NEWSಕ್ರೀಡೆನಮ್ಮಜಿಲ್ಲೆ

ಯುವಜನತೆ ಬದುಕಿನ ಶಿಸ್ತಿಗೆ ಕ್ರೀಡೆ ಮುಖ್ಯ: ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಸಚಿವ ಮುನಿಯಪ್ಪ ಅಭಿಮತ

ವಿಜಯಪಥ ಸಮಗ್ರ ಸುದ್ದಿ

ಬೆಂ.ಗ್ರಾಂ.: ಯುವ ಜನತೆ ಬದುಕಿನಲ್ಲಿ ಶಿಸ್ತು ಅಳವಡಿಸಿಕೊಳ್ಳಲು ಶಿಕ್ಷಣದ ಜತೆಗೆ ಕ್ರೀಡೆಯು ಮುಖ್ಯ. ಕ್ರೀಡೆ ಎಂಬುದು ಕೇವಲ ಮನರಂಜನೆಗೆ ಮಾತ್ರ ಸೀಮಿತವಾಗಿರದೆ ಮನುಷ್ಯನ ಮಾನಸಿಕ ಹಾಗೂ ಸಾಂಸ್ಕೃತಿಕ ಬೆಳೆವಣಿಗೆಗೂ ಸಾಕಷ್ಟು ಪ್ರಯೋಜನಕಾರಿ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪ ಹೇಳಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದೊಂದಿಗೆ ದೊಡ್ಡಬಳ್ಳಾಪುರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.

ಸರ್ಕಾರವು ಕ್ರೀಡಾ ಯೋಜನೆಗಳನ್ನು ರೂಪಿಸಿ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿವೆ. ಕ್ರೀಡೆಗೆ ಸಂಬಂಧ ಪಟ್ಟ ಸಲಕರಣೆಯನ್ನು ಕ್ರೀಡಾ ಅಧಿಕಾರಿಗಳು ಕೇಳಿ ಪಡೆಯಬೇಕು ಜತೆಗೆ ವಿದ್ಯಾರ್ಥಿಗಳು ಅದರ ಸದುಪಯೋಗ ಪಡೆದುಕೊಂಡು ಉತ್ತಮ ಕ್ರೀಡಾಪಟುಗಳಾಗಬೇಕು ಎಂದು ಕರೆ ನೀಡಿದರು.

ಇನ್ನು ಸೋಲು ಗೆಲುವು ಎನ್ನದೇ ಆಸಕ್ತಿಯಿಂದ ಭಾಗವಹಿಸುವುದು ಮುಖ್ಯ. ಹಾಗಾಗಿ ಕ್ರೀಡಾ ಮನೋಭಾವನೆಯಿಂದ ಆಟವಾಡಿ ಪ್ರತಿಭಾವಂತ ಕ್ರೀಡಾಪಟುಗಳು ರಾಜ್ಯ ಮಟ್ಟದಲ್ಲಿ ನಡೆಯುವ ದಸರಾ ಕ್ರೀಡಾಕೂಟದಲ್ಲಿ ಗೆದ್ದು ಜಿಲ್ಲೆಗೆ ಕೀರ್ತಿ ತರಬೇಕು. ಕ್ರೀಡೆಗಳು ವಿದ್ಯಾಭ್ಯಾಸದ ಅವಿಭಾಜ್ಯ ಅಂಗ. ದೈಹಿಕ ಮತ್ತು ಮಾನಸಿಕ ದೃಢತೆಯ ಜತೆಗೆ ಮನಸ್ಸಿನ ಏಕಾಗ್ರತೆ ಮೂಡಿಸುತ್ತದೆ ಮತ್ತು ಶರೀರ ಆರೋಗ್ಯಕರವಾಗಿರುತ್ತದೆ ಎಂದರು.

ದೊಡ್ಡಬಳ್ಳಾಪುರ ವಿಧಾನ ಸಭಾ ಕ್ಷೇತ್ರದ ಶಾಸಕ ಧೀರಜ್ ಮುನಿರಾಜು ಮಾತಾನಾಡಿ, ಮಕ್ಕಳ ಪ್ರತಿಭೆ ಗುರುತಿಸಲು ಕ್ರೀಡಾಕೂಟಗಳು ಸಹಕಾರಿಯಾಗಿದ್ದು, ಕ್ರೀಡಾಕೂಟದಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಪಲ್ತರಬೇಕುಸಿಕ್ಕಿರುವ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ವಿಜೇತರಾದವರು ರಾಜ್ಯ ಮಟ್ಟದ ಕ್ರೀಡಾಕೂಟದಲ್ಲು ಗೆದ್ದು ಜಿಲ್ಲೆಗೆ ಕೀರ್ತಿ ತರಬೇಕು ಎಂದರು.

ಆದಿನಾರಾಯಣ ಹೊಸಹಳ್ಳಿಯಲ್ಲಿರುವ 20 ಎಕರೆ ಜಾಗದಲ್ಲಿ ಜಿಲ್ಲಾ ಕ್ರೀಡಾಂಗಣ ನಿರ್ಮಿಸಲು ಹಣ ಬಿಡುಗಡೆಯಾಗಿದ್ದು ಕೂಡಲೇ ಕ್ರೀಡಾಂಗಣದ ಗುದ್ದಲಿ ಪೂಜೆ ನೆರವೇರಲಿದೆ ಎಂದ ಅವರು, ತಾಲೂಕಿನ ಹೃದಯ ಭಾಗದಲ್ಲಿರುವ ಭಗತ್ ಸಿಂಗ್ ಕ್ರೀಡಾಂಗಣದ ಮತ್ತಷ್ಟು ಅಭಿವೃದ್ಢಿ ಪಡಿಸುವಂತೆ ಸಚಿವರಲ್ಲಿ ಮನವಿ ಮಾಡಿದರು.

ಕ್ರೀಡಾಕೂಟದಲ್ಲಿ ಜಿಲ್ಲೆಯ ನಾಲ್ಕು ತಾಲೂಕಿನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಕ್ರೀಡಾಕೂಟದಲ್ಲಿ ಖೋ-ಖೋ, ಕಬ್ಬಡಿ, ವಾಲಿಬಾಲ್, ಥ್ರೋಬಾಲ್, ಭರ್ಜಿ ಎಸೆತ, ಗುಂಡು ಎಸೆತ, ಚಕ್ರ ಎಸೆತ, 100, 200, 800 ಓಟದ ಸೇರಿದಂತೆ ವಿವಿಧ ಸ್ಪರ್ಧೆ ನಡೆಯಿತು. ವಿಜೇತ ವಿದ್ಯಾರ್ಥಿಗಳಿಗೆ ಸಚಿವರಿಂದ ಮತ್ತು ಅಥಿತಿ ಗಣ್ಯರಿಂದ ಬಹುಮಾನ ವಿತರಿಸಲಾಯಿತು.

ದೊಡ್ಡಬಳ್ಳಾಪುರ ನಗರಸಭೆ ಅಧ್ಯಕ್ಷರು ಸುಮಿತ್ರ ಆನಂದ್, ಘಾಟಿ ಸುಬ್ರಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಮಹೇಶ್, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರು ರವಿ ಸಿದ್ದಪ್ಪ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಟಿ.ಜಯಲಕ್ಷ್ಮೀ, ಹಾಗೂ ಸದಸ್ಯರುಗಳು, ತಿರ್ಪುಗಾರರು, ಶಿಕ್ಷಕರು ಮತ್ತು ಕ್ರೀಡಾಪಟುಗಳು ಉಪಸ್ಥಿತರಿದ್ದರು.

Megha
the authorMegha

Leave a Reply

error: Content is protected !!
Latest news
KSRTC ಕನಕಪುರ ಘಟಕದಲ್ಲಿ ಚಾಲಕನ ಮೇಲೆ ಹಲ್ಲೆ ಮಾಡಿದ ನಾಲ್ವರ ಅಮಾನತು ಸಿಎಂ ತವರಲ್ಲೇ KSRTC ಚಾಲನಕನ ಮೇಲೆ ಹಲ್ಲೆ, ಗೂಂಡಾ ವರ್ತನೆ: ಡಿಎಂ ಎದುರೇ ಘಟಕದಲ್ಲಿ ರೌಡಿಸಂ ನೌಕರನ ವಿರುದ್ಧ ಸಾಬೀತಾಗಿರುವ ದುರ್ನಡತೆಗೆ ಹೋಲಿಸಿದರೆ ಆತನ ವಜಾ ಮಾಡಿರುವುದು ಕಾನೂನುಬಾಹಿರ,ಅತ್ಯಂತ ಕಠಿಣ ಶಿಕ್ಷೆ: ಸು... ತಜ್ಞರ ಸಲಹೆ ಪಡೆದು ಪಾಲಿಕೆ ಆಯವ್ಯಯ ಅನುದಾನ ಬಳಕೆ : GBA ದಕ್ಷಿಣ ಆಯುಕ್ತ BMTC: ಜೂನ್‌ 18ರೊಳಗೆ ನಿವೃತ್ತ ನೌಕರರು ಏ-2018 ರಿಂದ ಜು-2018ರವರೆಗಿನ ತುಟ್ಟಿಭತ್ಯೆ ಪಡೆಯಲು ಬ್ಯಾಂಕ್‌ ಖಾತೆ ವಿವರ ... ಕುಡಿಯುವ ನೀರು ಸಮಸ್ಯೆ ಉಂಟಾದಲ್ಲಿ ಅಧಿಕಾರಿಗಳೇ ಹೊಣೆ: ಸಚಿವ ಖಂಡ್ರೆ ಎಚ್ಚರಿಕೆ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಶಿಕ್ಷಣವೊಂದೇ ಆಯುಧ: ನ್ಯಾ. ಶ್ರೀಶೈಲ್ ಭೀಮಸೇನ ಬಾಗಡಿ ನ್ಯಾಯಾಲಯದ ಆದೇಶ ಪಾಲಿಸದ KKRTC: ಮೃತರ ಕುಟುಂಬಕ್ಕೆ 36 ಲಕ್ಷ ರೂ. ಪರಿಹಾರ ನೀಡದಕ್ಕೆ ಔರಾದ್ ಘಟಕದ 2ಬಸ್‌ಗಳ ಜಪ್ತಿ ಸರ್ಕಾರದಿಂದ ಹೊರಬಿತ್ತು ಮಹತ್ವದ ಆದೇಶ: ಇನ್ನುಮುಂದೆ ಸರ್ಕಾರಿ ಪುರುಷ ನೌಕರರು ಪಡೆಯಬಹುದು 6ತಿಂಗಳ ಶಿಶುಪಾಲನಾ ರಜೆ KSRTC: ಇಂದಿನಿಂದ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್‌ ವಿತರಣೆಗೆ ಸರ್ಕಾರದ ಆದೇಶ