ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಸೋಂಕು ತಡೆಗಟ್ಟಲು ಮುಂಜಾಗ್ರತಾ ಕ್ರಮಕೈಗೊಳ್ಳಲಾಗಿದೆ ಎಂದು ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಸಿ.ಟಿ. ರವಿ ತಿಳಿಸಿದರು.
ರಾಜ್ಯಾದ್ಯಂತ ಆರಂಭವಾಗಲಿರುವ ಹೋಟೆಲ್, ರೆಸ್ಟೋರೆಂಟ್, ಜಂಗಲ್ ಲಾಡ್ಜಸ್, ಕೆ.ಎಸ್.ಟಿ.ಡಿ.ಸಿ. ಹೋಟೆಲ್ಗಳು ಅನುಸರಿಸಬೇಕಾದ ಕ್ರಮಗಳ ಮಾರ್ಗಸೂಚಿ ಪುಸ್ತಕವನ್ನು ಶನಿವಾರ ವಿಧಾನಸೌಧದಲ್ಲಿ ಬಿಡುಗಡೆ ಮಾಡಿ ಮಾತನಾಡಿದರು.
ಜೂನ್ 8 ರಿಂದ ಹೋಟೆಲ್ಗಳು, ಆತಿಥ್ಯ ಘಟಕಗಳು, ಪ್ರವಾಸಿತಾಣಗಳನ್ನು ಸಾರ್ವಜನಿಕರಿಗೆ ತೆರೆಯಲು ತೀರ್ಮಾನಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಇವುಗಳಿಗೆ ಕೆಲ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡು ಪ್ರವಾಸಿಗರಿಗೆ ಕೋವಿಡ್-19 ಸೋಂಕು ಹರಡದಂತೆ ಮುಂಜಾಗ್ರತೆ ವಹಿಸಬೇಕು . ಈ ಕುರಿತು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಪ್ರವಾಸಿಗರಿಗೆ ಜಾಗೃತಿ ಮೂಡಿಸುವ ಅಗತ್ಯವಿದ್ದು, ಇಲಾಖೆಯು ಸಮಗ್ರ ಮಾರ್ಗ ಸೂಚಿಗಳನ್ನು ಪುಸ್ತಕಗಳ ರೂಪದಲ್ಲಿ ಹೊರತಂದಿದೆ ಎಂದರು
ಪ್ರವಾಸೋದ್ಯಮ ಕೇಂದ್ರವು ಸಂಪೂರ್ಣವಾಗಿ ನೆಲಕಚ್ಚಿದ್ದು, ಇದರಲ್ಲಿ ಸುಮಾರು 35 ಲಕ್ಷ ಮಂದಿ ಅವಲಂಬಿತರಿದ್ದಾರೆ. ಪ್ರವಾಸೋದ್ಯಮ ಕ್ಷೇತ್ರ ಪುನರುಜ್ಜೀವನಗೊಳಿಸಿ , ಈ ಕ್ಷೇತ್ರವನ್ನು ಚೇತರಿಸಿಕೊಳ್ಳುವಂತೆ ಮಾಡುವ ಜವಾಬ್ದಾರಿ ನಮ್ಮದಾಗಿದೆ ಎಂದು ಹೇಳಿದರು.
ಪ್ರವಾಸೋದ್ಯಮ, ಕೃಷಿ ಹಾಗೂ ತೋಟಗಾರಿಕೆ ಇಲಾಖೆಯ ಸಹಯೋಗದಲ್ಲಿ “ ಅಗ್ರೀ ಟೂರಿಸಂ” ನ್ನು ಜಾರಿಗೆ ತರಲು ಉದ್ದೇಶಿಸಲಾಗಿದ್ದು, ಈ ಬಗ್ಗೆ ಸ್ಪಷ್ಟ ರೂಪುರೇಷೆ ತಯಾರಿಸಲಾಗುತ್ತಿದೆ ಎಂದು ತಿಳಿಸಿದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಪ್ರಾಥಮಿಕವಾಗಿ ಕರ್ನಾಟಕದ ಯಾವುದಾದರೂ ಒಂದು ಸ್ಥಳವನ್ನು ಆಯ್ಕೆ ಮಾಡಿಕೊಂಡು ಸ್ಥಳೀಯರ ಸಹಭಾಗಿತ್ವದಲ್ಲಿ ಇದನ್ನು ಯಸಸ್ವಿಗೊಳಿಸಲಾಗುವುದು. ಇದರಿಂದ ನಗರ ವಾಸಿಗಳಿಗೆ ಕೃಷಿ ಚಟುವಟಿಕೆಗಳ ಅನುಭವ ಮೂಡಿಸುವುದರೊಂದಿಗೆ, ರೈತರ ಆದಾಯವನ್ನು ದ್ವಿಗುಣಗೊಳಿಸುವ ಉದ್ದೇಶವನ್ನು ಹೊಂದಲಾಗಿದೆ ಎಂದರು.
ಶ್ರೀಮಂತ ಬಂಜಾರ ಸಂಸ್ಕøತಿಯನ್ನು ಪ್ರವಾಸಿಗರಿಗೆ ಪರಿಚಯಿಸುವ ದೃಷ್ಟಿಯಿಂದ ಕೊಪ್ಪಳದ ಬಹದ್ದೂರ ಬಾಂಡಾ ಸ್ಥಳದಲ್ಲಿ ಬಂಜಾರ ಕಲ್ಚರಲ್ ಹೆರಿಟೇಜ್ನ್ನು ಸಮಾಜ ಕಲ್ಯಾಣ ಇಲಾಖೆ ಹಾಗೂ ತಾಂಡಾ ಅಭಿವೃದ್ಧಿ ನಿಗಮದ ಸಹಯೋಗದೊಂದಿಗೆ ಸ್ಥಾಪಿಸಲು ಯೋಜನಾ ವರದಿ ತಯಾರಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail