NEWSನಮ್ಮಜಿಲ್ಲೆಬೆಂಗಳೂರು

BMTC ಸಂಸ್ಥೆಯಿಂದ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕೊಡಿ: ವ್ಯವಸ್ಥಾಪಕ ನಿರ್ದೇಶಕರಿಗೆ ಟಿಸಿ ಶ್ರೀನಿವಾಸ್‌ ಮನವಿ

BMTC MD ರಾಮಚಂದ್ರನ್‌
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರವನ್ನು ಈ ಹಿಂದಿನಿಂದಲೂ ಸ್ವಾತಂತ್ರ್ಯೋತ್ಸವ, ಕನ್ನಡ ರಾಜ್ಯೋತ್ಸವದಂದು ಕೊಡಲಾಗುತ್ತಿತ್ತು ಆದರೆ, ಇತ್ತೀಚೆಗೆ ನಿಲ್ಲಿಸಿರುವುದು ಸರಿಯಾದ ಕ್ರಮವಲ್ಲ ಆದ್ದರಿಂದ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ತಾವು ಪ್ರತಿಭಾ ಪುರಸ್ಕಾರ ನೀಡುವುದಕ್ಕೆ ಮರು ಚಾಲನೆ ನೀಡಬೇಕು ಎಂದು ರಾಮಚಂದ್ರನ್‌ ಅವರಲ್ಲಿ ನೌಕರ ಶ್ರೀನಿವಾಸ್‌ ಮನವಿ ಮಾಡಿದ್ದಾರೆ.

ಈ ಸಂಬಂಧ BMTC ವಾಯುವ್ಯ ವಲಯ ಘಟಕ-22ರ ಸಂಚಾರ ನಿಯಂತ್ರಕ ಎನ್.ಶ್ರೀನಿವಾಸ ಎಂಡಿಗಳಿಗೆ ಪತ್ರ ಬರೆದಿದ್ದು ಅದರಲ್ಲಿ ವಿವರಿಸಿರುವಂತೆ ಈ ಹಿಂದಿನಿಂದಲೂ ಸ್ವಾತಂತ್ರ್ಯೋತ್ಸವ / ಕನ್ನಡ ರಾಜ್ಯೋತ್ಸವ ದಿನದಂದು ಸಂಸ್ಥೆಯ ಸಿಬ್ಬಂದಿಗಳ/ ನೌಕರರ ಮಕ್ಕಳಿಗೆ 10ನೇ ತರಗತಿಯಿಂದ ಪದವೀದರ ವಿದ್ಯಾರ್ಥಿ/ ವಿದ್ಯಾರ್ಥಿನಿಯರಿಗೆ ಸಂಸ್ಥೆಯು ಪ್ರತಿಭಾ ಪುರಸ್ಕಾರ ನೀಡಲಾಗುತ್ತಿತ್ತು. ಆದರೆ ಇತ್ತೀಚೆಗೆ ಸಂಸ್ಥೆಯು ನೌಕರರ ಮಕ್ಕಳಿಗೆ ಈ ಪ್ರತಿಭಾ ಪುರಸ್ಕಾರ ನೀಡುವುದನ್ನು ನಿಲ್ಲಿಸಿದೆ.

ಈ ಹಿಂದೆ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಉಪೇಂದ್ರ ತ್ರಿಪಾಠಿಯವರ ಕಾಲದಿಂದ ಸಿಬ್ಬಂದಿಗಳ/ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡುತ್ತಿದ್ದು ಹಾಗೂ ಕನ್ನಡದ ಸಾಹಿತಿಗಳಿಗೆ ಸಂಸ್ಥೆಯ ವತಿಯಿಂದ “ನೃಪತುಂತ” ಪ್ರಶಸ್ತಿ ನೀಡುವ ಸಲುವಾಗಿ 2 ಕೋಟಿ ರೂಪಾಯಿಗಳನ್ನು ಮೀಸಲಿಟ್ಟು ಈ ಹಣವನ್ನು ಬ್ಯಾಂಕ್‍ನಲ್ಲಿ ಕಾಯಂ ಠೇವಣಿಯಾಗಿ ಇಟ್ಟು ಅದರಿಂದ ಬರುತ್ತಿರುವ ಬಡ್ಡಿಯ ಹಣದಿಂದ ನೃಪತುಂಗ ಪ್ರಶಸ್ತಿ ಪುರಸ್ಕೃತರನ್ನು ಆಯ್ಕೆ ಮಾಡಿ ಗೌರವಿಸಲಾಗುತ್ತಿತ್ತು.

ಆದರೆ ಇತ್ತೀಚಿನ ವರ್ಷಗಳಲ್ಲಿ ಸಂಸ್ಥೆಯ ಸಿಬ್ಬಂದಿಗಳ/ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡುವುದನ್ನು ನಿಲ್ಲಿಸಲಾಗಿದೆ. ಸಂಸ್ಥೆಯು ತನ್ನ ಸಿಬ್ಬಂದಿಗಳ/ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ ನೀಡದಷ್ಟು ಬಡವಾಗಿಲ್ಲ. ಸಂಸ್ಥೆಯು ಬೆಂಗಳೂರು ನಗರದ ಸುತ್ತಮುತ್ತ ಸಾವಿರಾರು ಎಕರೆ ಭೂಮಿ, ಕಟ್ಟಡಗಳು, ಡಿಪೋಗಳು, ಕಚೇರಿಗಳನ್ನು ಹೊಂದಿದೆ, ಸಂಸ್ಥೆಗೆ ಮಾಹೆಯಾನ ಕೋಟ್ಯಂತರ ರೂಪಾಯಿ ಆದಾಯ ಬರುತ್ತಿದೆ.

ಆದುದರಿಂದ ಸಂಸ್ಥೆಯ ಅತ್ಯುನ್ನತ ಹುದ್ದೆಯಲ್ಲಿರುವ ತಾವು ಸಿಬ್ಬಂದಿಗಳ/ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡುವುದನ್ನು ಮತ್ತೆ ನವೆಂಬರ್-2025ರಿಂದ ಪುನಾರಂರಭಿ ಸಂಸ್ಥೆಯ ಸಿಬ್ಬಂದಿಗಳ/ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡುವ ಮೂಲಕ ಶ್ರಮವಹಿಸಿ ದುಡಿಯುತ್ತಿರುವ ಸಂಸ್ಥೆಯ ನೌಕರರ ಕುಟುಂಬಗಳನ್ನು ಹಾಗೂ ವಿದ್ಯಾರ್ಥಿಗಳನ್ನು ಗೌರವಿಸಬೇಕೆಂದು ತಮ್ಮಲ್ಲಿ ವಿನಮ್ರತೆಯಿಂದ ಕೋರುತ್ತೇನೆ ಎಂದು ಶ್ರೀನಿವಾಸ ಪತ್ರ ಬರೆದು ವಿನಂತಿಸಿದ್ದಾರೆ.

ಮಾರ್ಗ ಮಧ್ಯೆ ಕೆಟ್ಟು ಹೋಗುತ್ತಿರುವ ಇಟಿಎಂಗಳು: ಬಹುತೇಕ ಘಟಕಗಳಲ್ಲಿ ಸಂಸ್ಥೆಯ ಇಟಿಎಂ ಯಂತ್ರಗಳು ಸರಿಯಾಗಿ ಕೆಲಸ ಮಾಡದೆ ಮಾರ್ಗ ಮಧ್ಯೆ ಕೆಟ್ಟು ಹೋಗುತ್ತಿವೆ ಇದರಿಂದಾಗಿ ಸಾರ್ವಜನಿಕ ಪ್ರಯಾಣಿಕರಿಗೆ ನಿರೀಕ್ಷೆಯ ಮಟ್ಟದಲ್ಲಿ ಸೇವೆ ದೊರೆಯುತ್ತಿಲ್ಲ ಹಾಗೂ ಸಂಸ್ಥೆಯ ದೈನಂದಿನ ಸಾರಿಗೆ ಆದಾಯ ಗಣನೀಯವಾಗಿ ಇಳಿಕೆಯಾಗಲು ಕಾರಣವಾಗಿದೆ.

ಇಟಿಎಂ ಯಂತ್ರಗಳನ್ನು ಬದಲಾಯಿಸಿಕೊಳ್ಳಲು / ಬ್ಯಾಟರಿ ಬದಲಾಯಿಸಿಕೊಳ್ಳಲು ನಿರ್ವಾಹಕರು ಸುತ್ತುಗಳನ್ನು ಮೊಟಕುಗೊಳಿಸಿ ಘಟಕಕ್ಕೆ ಬರುತ್ತಿರುವುದರಿಂದ ಸುತ್ತುಗಳು ರದ್ದಾಗುವುದಲ್ಲದೆ ಸಾರಿಗೆ ಆದಾಯ ಸಹ ಕುಂಠಿತವಾಗುತ್ತಿದೆ. ಹೀಗಾಗಿ ತಾವು ಗುಣ ಮಟ್ಟದ ಇಟಿಎಂ ಯಂತ್ರಗಳನ್ನು ಸಂಸ್ಥೆಗೆ ಖರೀದಿ ಮಾಡಿ ನಿರ್ವಾಹಕರಿಗೆ ಆಗುತ್ತಿರುವ ತೊಂದರೆ, ಪ್ರಯಾಣಿಕರಿಗೆ ಸೇವೆಯಲ್ಲಿ ವ್ಯತ್ಯಯ ಸಂಸ್ಥೆಯ ಸಾರಿಗೆ ಆದಾಯಕ್ಕೆ ಧಕ್ಕೆ ಉಂಟಾಗುತ್ತಿದೆ ಆದ್ದರಿಂದ ಇದನ್ನು ತಡೆಯುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. Letter to Managing Director, BMTC-Prathibha Puraskara

Megha
the authorMegha

Leave a Reply

error: Content is protected !!
Latest news
ಪೆಟ್ರೋಲ್, ಡೀಸೆಲ್‌ಗೆ ಪರ್ಯಾಯವಾಗಿ ನೂರಕ್ಕೆ ನೂರರಷ್ಟು ಎಥನಾಲ್ ಬಳಕೆ: ಕೇಂದ್ರ ಸರ್ಕಾರದ ನಿರ್ಧಾರ ಸ್ವಾಗತ 8ನೇ ವೇತನ ಆಯೋಗ: ಸಲಹೆ ಸಂಗ್ರಹಕ್ಕೆ ಸರ್ಕಾರ ಕೊಟ್ಟಿದ್ದ ಗಡುವು ಇಂದಿಗೆ ಮುಕ್ತಾಯ- ವರದಿ ಸಲ್ಲಿಕೆಯೊಂದೇ ಬಾಕಿ ಬೇಕಾಬಿಟ್ಟಿ ಗ್ಯಾರಂಟಿಗಳ ಕೊಡುವುದರಿಂದ ದೇಶದ ಆರ್ಥಿಕತೆ ಮೇಲೆ ಪರಿಣಾಮ ಬೀರಲಿದೆ: ಸರ್ಕಾರಗಳಿಗೆ ಎಚ್ಚರಿಕೆ ನೀಡಿ ವಿತ್ತ... ಲಾರಿ ಓವರ್‌ಟೇಕ್‌ ಮಾಡುವ ವೇಳೆ ಚಾಲಕನ ನಿಯಂತ್ರ ಕಳೆದುಕೊಂಡ ಕಾರು ಪಲ್ಟಿ: ದಂಪತಿಗೆ ಗಂಭೀರ ಗಾಯ ಆಸ್ಪತ್ರೆಗೆ ದಾಖಲು ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ, ಆತಂಕಬೇಡ: ಸಿಎಂ ಶಿವಕುಮಾರ್‌ ಭರವಸೆ KSRTC ಕನಕಪುರ ಘಟಕದಲ್ಲಿ ಚಾಲಕನ ಮೇಲೆ ಹಲ್ಲೆ ಮಾಡಿದ ನಾಲ್ವರ ಅಮಾನತು ಸಿಎಂ ತವರಲ್ಲೇ KSRTC ಚಾಲನಕನ ಮೇಲೆ ಹಲ್ಲೆ, ಗೂಂಡಾ ವರ್ತನೆ: ಡಿಎಂ ಎದುರೇ ಘಟಕದಲ್ಲಿ ರೌಡಿಸಂ ನೌಕರನ ವಿರುದ್ಧ ಸಾಬೀತಾಗಿರುವ ದುರ್ನಡತೆಗೆ ಹೋಲಿಸಿದರೆ ಆತನ ವಜಾ ಮಾಡಿರುವುದು ಕಾನೂನುಬಾಹಿರ,ಅತ್ಯಂತ ಕಠಿಣ ಶಿಕ್ಷೆ: ಸು... ತಜ್ಞರ ಸಲಹೆ ಪಡೆದು ಪಾಲಿಕೆ ಆಯವ್ಯಯ ಅನುದಾನ ಬಳಕೆ : GBA ದಕ್ಷಿಣ ಆಯುಕ್ತ BMTC: ಜೂನ್‌ 18ರೊಳಗೆ ನಿವೃತ್ತ ನೌಕರರು ಏ-2018 ರಿಂದ ಜು-2018ರವರೆಗಿನ ತುಟ್ಟಿಭತ್ಯೆ ಪಡೆಯಲು ಬ್ಯಾಂಕ್‌ ಖಾತೆ ವಿವರ ...