ಬೆಂಗಳೂರು: ಕಳೆದ 2021ರ ಏಪ್ರಿಲ್‌ನಲ್ಲಿ ನಡೆದಂತಹ ಸಾರಿಗೆ ಮುಷ್ಕರದ ಅವಧಿಯಲ್ಲಿ ಬಹಳಷ್ಟು ಸಾರಿಗೆ ನೌಕರರ ವಿರುದ್ಧ ವಜಾ, ವರ್ಗಾವಣೆ, ಅಮಾನತು ಹಾಗೂ ಪೊಲೀಸ್ ಪ್ರಕರಣಗಳು ದಾಖಲಿಸಲಾಗಿತ್ತು.
ಈ ಎಲ್ಲ ಪ್ರಕರಣಗಳಲ್ಲಿ ಬಹುತೇಕ ಇತ್ಯರ್ಥವಾಗಿದ್ದು ಇನ್ನೂ ಕೆಲವು ಬಾಕಿ ಉಳಿದಿವೆ ಅವುಗಳನ್ನು ವಾಪಸ್ ಪಡೆಯಬೇಕು ಎಂದು ಸಾರಿಗೆ ನೌಕರರ ಸಂಘಟನೆಗಳ ಮುಖಂಡರು ಆಗ್ರಹಿಸಿದ್ದಾರೆ.
ಇನ್ನು ಸಮಸ್ಯೆಗಳಿಗೆ ಒಳಗಾಗಿರುವ ನೌಕರರ ಬದುಕನ್ನು ಸರಿಪಡಿಸಲು ಸರ್ಕಾರ ಮುಂದಾಗಬೇಕು. ಜತೆಗೆ 38 ತಿಂಗಳ ವೇತನ ಹೆಚ್ಚಳದ ಹಿಂಬಾಕಿ ಹಾಗೂ 2024ರ ಜನವರಿ 1ರಿಂದ ಜಾರಿಗೆ ಬರುವಂತೆ ಸರಿ ಸಮಾನ ವೇತನ ಜಾರಿಗೊಳಿಸಿ ಅದರ ವೇತನ ಹಿಂಬಾಕಿಯನ್ನು ಕೊಡಬೇಕು ಎಂದು ಒತ್ತಾಯಿಸಿದ್ದಾರೆ.
ಸಾರಿಗೆ ಬಹುತೇಕ ಎಲ್ಲ ನೌಕರರ ಸಂಘಟನೆಗಳ ಮುಖಂಡರು ಇದೇ ಒತ್ತಾಯವನ್ನು ಸರ್ಕಾರ ಮತ್ತು 4 ಸಾರಿಗೆಯ ಆಡಳಿತ ಮಂಡಳಿಗೆ ಮಾಡುತ್ತಿದ್ದು, ಸೆ.20ರೊಳಗೆ ಬಿಎಂಟಿಸಿಯಲ್ಲಿ ಮುಷ್ಕರದ ಕಾರಣದಿಂದ ವಜಾಗಿಳಿಸಿರುವ ಎಲ್ಲ ನೌಕರರನ್ನು ವಾಪಸ್ ಡ್ಯೂಟಿಗೆ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಇನ್ನು ಕಳೆದ ಆ.5ರಂದು ಎಐಟಿಯುಸಿ ಅಧ್ಯಕ್ಷ ಅನಂತ ಸುಬ್ಬರಾವ್ ನೇತೃತ್ವದಲ್ಲಿ ನಡೆದ ಒಂದು ದಿನದ ಮುಷ್ಕರದಲ್ಲಿ ಕೇವಲ ಚಾಲಕರು ಹಾಗೂ ನಿರ್ವಾಹಕರ ವೇತನವನ್ನು ಮಾತ್ರ ಕಡಿತಮಾಡಲಾಗಿದ್ದು ಉಳಿದ ಎಲ್ಲ ಅಧಿಕಾರಿಗಳು, ಸಿಬ್ಬಂದಿ ವರ್ಗದವರಿಗೆ ವೇತನ ನೀಡಲಾಗಿದೆ. ಇದು ಸರಿಯಾದ ಕ್ರಮವಲ್ಲ ಚಾಲನಾ ಸಿಬ್ಬಂದಿಗಳಿಗೂ ಆ ಒಂದು ದಿನ ರಜೆ ಪಡೆದು ವೇತನ ಕೊಡಬೇಕು ಎಂದು ಒತ್ತಾಯಿಸಿದ್ದಾರೆ.
ಇನ್ನು ನೌಕರರ ವಿರುದ್ಧ ಕೊಟ್ಟಿರುವ ಮೆಮೋ ಹಾಗೂ ಇತರೆ ನೋಟಿಸ್‌ಗಳನ್ನು ಕೂಡಲೇ ವಾಪಸ್ ಪಡೆದು ಅವರಿಗೆ ಆ ಒಂದು ದಿನದ ವೇತನ ಕೊಡುವ ಜತೆಗೆ ಅವರ ಎಲ್ಲ ಸಮಸ್ಯೆಗಳನ್ನು ಮುಖ್ಯ ಮಂತ್ರಿಗಳು, ಸಾರಿಗೆ ಸಚಿವರ ಗಮನಕ್ಕೆ ತಂದು ಸರಿಪಡಿಸಿಕೊಡುವಂತೆ ಮನವಿ ಮಾಡಲಾಗಿದ್ದು ಮತ್ತೊಮ್ಮೆ ಮನವಿ ಮಾಡುವುದಾಗಿಯೂ ತಿಳಿಸಿದ್ದಾರೆ.

ಸಾರಿಗೆ ಸಂಸ್ಥೆಯ ಸಂಘಟನೆಗಳು ಇನ್ನಾದರೂ ಸ್ಟ್ರಾಂಗಾದ ಸಭೆ ನಡೆಸಿ ಮುಂದಿನ ದಿನಗಳಲ್ಲಿ ಸರ್ಕಾರ ಮತ್ತು ಸಾರಿಗೆ ಅಡಳಿತ ಮಂಡಳಿ ಜತೆ ಖಡಕ್‌ಆಗಿ ಮಾತುಕತೆ ನಡೆಸಿ ಎಲ್ಲವನ್ನು ಸರಿಪಡಿಸಬೇಕು. ಇಲ್ಲದಿದ್ದರೆ ಇದೇ ಸ್ಥಿತಿ ಮುಂದುವರಿಯಲಿದೆ ಎಂದು ನೌಕರರು ಒತ್ತಾಯಿಸಿದ್ದಾರೆ.
ಇನ್ನು ವೇತನ ಹೆಚ್ಚಳ ಮಾಡಬೇಕು ಎಂದು ನೌಕರರು ಮುಷ್ಕರ ಮಾಡಿದರೆ ಅಧಿಕಾರಿ ಮಹಾಶಯರೆನಿಸಿಕೊಂಡ ಬಹುತೇಕ ಎಲ್ಲ ಅಧಿಕಾರಿಗಳು ತಮಗೂ ವೇತನ ಹೆಚ್ಚಳವಾಗುತ್ತದೆ ಎಂಬುವುದು ತಿಳಿದಿದ್ದರೆ ಪರೋಕ್ಷವಾಗಿಯಾದರೂ ಬೆಂಬಲಿಸದೆ ಹೋರಾಟದಿನ ಡ್ಯೂಟಿ ಮಾಡದ ನೌಕರರ ವೇತನವನ್ನು ಕಟ್ ಮಾಡಿರುವುದು ನ್ಯಾಯಸಮ್ಮತವೆ?
ಇನ್ನಾದರೂ ಈ ಬಗ್ಗೆ ಅಧಿಕಾರಿಗಳಾದ ತಾವುಗಳು ಪ್ರಭುದ್ಧರಾಗಿ ಯೋಚಿಸಿ ನೌಕರರು ನಿಮ್ಮ ಪಾಲಿನ ಹೋರಾಟದ ಜವಾಬ್ದಾರಿಯನ್ನು ಹೊತ್ತು ರಸ್ತೆಗಿಳಿದಿದ್ದರೂ ಎಂದು ಅರಿತು ಸೆಪ್ಟೆಂಬರ್ ವೇತನದೊಂದಿಗಾದರೂ ವೇತನ ಬಿಡುಗಡೆ ಮಾಡಿ. ಇಲ್ಲ ನಾವು ಕೆಳಮಟ್ಟದಲ್ಲೇ ಯೋಚಿಸುವವರು ಅಂತ ಅಂದುಕೊಂಡಿದರೆ ತಮ್ಮ ಅಂಧಾದರ್ಬಾರನ್ನೇ ಮುಂದುವರಿಸಿ.
Related


You Might Also Like
BMTC ಸಂಸ್ಥೆಯಿಂದ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕೊಡಿ: ವ್ಯವಸ್ಥಾಪಕ ನಿರ್ದೇಶಕರಿಗೆ ಟಿಸಿ ಶ್ರೀನಿವಾಸ್ ಮನವಿ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರವನ್ನು ಈ ಹಿಂದಿನಿಂದಲೂ ಸ್ವಾತಂತ್ರ್ಯೋತ್ಸವ, ಕನ್ನಡ ರಾಜ್ಯೋತ್ಸವದಂದು ಕೊಡಲಾಗುತ್ತಿತ್ತು ಆದರೆ, ಇತ್ತೀಚೆಗೆ ನಿಲ್ಲಿಸಿರುವುದು ಸರಿಯಾದ ಕ್ರಮವಲ್ಲ...
KKRTC ಕಂಡಕ್ಟರ್ ಮೇಲೆ ಹಲ್ಲೆ ಪ್ರಕರಣ : ಆರೋಪಿಗೆ 3 ವರ್ಷ ಜೈಲು, 6 ಸಾವಿರ ರೂ. ದಂಡ ವಿಧಿಸಿದ ಕೋರ್ಟ್ ಮಹತ್ವದ ತೀರ್ಪು
ಹೊಸಪೇಟೆ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಿರ್ವಾಹಕರ ಮೇಲೆ ಹಲ್ಲೆ ಮಾಡಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದ ಪ್ರಕರಣದಲ್ಲಿ ಅಪರಾಧಿಗೆ ಮೂರು ವರ್ಷ ಜೈಲು ಶಿಕ್ಷೆ ಹಾಗೂ...
ಮೆಜೆಸ್ಟಿಕ್ ಬಳಿ ಮೊಬೈಲ್ ಶೌಚಾಲಯ ವ್ಯವಸ್ಥೆ: ಆಯುಕ್ತ ರಾಜೇಂದ್ರ ಚೋಳನ್
ಬೆಂಗಳೂರು: ಮೆಜೆಸ್ಟಿಕ್ ಬಳಿ ಪಾದಚಾರಿ ಮಾರ್ಗಗಳಲ್ಲಿ ಸಾರ್ವಜನಿಕರು ಮೂತ್ರ ವಿಸರ್ಜನೆ ಮಾಡುವುದನ್ನು ನಿಯಂತ್ರಿಸುವ ಸಲುವಾಗಿ ಮೊಬೈಲ್ ಶೌಚಾಲಯಗಳ ವ್ಯವಸ್ಥೆ ಮಾಡಲು ಬೆಂಗಳೂರು ಕೇಂದ್ರ ನಗರ ಪಾಲಿಕೆ ಆಯುಕ್ತರಾದ...
ಸರ್ಕಾರಿ ಬಸ್ ಚಾಲಕ-ನಿರ್ವಾಹಕರು ಎಲ್ಲದಕ್ಕೂ ಹೊಣೆಯಲ್ಲ: ಸುಜಯ ಆರ್.ಕಣ್ಣೂರ
ಬಿಎಂಟಿಸಿ ವಿರುದ್ಧ 10 ಸಾವಿರ ದೂರು' ಮುಖಪುಟ ವರದಿ ತಿಳಿಸುವ ಸಲುವಾಗಿ ಈ ಬರಹ. ನಾನು ಬಿಂಎಂಟಿಸಿ ಬಸ್ನಲ್ಲಿ 35 ವರ್ಷಗಳಿಂದ ಪ್ರಯಾಣಿಸುತ್ತಿದ್ದೇನೆ. ಇದರಲ್ಲಿ ಯಾರದು ತಪ್ಪು,...
BMTC ಬಸ್ ಚಾಲಕನ ಮೇಲೆ ಪೊಲೀಸ್ ಸಿಬ್ಬಂದಿ ಹಲ್ಲೆ ಖಂಡಿಸಿ ಚಾಲಕರ ಪ್ರತಿಭಟನೆ
ಬೆಂಗಳೂರು: ಕಾರಿಗೆ ಸೈಡ್ ಬಿಡಲಿಲ್ಲ ಎಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ಚಾಲಕನ ಮೇಲೆ ಜಿಗಣಿ ಠಾಣೆಯ ಪೊಲೀಸ್ ಸಿಬ್ಬಂದಿಯೊಬ್ಬರು ಹಲ್ಲೆ ಮಾಡಿರುವ ಘಟನೆ ನಡೆದಿದೆ....
ಭಾರತ-ಅಮೆರಿಕ ಸಂಬಂಧ ಸುಧಾರಣೆಗೆ ಅಮೆರಿಕ ಅಧ್ಯಕ್ಷ ಟ್ರಂಪ್ ಸಕಾರಾತ್ಮಕ ನಡೆ ಶ್ಲಾಘನೀಯ: ಪ್ರಧಾನಿ ಮೋದಿ
ನ್ಯೂಡೆಲ್ಲಿ: ಭಾರತ-ಅಮೆರಿಕ ಸಂಬಂಧ ಸುಧಾರಣೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸಕಾರಾತ್ಮಕ ನಡೆ ಶ್ಲಾಘನೀಯ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ನಾನು ಮೋದಿ ಅವರೊಂದಿಗೆ...
“ಗಬ್ಬರ್ ಸಿಂಗ್ ತೆರಿಗೆ” ಸಣ್ಣ ವ್ಯಾಪಾರಿಗಳ ಸರ್ವನಾಶ ಮಾಡಲಿದೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ತೆರಿಗೆದಾರ ಜನತೆ ಮತ್ತು ವ್ಯಾಪಾರಿ ವರ್ಗದ ಮೇಲಿನ ಆರ್ಥಿಕ ಭಾರ ಮತ್ತು ಅನುಷ್ಠಾನದ ಜಂಜಾಟವನ್ನು ತಗ್ಗಿಸಲು ಅತ್ಯಗತ್ಯವಾಗಿದ್ದ ತೆರಿಗೆ ಸುಧಾರಣೆಯನ್ನು ಜಾರಿಗೆ ತರುವ ಸರಕು ಸೇವಾ...
ಜಾತಿ ವ್ಯವಸ್ಥೆ ಕಾರಣಕ್ಕೆ ಅವಕಾಶಗಳು ಎಲ್ಲರಿಗೂ ಸಿಗುತ್ತಿಲ್ಲ: CM ಸಿದ್ದರಾಮಯ್ಯ
ಬೆಂಗಳೂರು: ಜಾತಿ ವ್ಯವಸ್ಥೆ ಕಾರಣಕ್ಕೆ ಅಸಮಾನ ಸಮಾಜ ನಿರ್ಮಾಣವಾಗಿ ಅವಕಾಶಗಳು ಎಲ್ಲರಿಗೂ ಸಿಗುತ್ತಿಲ್ಲ. ಶೂದ್ರರ ಜತೆಗೆ ಮಹಿಳೆಯರನ್ನೂ ಶಿಕ್ಷಣದಿಂದ ಹೊರಗಿಡಲಾಗಿತ್ತು. ಆದರೆ ಈಗ ಶಿಕ್ಷಣದ ಹಕ್ಕಿನ ಕಾರಣಕ್ಕೆ...
ನಮ್ಮ ಸರ್ಕಾರ ವರ್ಷಕ್ಕೆ 65 ಸಾವಿರ ಕೋಟಿ ರೂ. ಶಿಕ್ಷಣಕ್ಕೆ ಖರ್ಚು ಮಾಡುತ್ತಿದೆ: ಸಿಎಂ
ಬೆಂಗಳೂರು: ಶಿಕ್ಷಣ ನಮ್ಮ ಸರ್ಕಾರದ ಆದ್ಯತಾ ಕಾರ್ಯಕ್ರಮವಾಗಿದ್ದು, ವರ್ಷಕ್ಕೆ 65 ಸಾವಿರ ಕೋಟಿ ರೂಪಾಯಿಯನ್ನು ಶಿಕ್ಷಣಕ್ಕೆ ಖರ್ಚು ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಇಂದು ವಿಧಾನಸೌಧದ...