ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಸೆ.23ರಂದು ಉದ್ಘಾಟನೆಗೊಳ್ಳಲಿದ್ದು, ಈ ದಸರಾ ಹಬ್ಬ ಕಣ್ತುಂಬಿಕೊಳ್ಳಲು ರಾಜ್ಯದ ಬೇರೆ ಬೇರೆ ಕಡೆಯಿಂದ ಜನರು ಆಗಮಿಸುತ್ತಾರೆ. ಈ ಹಿನ್ನೆಲೆ ಪ್ರಯಾಣಿಕರ ದಟ್ಟಣೆ ನಿಯಂತ್ರಣಕ್ಕೆ ವಿಶೇಷ ರೈಲುಗಳು ಸಂಚರಿಸಲಿವೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.
ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು, ಬೆಳಗಾವಿ ಮತ್ತು ಮೈಸೂರು ನಡುವೆ ವಿಶೇಷ ರೈಲುಗಳು ಸಂಚರಿಸಲಿವೆ. ರೈಲು ಸಂಖ್ಯೆ, ದಿನಾಂಕ, ಸ್ಥಳ ಸೇರಿದಂತೆ ಸಂಪೂರ್ಣ ಮಾಹಿತಿ ಇಲ್ಲಿದ್ದು, ರೈಲು ಸಂಖ್ಯೆ 06271/06272: ಎಸ್ಎಂವಿಟಿ ಬೆಂಗಳೂರು-ಬೆಳಗಾವಿ–ಮೈಸೂರು ಎಕ್ಸ್ಪ್ರೆಸ್ ವಿಶೇಷ ರೈಲು:
ರೈಲು ಸಂಖ್ಯೆ 06271 2025ರ ಸೆಪ್ಟೆಂಬರ್ 30ರಂದು ಬೆಂಗಳೂರಿನ ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ನಿಂದ ಸಂಜೆ 7 ಗಂಟೆಗೆ ಹೊರಟು, ಮರುದಿನ ಬೆಳಗ್ಗೆ 7.30ಕ್ಕೆ ಬೆಳಗಾವಿ ತಲುಪಲಿದೆ. ಈ ರೈಲು ಚಿಕ್ಕಬಾಣಾವರ, ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಎಸ್ಎಂಎಂ ಹಾವೇರಿ, ಎಸ್ಎಸ್ಎಸ್ ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ ಮತ್ತು ಖಾನಾಪುರ ನಿಲ್ದಾಣಗಳಲ್ಲಿ ನಿಲ್ಲಲಿದೆ.
ರೈಲು ಸಂಖ್ಯೆ 06272 2025ರ ಅಕ್ಟೋಬರ್ 1 ರಂದು ಬೆಳಗಾವಿಯಿಂದ ಸಂಜೆ 5.30ಕ್ಕೆ ಹೊರಟು, ಮರುದಿನ ಬೆಳಗ್ಗೆ 7.45ಕ್ಕೆ ಮೈಸೂರಿಗೆ ತಲುಪಲಿದೆ. ಈ ರೈಲು ಮಾರ್ಗದಲ್ಲಿ ಖಾನಾಪುರ, ಲೋಂಡಾ, ಅಳ್ನಾವರ, ಧಾರವಾಡ, ಎಸ್ಎಸ್ಎಸ್ ಹುಬ್ಬಳ್ಳಿ, ಎಸ್ಎಂಎಂ ಹಾವೇರಿ, ಹರಿಹರ, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು, ಚಿಕ್ಕಬಾಣಾವರ, ಯಶವಂತಪುರ, ಕೆಎಸ್ಆರ್ ಬೆಂಗಳೂರು ಮತ್ತು ಮಂಡ್ಯ ನಿಲ್ದಾಣಗಳಲ್ಲಿ ನಿಲುಗಡೆ ನೀಡಲಿದೆ.
ರೈಲು ಸಂಖ್ಯೆ 06273/06274 ಮೈಸೂರು–ಬೆಳಗಾವಿ–ಎಸ್ಎಂವಿಟಿ ಬೆಂಗಳೂರು ಎಕ್ಸ್ಪ್ರೆಸ್ ವಿಶೇಷ ರೈಲು:
ರೈಲು ಸಂಖ್ಯೆ 06273 2025ರ ಅಕ್ಟೋಬರ್ 2ರಂದು ಮೈಸೂರಿನಿಂದ ರಾತ್ರಿ 11.45ಕ್ಕೆ ಹೊರಟು, ಅಕ್ಟೋಬರ್ 3 ರಂದು ಮಧ್ಯಾಹ್ನ 12.30ಕ್ಕೆ ಬೆಳಗಾವಿಯನ್ನು ತಲುಪಲಿದೆ. ಈ ರೈಲು ಮಂಡ್ಯ, ಕೆಎಸ್ಆರ್ ಬೆಂಗಳೂರು, ಯಶವಂತಪುರ, ಚಿಕ್ಕಬಾಣಾವರ, ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಎಸ್ಎಂಎಂ ಹಾವೇರಿ, ಎಸ್ಎಸ್ಎಸ್ ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ ಮತ್ತು ಖಾನಾಪುರ ನಿಲ್ದಾಣಗಳಲ್ಲಿ ನಿಲ್ಲಲಿದೆ.
ರೈಲು ಸಂಖ್ಯೆ 06274 2025ರ ಅಕ್ಟೋಬರ್ 3ರಂದು ಬೆಳಗಾವಿಯಿಂದ ಸಂಜೆ 5.30ಕ್ಕೆ ಹೊರಟು, ಮರುದಿನ ಬೆಳಗ್ಗೆ 5ಕ್ಕೆ ಬೆಂಗಳೂರಿನ ಎಸ್ಎಂವಿ ಟರ್ಮಿನಲ್ ತಲುಪಲಿದೆ. ಇದು ಖಾನಾಪುರ, ಲೋಂಡಾ, ಅಳ್ನಾವರ, ಧಾರವಾಡ, ಎಸ್ಎಸ್ಎಸ್ ಹುಬ್ಬಳ್ಳಿ, ಎಸ್ಎಂಎಂ ಹಾವೇರಿ, ಹರಿಹರ, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು ಮತ್ತು ಚಿಕ್ಕಬಾಣಾವರ ನಿಲ್ದಾಣಗಳಲ್ಲಿ ನಿಲುಗಡೆ ನೀಡಲಿದೆ.

ರೈಲು ಸಂಖ್ಯೆ 06275/06276 ಎಸ್ಎಂವಿಟಿ ಬೆಂಗಳೂರು–ಬೆಳಗಾವಿ–ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್ಪ್ರೆಸ್ ರೈಲು: ರೈಲು ಸಂಖ್ಯೆ 06275 2025ರ ಅಕ್ಟೋಬರ್ 4 ರಂದು ಬೆಂಗಳೂರಿನ ಎಸ್ಎಂವಿಟಿಯಿಂದ ಸಂಜೆ 7 ಗಂಟೆಗೆ ಹೊರಟು, ಮರುದಿನ ಬೆಳಿಗ್ಗೆ 8.25ಕ್ಕೆ ಬೆಳಗಾವಿ ತಲುಪಲಿದೆ.
ರೈಲು ಸಂಖ್ಯೆ 06276 2025ರ ಅಕ್ಟೋಬರ್ 5ರಂದು ಬೆಳಗಾವಿಯಿಂದ ಸಂಜೆ 5.30ಕ್ಕೆ ಹೊರಟು, ಮರುದಿನ ಬೆಳಗ್ಗೆ 5ಕ್ಕೆ ಬೆಂಗಳೂರಿನ ಎಸ್ಎಂವಿಟಿಗೆ ತಲುಪಲಿದೆ. ಈ ರೈಲು ಎರಡೂ ದಿಕ್ಕಿನಲ್ಲಿಯೂ ಚಿಕ್ಕಬಾಣಾವರ, ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಎಸ್ಎಂಎಂ ಹಾವೇರಿ, ಎಸ್ಎಸ್ಎಸ್ ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ ಮತ್ತು ಖಾನಾಪುರ ನಿಲ್ದಾಣಗಳಲ್ಲಿ ನಿಲ್ಲಲಿದೆ.
ಈ ಎಲ್ಲಾ ರೈಲುಗಳು (06271/06272, 06273/06274 ಮತ್ತು 06275/06276) ಒಟ್ಟು 19 ಬೋಗಿಗಳನ್ನು ಹೊಂದಿದ್ದು, ಅವುಗಳಲ್ಲಿ 1 ಎಸಿ 2-ಟೈರ್, 3 ಎಸಿ 3-ಟೈರ್, 10 ಸ್ಲೀಪರ್ ಕ್ಲಾಸ್, 3 ಜನರಲ್ ಸೆಕೆಂಡ್ ಕ್ಲಾಸ್ ಮತ್ತು 2 ಎಸ್ಎಲ್ಆರ್/ಡಿ ಬೋಗಿಗಳು ಇರಲಿವೆ.
ಹಬ್ಬದ ಸಮಯದಲ್ಲಿ ಪ್ರಯಾಣಿಕರು ಈ ವಿಶೇಷ ಸೇವೆಗಳ ಸದುಪಯೋಗ ಪಡೆದುಕೊಳ್ಳುಬೇಕು, ಹೆಚ್ಚಿನ ವಿವರಗಳಿಗಾಗಿ, ಪ್ರಯಾಣಿಕರು ಭಾರತೀಯ ರೈಲ್ವೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಬಹುದು, ಸಹಾಯವಾಣಿ ಸಂಖ್ಯೆ 139ಗೆ ಕರೆ ಮಾಡಬಹುದು ಅಥವಾ ಹತ್ತಿರದ ರೈಲು ನಿಲ್ದಾಣವನ್ನು ಸಂಪರ್ಕಿಸಬಹುದು.
Related


You Might Also Like
KKRTC ಕಂಡಕ್ಟರ್ ಮೇಲೆ ಹಲ್ಲೆ ಪ್ರಕರಣ : ಆರೋಪಿಗೆ 3 ವರ್ಷ ಜೈಲು, 6 ಸಾವಿರ ರೂ. ದಂಡ ವಿಧಿಸಿದ ಕೋರ್ಟ್ ಮಹತ್ವದ ತೀರ್ಪು
ಹೊಸಪೇಟೆ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಿರ್ವಾಹಕರ ಮೇಲೆ ಹಲ್ಲೆ ಮಾಡಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದ ಪ್ರಕರಣದಲ್ಲಿ ಅಪರಾಧಿಗೆ ಮೂರು ವರ್ಷ ಜೈಲು ಶಿಕ್ಷೆ ಹಾಗೂ...
ಮೆಜೆಸ್ಟಿಕ್ ಬಳಿ ಮೊಬೈಲ್ ಶೌಚಾಲಯ ವ್ಯವಸ್ಥೆ: ಆಯುಕ್ತ ರಾಜೇಂದ್ರ ಚೋಳನ್
ಬೆಂಗಳೂರು: ಮೆಜೆಸ್ಟಿಕ್ ಬಳಿ ಪಾದಚಾರಿ ಮಾರ್ಗಗಳಲ್ಲಿ ಸಾರ್ವಜನಿಕರು ಮೂತ್ರ ವಿಸರ್ಜನೆ ಮಾಡುವುದನ್ನು ನಿಯಂತ್ರಿಸುವ ಸಲುವಾಗಿ ಮೊಬೈಲ್ ಶೌಚಾಲಯಗಳ ವ್ಯವಸ್ಥೆ ಮಾಡಲು ಬೆಂಗಳೂರು ಕೇಂದ್ರ ನಗರ ಪಾಲಿಕೆ ಆಯುಕ್ತರಾದ...
ಸರ್ಕಾರಿ ಬಸ್ ಚಾಲಕ-ನಿರ್ವಾಹಕರು ಎಲ್ಲದಕ್ಕೂ ಹೊಣೆಯಲ್ಲ: ಸುಜಯ ಆರ್.ಕಣ್ಣೂರ
ಬಿಎಂಟಿಸಿ ವಿರುದ್ಧ 10 ಸಾವಿರ ದೂರು' ಮುಖಪುಟ ವರದಿ ತಿಳಿಸುವ ಸಲುವಾಗಿ ಈ ಬರಹ. ನಾನು ಬಿಂಎಂಟಿಸಿ ಬಸ್ನಲ್ಲಿ 35 ವರ್ಷಗಳಿಂದ ಪ್ರಯಾಣಿಸುತ್ತಿದ್ದೇನೆ. ಇದರಲ್ಲಿ ಯಾರದು ತಪ್ಪು,...
BMTC ಬಸ್ ಚಾಲಕನ ಮೇಲೆ ಪೊಲೀಸ್ ಸಿಬ್ಬಂದಿ ಹಲ್ಲೆ ಖಂಡಿಸಿ ಚಾಲಕರ ಪ್ರತಿಭಟನೆ
ಬೆಂಗಳೂರು: ಕಾರಿಗೆ ಸೈಡ್ ಬಿಡಲಿಲ್ಲ ಎಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ಚಾಲಕನ ಮೇಲೆ ಜಿಗಣಿ ಠಾಣೆಯ ಪೊಲೀಸ್ ಸಿಬ್ಬಂದಿಯೊಬ್ಬರು ಹಲ್ಲೆ ಮಾಡಿರುವ ಘಟನೆ ನಡೆದಿದೆ....
ಭಾರತ-ಅಮೆರಿಕ ಸಂಬಂಧ ಸುಧಾರಣೆಗೆ ಅಮೆರಿಕ ಅಧ್ಯಕ್ಷ ಟ್ರಂಪ್ ಸಕಾರಾತ್ಮಕ ನಡೆ ಶ್ಲಾಘನೀಯ: ಪ್ರಧಾನಿ ಮೋದಿ
ನ್ಯೂಡೆಲ್ಲಿ: ಭಾರತ-ಅಮೆರಿಕ ಸಂಬಂಧ ಸುಧಾರಣೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸಕಾರಾತ್ಮಕ ನಡೆ ಶ್ಲಾಘನೀಯ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ನಾನು ಮೋದಿ ಅವರೊಂದಿಗೆ...
“ಗಬ್ಬರ್ ಸಿಂಗ್ ತೆರಿಗೆ” ಸಣ್ಣ ವ್ಯಾಪಾರಿಗಳ ಸರ್ವನಾಶ ಮಾಡಲಿದೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ತೆರಿಗೆದಾರ ಜನತೆ ಮತ್ತು ವ್ಯಾಪಾರಿ ವರ್ಗದ ಮೇಲಿನ ಆರ್ಥಿಕ ಭಾರ ಮತ್ತು ಅನುಷ್ಠಾನದ ಜಂಜಾಟವನ್ನು ತಗ್ಗಿಸಲು ಅತ್ಯಗತ್ಯವಾಗಿದ್ದ ತೆರಿಗೆ ಸುಧಾರಣೆಯನ್ನು ಜಾರಿಗೆ ತರುವ ಸರಕು ಸೇವಾ...
ಜಾತಿ ವ್ಯವಸ್ಥೆ ಕಾರಣಕ್ಕೆ ಅವಕಾಶಗಳು ಎಲ್ಲರಿಗೂ ಸಿಗುತ್ತಿಲ್ಲ: CM ಸಿದ್ದರಾಮಯ್ಯ
ಬೆಂಗಳೂರು: ಜಾತಿ ವ್ಯವಸ್ಥೆ ಕಾರಣಕ್ಕೆ ಅಸಮಾನ ಸಮಾಜ ನಿರ್ಮಾಣವಾಗಿ ಅವಕಾಶಗಳು ಎಲ್ಲರಿಗೂ ಸಿಗುತ್ತಿಲ್ಲ. ಶೂದ್ರರ ಜತೆಗೆ ಮಹಿಳೆಯರನ್ನೂ ಶಿಕ್ಷಣದಿಂದ ಹೊರಗಿಡಲಾಗಿತ್ತು. ಆದರೆ ಈಗ ಶಿಕ್ಷಣದ ಹಕ್ಕಿನ ಕಾರಣಕ್ಕೆ...
ನಮ್ಮ ಸರ್ಕಾರ ವರ್ಷಕ್ಕೆ 65 ಸಾವಿರ ಕೋಟಿ ರೂ. ಶಿಕ್ಷಣಕ್ಕೆ ಖರ್ಚು ಮಾಡುತ್ತಿದೆ: ಸಿಎಂ
ಬೆಂಗಳೂರು: ಶಿಕ್ಷಣ ನಮ್ಮ ಸರ್ಕಾರದ ಆದ್ಯತಾ ಕಾರ್ಯಕ್ರಮವಾಗಿದ್ದು, ವರ್ಷಕ್ಕೆ 65 ಸಾವಿರ ಕೋಟಿ ರೂಪಾಯಿಯನ್ನು ಶಿಕ್ಷಣಕ್ಕೆ ಖರ್ಚು ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಇಂದು ವಿಧಾನಸೌಧದ...
ಜಿಬಿಎ: ಬೆಳ್ಳಂಬೆಳಗ್ಗೆ ವಿವಿಧ ಸ್ಥಳಗಳಿಗೆ ಭೇಟಿ ನೀಡಿದ ಐದು ನಗರ ಪಾಲಿಕೆಗಳ ಆಯುಕ್ತರು
ಬೆಂಗಳೂರು: ಐದು ನಗರ ಪಾಲಿಕೆಗಳ ಆಯುಕ್ತರಿಂದ ಬೆಳಗ್ಗೆ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು ಇತ್ತ ಕೇಂದ್ರ ನಗರ ಪಾಲಿಕೆ ಆಯುಕ್ತರು ಅಧಿಕಾರಿಗಳೊಂದಿಗೆ ಸಭೆ...