NEWSನಮ್ಮರಾಜ್ಯ

ಗ್ರಾಪಂ ಸದಸ್ಯರ ಅವಧಿ ಮುಕ್ತಾಯ ಹಿನ್ನೆಲೆ-ಸಂಪುಟ ಸಭೆಯಲ್ಲಿ ತೀರ್ಮಾನ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆ

ವಿಜಯಪಥ ಸಮಗ್ರ ಸುದ್ದಿ

ಕಲಬುರಗಿ: ಜೂನ್ ಮತ್ತು ಜುಲೈ-2020ರ ಮಾಹೆಯಲ್ಲಿ ರಾಜ್ಯದ 5200 ಗ್ರಾಮ ಪಂಚಾಯಿತಿಗಳ ಅವಧಿ ಮುಕ್ತಾಯವಾಗಲಿದೆ. ಆದರೆ, ಕೊರೊನಾ ಸಾಂಕ್ರಾಮಿಕ ಸೋಂಕು ಹಿನ್ನೆಲೆಯಲ್ಲಿ ಚುನಾವಣೆ ಮುಂದಕ್ಕೆ ಹೋಗಲಿದ್ದು, ಈ ಸಂದರ್ಭದಲ್ಲಿ ಪ್ರಸ್ತುತ ಇರುವ ಅವಧಿಯನ್ನು ವಿಸ್ತರಿಸಬೇಕೆ, ಆಡಳಿತಾಧಿಕಾರಿಗಳನ್ನು ನೇಮಿಸಬೇಕೆ ಅಥವಾ ಆಡಳಿತ ಸಮಿತಿ ರಚಿಸುವ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಶುಕ್ರವಾರ ಕಲಬುರಗಿ ತಾಲೂಕಿನ ಹೊನ್ನಕಿರಣಗಿ ಗ್ರಾಮದ ರೈತರ ಜಮೀನಿನಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ನಡೆಯುತ್ತಿದ್ದ ಬದು ನಿರ್ಮಾಣ ಕಾಮಗಾರಿ ವೀಕ್ಷಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಅವಧಿ ಮುಕ್ತಾಯವಾಗಲಿರುವ 5200 ಗ್ರಾಮ ಪಂಚಾಯತಿಗಳಿಗೆ ಚುನಾವಣೆ ನಡೆಸುವ ಸಂಬಂಧ ರಾಜ್ಯ ಚುನಾವಣಾ ಆಯೋಗವು ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಂದ ಅಭಿಪ್ರಾಯ ಪಡೆದಿದ್ದು, ಪ್ರಸ್ತುತ ಕೊರೋನಾ ಸಾಂಕ್ರಾಮಿಕ ಸೋಂಕು ಹಿನ್ನೆಲೆಯಲ್ಲಿ ಎಲ್ಲಾ ಅಧಿಕಾರಿ-ಸಿಬ್ಬಂದಿಗಳು ಇದರಲ್ಲಿ ತೊಡಗಿದ್ದು, ಚುನಾವಣೆ ಮುಂದೂಡವುದು ಸೂಕ್ತವೆಂದು ಬಹುತೇಕ ಜಿಲ್ಲಾಧಿಕಾರಿ  ಅಭಿಪ್ರಾಯಪಟ್ಟಿದ್ದಾರೆ ಎಂದರು.

ಕಲಬುರಗಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣ ಹಣಮಂತರಾಯ ಮಾಲಾಜಿ, ಸಂಸದ ಡಾ.ಉಮೇಶ ಜಾಧವ, ಶಾಸಕರಾದ ಎಂ.ವೈ.ಪಾಟೀಲ, ಬಸವರಾಜ ಮತ್ತಿಮೂಡ, ಡಾ.ಅವಿನಾಶ ಜಾಧವ, ಎಂ.ಎಲ್.ಸಿ. ಬಿ.ಜಿ.ಪಾಟೀಲ, ಮಾಜಿ ಶಾಸಕರಾದ ಮಾಲೀಕಯ್ಯ ಗುತ್ತೇದಾರ, ದೊಡ್ಡಪ್ಪಗೌಡ ಪಾಟೀಲ ನರಿಬೋಳ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಶೋಭಾ ಸಿದ್ದು ಸಿರಸಗಿ, ಕೃಷಿ ಮತ್ತು ಕೈಗಾರಿಕೆ ಸಮಿತಿ ಅಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಿ, ಸದಸ್ಯರಾದ ದಿಲೀಪ್ ಪಾಟೀಲ, ರೇವಣಸಿದ್ದಪ್ಪ ಸಂಕಾಲಿ, ಸಂಜೀವನ್ ಯಾಕಾಪುರ, ಅರವಿಂದ ಚವ್ಹಾಣ, ಶಿವಶರಣ ಶಂಕರ ಇದ್ದರು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು