NEWSನಮ್ಮರಾಜ್ಯವಿಜ್ಞಾನ

ಪರ್ವತ, ಜಲಚರಗಳೆಲ್ಲವೂ ನಮ್ಮ ಬದುಕಿನ ಭಾಗಗಳೇ

ವಿಶ್ವ ಪರಿಸರ ದಿನಾಚರಣೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅಭಿಮತ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು:  ಜೀವ ವೈವಿಧ್ಯೆತೆ ಇದ್ದರಷ್ಟೆ ಪ್ರಕೃತಿಯ ಸಮತೋಲನ ಸಾಧ್ಯ. ಪ್ರಾಣಿ, ಪಕ್ಷಿಗಳು, ಗಿಡ ಮರಗಳು, ಸಸ್ಯ ಸಂಪತ್ತು, ಪರ್ವತಗಳು, ಜಲಚರಗಳೆಲ್ಲವೂ ನಮ್ಮ ಬದುಕಿನ ಭಾಗಗಳೇ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.

ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಅರಣ್ಯ ಪರಿಸರ ಮತ್ತು ಜೀವಿ ಪರಿಸ್ಥಿತಿ ಇಲಾಖೆಯ ವತಿಯಿಂದ ಆಯೋಜಿಸಲಾದ “ವಿಶ್ವ ಪರಿಸರ ದಿನಾಚರಣೆ” ಉದ್ಘಾಟನೆ ಹಾಗೂ ಹಸಿರು ವಿಡಿಯೋ ಸರಣಿ ಯೂಟ್ಯೂಬ್ ಬಿಡುಗಡೆ ಮಾಡಿ ಮಾತನಾಡಿದರು.

ಗಾಳಿ, ನೀರು, ಭೂಮಿ, ಆಕಾಶ, ಸ್ವಚ್ಛವಾಗಿದ್ದರೆ ಮಾತ್ರ ನಮ್ಮ ಜೀವನ ಆರೋಗ್ಯವಾಗಿರುತ್ತದೆ. ಮನುಷ್ಯ ತನ್ನ ಜೀವಿತಾವಧಿಯಲ್ಲಿ ಗಿಡಮರಗಳನ್ನು ನೆಟ್ಟು ಬೆಳಿಸಿದರೆ ಒಂದು ದೇವಾಲಯವನ್ನೇ ಕಟ್ಟಿದಷ್ಟು ಪುಣ್ಯ ಲಭಿಸುತ್ತದೆ. ಮುಂದಿನ ಪೀಳಿಗೆಗೆ ನಾವು ನೀಡುಬಹುದಾದ ಬಹುದೊಡ್ಡ ಬಳುವಳಿಯೇ ಉತ್ತಮ ಪರಿಸರ ಎಂದು ತಿಳಿಸಿದರು.

ಪ್ರಕೃತಿಯನ್ನು ಸಂರಕ್ಷಿಸುವ ಗುರುತರ ಜವಬ್ದಾರಿ ನಮ್ಮ ಮೇಲಿದೆ. ನಮ್ಮ ಆಧುನಿಕ ಜೀವನ ಶೈಲಿಯಿಂದ ಪರಿಸರದ ಅಪರೂಪದ ಪ್ರಾಣಿ-ಪಕ್ಷಿಗಳನ್ನು ನಾವಿಂದು ಕಳೆದುಕೊಂಡಿದ್ದೇವೆ. ಇದರಿಂದ ಪ್ರಕೃತಿಯ ಅಸಮತೋಲನ ಹೆಚ್ಚಾಗುತ್ತಿದೆ. “ಪ್ರಕೃತಿಯು ಮನುಷ್ಯನ ಅಗತ್ಯತೆಗಳನ್ನು ಪೂರೈಸಬಲ್ಲದೇ ಹೊರತು ಮನುಷ್ಯನ ದುರಾಸೆಗಳನ್ನಲ್ಲ” ಎಂದು ಮಹಾತ್ಮ ಗಾಂಧೀಜಿಯವರು ಹೇಳಿದ ಮಾತು ಸದಾ ಕಾಲಕ್ಕೂ ಪ್ರಸ್ತುತವಾದುದು ಎಂದರು.

ನಿಸರ್ಗ ಹಾಗೂ ಪರಿಸರ ನಮ್ಮ ಬದುಕಿನ ಭಾಗ. ಪ್ಲಾಸ್ಟಿಕ್ ಬಳಕೆಯನ್ನು ಆದಷ್ಟೂ ಕಡಿಮೆ ಮಾಡಿ ಪರಿಸರ ಸಂರಕ್ಷಣೆ ಮಾಡುವುದಲ್ಲದೆ ಜೀವ ವೈವಿಧ್ಯವನ್ನು ರಕ್ಷಿಸಬೇಕು. ನಾವು ಪರಿಸರದೊಂದಿಗೆ ಸಾಮರಸ್ಯ ಸಾಧಿಸಿದರೆ ಮಾತ್ರ ಸಮತೋಲನದ ಬದುಕು ಸಾಧ್ಯ. ಮಿತಿಮೀರಿದ ಸಂಪನ್ಮೂಲಗಳ ಬಳಕೆ ಯಾವತ್ತೂ ಆಪಾಯಕ್ಕೆ ರಹದಾರಿ ಎಂಬ ಅರಿವು ನಮಗಿರಬೇಕು ಎಂದು ತಿಳಿಸಿದರು.

ಕೋವಿಡ್ – 19 ತಡೆಗಟ್ಟಲು ಲಾಕ್‍ಡೌನ್ ಮಾಡಿದ ಸಂದರ್ಭದಲ್ಲಿ ಪರಿಸರ ಮಾಲಿನ್ಯ ಗಮನಾರ್ಹವಾಗಿ ಕಡಿಮೆಯಾಗಿದೆ. ಮನುಷ್ಯನಿಗೆ ತೊಂದರೆಯಾದರೂ ಪ್ರಕೃತಿ ಪುನ್ಛೇತನಗೊಳಿಸಲು ಇದೊಂದು ಸದಾವಕಾಶವಾಯಿತು. “ಜೀವ ವೈವಿಧ್ಯ” ಈ ವರ್ಷದ ಘೋಷವಾಕ್ಯವಾಗಿರುವುದು ಅತ್ಯಂತ ಔಚಿತ್ಯಪೂರ್ಣ ಎಂದರು.

ಅರಣ್ಯ ಸಚಿವ ಅನಂದ್ ಸಿಂಗ್, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ, ಕರ್ನಾಟಕ ಜೀವವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಆಶಿಸರ್, ಅರಣ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಸಂದೀಪ್ ದವೆ, ಮಾಲಿನ್ಯ ನಿಯಂತ್ರಣಾ ಮಂಡಳಿ ಅಧ್ಯಕ್ಷ ವಿಜಯ್‍ಕುಮಾರ್ ಗೋಗಿ,  ಪರಿಸರ ತಜ್ಞೆ ಸುಮಂಗಳ ಮಮ್ಮಿಕಟ್ಟಿ, ಮುಂತಾದವರು ಭಾಗವಹಿಸಿದ್ದರು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು