NEWSದೇಶ-ವಿದೇಶ

ದೇಶದಲ್ಲಿ 24ಗಂಟೆಯಲ್ಲಿ 9, 889 ಹೊಸ ಪಾಸಿಟಿವ್ ಕೊರೊನಾ ಸೋಂಕಿತ ಪ್ರಕರಣಗಳು ಪತ್ತೆ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ದೇಶದಲ್ಲೂ ದಿನದಿಂದ ದಿನಕ್ಕೆ ವಿಶ್ವಮಾರಿ ಕೊರೊನಾ ಅಟ್ಟಹಾಸ ಮುಂದುವರಿಯುತ್ತಿದ್ದು, ಇದರಿಂದ ಜನರು ಆತಂಕಕ್ಕೆ ಒಳಗಾಗುತ್ತಿದ್ದಾರೆ.

ಅಂದರೆ ಕಳೆದ 24 ಗಂಟೆಯಲ್ಲಿ ದೇಶದ 9,889 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2.26 ಲಕ್ಷಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶುಕ್ರವಾರ ಮಾಹಿತಿ ನೀಡಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ದೇಶದ ವಿವಿಧ ರಾಜ್ಯಗಳಲ್ಲಿ ಒಂದು ದಿನದ ಗರಿಷ್ಟ ಸೋಂಕಿತರ ಸಂಖ್ಯೆ ದಾಖಲಾಗಿದ್ದು, ನಿನ್ನೆ ಒಂದೇ ದಿನ ದೇಶಾದ್ಯಂತ 9, 889 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಆ ಮೂಲಕ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 2,26,713ಕ್ಕೇರಿದೆ.

ಇನ್ನು ನಿನ್ನೆ ಒಂದೇ ದಿನ ದೇಶಾದ್ಯಂತ 275 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ದೇಶದಲ್ಲಿ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 6,363ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 4,343 ಸೋಂಕಿತರು ಗುಣಮುಖರಾಗಿ ಮನೆಗೆ ಮರಳಿದ್ದಾರೆ, ಆ ಮೂಲಕ ಒಟ್ಟಾರೆ ಸೋಂಕಿತರಲ್ಲಿ  108,450 ಮಂದಿ ಈವರೆಗೆ ಗುಣಮುಖರಾಗಿರುವುದು ತುಸು ಸಮಾಧಾನದ ವಿಷಯವಾಗಿದೆ. ಇನ್ನು 1,11,900 ಸಕ್ರಿಯ ಪ್ರಕರಣಗಳಿದ್ದು ನಿಗದಿತ ಆಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ವಿಶ್ವದಲ್ಲಿ ಕೊರೊನಾ ಸೋಂಕಿಗೆ ಒಳಗಾದವರ ಸಂಖ್ಯೆಯೂ ಹೆಚ್ಚಾಗುತ್ತಿದ್ದು ಅತೀ ಹೆಚ್ಚು ಸೋಂಕಿತರನ್ನು ಹೊಂದಿರುವ ದೇಶಗಳ ಪಟ್ಟಿಯಲ್ಲಿ ಭಾರತ 7ನೇ ಸ್ಥಾನದಲ್ಲಿದೆ. ಇನ್ನು ಅಮೆರಿಕ, ಬ್ರೆಜಿಲ್, ರಷ್ಯಾ, ಬ್ರಿಟನ್, ಸ್ಪೇನ್ ಮತ್ತು ಇಟಲಿ ನಂತರದ ಸ್ಥಾನವನ್ನು ನಮ್ಮ ದೇಶ ಹೊಂದಿರುವುದು ಸದ್ಯದ ಪರಿಸ್ಥಿತಿಯಲ್ಲಿ ಆತಂಕವನ್ನೂ ಹೆಚ್ಚಿಸಿದೆ.

 

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್