜಿಬಿಎ ಕೇವಲ ಉಸ್ತುವಾರಿ ನೋಡಿಕೊಳ್ಳುತ್ತದೆ. ಮಿಕ್ಕ ಎಲ್ಲ ಸಂಗತಿಗಳು ಪಾಲಿಕೆಗಳ ವ್ಯಾಪ್ತಿಗೆ ಬರಲಿದೆ” ಎಂದು ತಿಳಿಸಿದರು.
Related


You Might Also Like
BMTC ಸಂಸ್ಥೆಯಿಂದ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕೊಡಿ: ವ್ಯವಸ್ಥಾಪಕ ನಿರ್ದೇಶಕರಿಗೆ ಟಿಸಿ ಶ್ರೀನಿವಾಸ್ ಮನವಿ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರವನ್ನು ಈ ಹಿಂದಿನಿಂದಲೂ ಸ್ವಾತಂತ್ರ್ಯೋತ್ಸವ, ಕನ್ನಡ ರಾಜ್ಯೋತ್ಸವದಂದು ಕೊಡಲಾಗುತ್ತಿತ್ತು ಆದರೆ, ಇತ್ತೀಚೆಗೆ ನಿಲ್ಲಿಸಿರುವುದು ಸರಿಯಾದ ಕ್ರಮವಲ್ಲ...
KKRTC ಕಂಡಕ್ಟರ್ ಮೇಲೆ ಹಲ್ಲೆ ಪ್ರಕರಣ : ಆರೋಪಿಗೆ 3 ವರ್ಷ ಜೈಲು, 6 ಸಾವಿರ ರೂ. ದಂಡ ವಿಧಿಸಿದ ಕೋರ್ಟ್ ಮಹತ್ವದ ತೀರ್ಪು
ಹೊಸಪೇಟೆ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಿರ್ವಾಹಕರ ಮೇಲೆ ಹಲ್ಲೆ ಮಾಡಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದ ಪ್ರಕರಣದಲ್ಲಿ ಅಪರಾಧಿಗೆ ಮೂರು ವರ್ಷ ಜೈಲು ಶಿಕ್ಷೆ ಹಾಗೂ...
ಮೆಜೆಸ್ಟಿಕ್ ಬಳಿ ಮೊಬೈಲ್ ಶೌಚಾಲಯ ವ್ಯವಸ್ಥೆ: ಆಯುಕ್ತ ರಾಜೇಂದ್ರ ಚೋಳನ್
ಬೆಂಗಳೂರು: ಮೆಜೆಸ್ಟಿಕ್ ಬಳಿ ಪಾದಚಾರಿ ಮಾರ್ಗಗಳಲ್ಲಿ ಸಾರ್ವಜನಿಕರು ಮೂತ್ರ ವಿಸರ್ಜನೆ ಮಾಡುವುದನ್ನು ನಿಯಂತ್ರಿಸುವ ಸಲುವಾಗಿ ಮೊಬೈಲ್ ಶೌಚಾಲಯಗಳ ವ್ಯವಸ್ಥೆ ಮಾಡಲು ಬೆಂಗಳೂರು ಕೇಂದ್ರ ನಗರ ಪಾಲಿಕೆ ಆಯುಕ್ತರಾದ...
ಸರ್ಕಾರಿ ಬಸ್ ಚಾಲಕ-ನಿರ್ವಾಹಕರು ಎಲ್ಲದಕ್ಕೂ ಹೊಣೆಯಲ್ಲ: ಸುಜಯ ಆರ್.ಕಣ್ಣೂರ
ಬಿಎಂಟಿಸಿ ವಿರುದ್ಧ 10 ಸಾವಿರ ದೂರು' ಮುಖಪುಟ ವರದಿ ತಿಳಿಸುವ ಸಲುವಾಗಿ ಈ ಬರಹ. ನಾನು ಬಿಂಎಂಟಿಸಿ ಬಸ್ನಲ್ಲಿ 35 ವರ್ಷಗಳಿಂದ ಪ್ರಯಾಣಿಸುತ್ತಿದ್ದೇನೆ. ಇದರಲ್ಲಿ ಯಾರದು ತಪ್ಪು,...
BMTC ಬಸ್ ಚಾಲಕನ ಮೇಲೆ ಪೊಲೀಸ್ ಸಿಬ್ಬಂದಿ ಹಲ್ಲೆ ಖಂಡಿಸಿ ಚಾಲಕರ ಪ್ರತಿಭಟನೆ
ಬೆಂಗಳೂರು: ಕಾರಿಗೆ ಸೈಡ್ ಬಿಡಲಿಲ್ಲ ಎಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ಚಾಲಕನ ಮೇಲೆ ಜಿಗಣಿ ಠಾಣೆಯ ಪೊಲೀಸ್ ಸಿಬ್ಬಂದಿಯೊಬ್ಬರು ಹಲ್ಲೆ ಮಾಡಿರುವ ಘಟನೆ ನಡೆದಿದೆ....
ಭಾರತ-ಅಮೆರಿಕ ಸಂಬಂಧ ಸುಧಾರಣೆಗೆ ಅಮೆರಿಕ ಅಧ್ಯಕ್ಷ ಟ್ರಂಪ್ ಸಕಾರಾತ್ಮಕ ನಡೆ ಶ್ಲಾಘನೀಯ: ಪ್ರಧಾನಿ ಮೋದಿ
ನ್ಯೂಡೆಲ್ಲಿ: ಭಾರತ-ಅಮೆರಿಕ ಸಂಬಂಧ ಸುಧಾರಣೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸಕಾರಾತ್ಮಕ ನಡೆ ಶ್ಲಾಘನೀಯ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ನಾನು ಮೋದಿ ಅವರೊಂದಿಗೆ...
“ಗಬ್ಬರ್ ಸಿಂಗ್ ತೆರಿಗೆ” ಸಣ್ಣ ವ್ಯಾಪಾರಿಗಳ ಸರ್ವನಾಶ ಮಾಡಲಿದೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ತೆರಿಗೆದಾರ ಜನತೆ ಮತ್ತು ವ್ಯಾಪಾರಿ ವರ್ಗದ ಮೇಲಿನ ಆರ್ಥಿಕ ಭಾರ ಮತ್ತು ಅನುಷ್ಠಾನದ ಜಂಜಾಟವನ್ನು ತಗ್ಗಿಸಲು ಅತ್ಯಗತ್ಯವಾಗಿದ್ದ ತೆರಿಗೆ ಸುಧಾರಣೆಯನ್ನು ಜಾರಿಗೆ ತರುವ ಸರಕು ಸೇವಾ...
ಜಾತಿ ವ್ಯವಸ್ಥೆ ಕಾರಣಕ್ಕೆ ಅವಕಾಶಗಳು ಎಲ್ಲರಿಗೂ ಸಿಗುತ್ತಿಲ್ಲ: CM ಸಿದ್ದರಾಮಯ್ಯ
ಬೆಂಗಳೂರು: ಜಾತಿ ವ್ಯವಸ್ಥೆ ಕಾರಣಕ್ಕೆ ಅಸಮಾನ ಸಮಾಜ ನಿರ್ಮಾಣವಾಗಿ ಅವಕಾಶಗಳು ಎಲ್ಲರಿಗೂ ಸಿಗುತ್ತಿಲ್ಲ. ಶೂದ್ರರ ಜತೆಗೆ ಮಹಿಳೆಯರನ್ನೂ ಶಿಕ್ಷಣದಿಂದ ಹೊರಗಿಡಲಾಗಿತ್ತು. ಆದರೆ ಈಗ ಶಿಕ್ಷಣದ ಹಕ್ಕಿನ ಕಾರಣಕ್ಕೆ...
ನಮ್ಮ ಸರ್ಕಾರ ವರ್ಷಕ್ಕೆ 65 ಸಾವಿರ ಕೋಟಿ ರೂ. ಶಿಕ್ಷಣಕ್ಕೆ ಖರ್ಚು ಮಾಡುತ್ತಿದೆ: ಸಿಎಂ
ಬೆಂಗಳೂರು: ಶಿಕ್ಷಣ ನಮ್ಮ ಸರ್ಕಾರದ ಆದ್ಯತಾ ಕಾರ್ಯಕ್ರಮವಾಗಿದ್ದು, ವರ್ಷಕ್ಕೆ 65 ಸಾವಿರ ಕೋಟಿ ರೂಪಾಯಿಯನ್ನು ಶಿಕ್ಷಣಕ್ಕೆ ಖರ್ಚು ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಇಂದು ವಿಧಾನಸೌಧದ...