NEWSದೇಶ-ವಿದೇಶನಮ್ಮರಾಜ್ಯ

ಜೂನ್‌ 8- ರಾಜ್ಯದಲ್ಲಿ 308 ಹೊಸ ಕೊರೊನಾ ಪ್ರಕರಣ ದೃಢ

ಬೆಂಗಳೂರು ನಗರ ಒಂದರಲ್ಲೇ ಇಂದು ಮೂವರು ವಿಶ್ವಮಾರಿಗೆ ಬಲಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮಹಾಮಾರಿ  ತನ್ನ ಅಟ್ಟಹಾಸವನ್ನು ಇಂದು ಮುಂದುವರಿಸಿದ್ದು 308  ಮಂದಿಯಲ್ಲಿ ಕೊರೊನಾ ಪಾಸಿಟಿವ್‌ ದೃಢಪಟ್ಟಿದ್ದು, ರಾಜ್ಯದ ಜನತೆಯನ್ನು ಬೆಚ್ಚಿಬೀಳಿಸಿದೆ.ಜತೆಗೆ ಇಂದು ಮೂರು ಮಂದಿ ಕೊರೊನಾಗೆ ಬಲಿಯಾಗಿದ್ದು ಈವರೆಗೆ 66 ಮಂದಿ ಮೃತಪಟ್ಟಿದ್ದಾರೆ. ( ಅನ್ಯಕಾರಣದಿಂದ ಇಬ್ಬರ ಸಾವು).

ಇಂದು ಹೊಸದಾಗಿ ಪತ್ತೆಯಾದ 308 ಪ್ರಕರಣಗಳೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5760ಕ್ಕೆ ಏರಿಕೆಯಾಗಿದೆ. ಅಲ್ಲದೆ ಇಂದು 387 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ಕಲಬುರಗಿಯಲ್ಲಿ 99, ಯಾದಗಿರಿಯಲ್ಲಿ 66, ಬೀದರ್ ನಲ್ಲಿ 48, ಉಡುಪಿಯಲ್ಲಿಲ 45, ಬೆಂಗಳೂರು ನಗರದಲ್ಲಿ 18, ಬಳ್ಳಾರಿಯಲ್ಲಿ 8, ಗದಗದಲ್ಲಿ 6, ಶಿವಮೊಗ್ಗ, ಧಾರವಾಡದಲ್ಲಿ ತಲಾ 4, ಹಾಸನ, ದಕ್ಷಿಣ ಕನ್ನಡದಲ್ಲಿ ತಲಾ 2, ಬಾಗಲಕೋಟೆಯಲ್ಲಿ 2, ಕೊಪ್ಪಳ, ರಾಮನಗರದಲ್ಲಿ ತಲಾ 1 ಪ್ರಕರಣಗಳು ವರದಿಯಾಗಿವೆ  ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

308 ಸೋಂಕಿತರಲ್ಲಿ 277 ಮಂದಿ ಅಂತಾರಾಜ್ಯ ಪ್ರಯಾಣದ ಹಿನ್ನೆಲೆ ಹೊಂದಿದ್ದು, ಜತೆಗೆ, ಒಂದೇ ದಿನ ಬೆಂಗಳೂರು ನಗರವೊಂದರಲ್ಲೇ ಸೋಂಕಿನಿಂದ ಮೂವರು ಮೃತಪಟ್ಟಿದ್ದಾರೆ. ಇದರಿಂದ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 66ಕ್ಕೇರಿಕೆಯಾಗಿದೆ. ಇಲ್ಲಿಯವರೆಗೆ 2519 ಮಂದಿ ಗುಣಮುಖರಾಗಿದ್ದು, 3175 ಸಕ್ರಿಯ ಪ್ರಕರಣಗಳಿವೆ.

ಉಸಿರಾಟದ ತೊಂದರೆಯಿಂದ 67 ವರ್ಷದ ವ್ಯಕ್ತಿ ಮತ್ತು ಉಸಿರಾಟದ, ಜ್ವರ ಮತ್ತು ನಿಶ್ಯಕ್ತಿಯಿಂದ ಆಸ್ಪತ್ರೆಗೆ ದಾಖಲಾಗಿದ್ದ 48 ವರ್ಷದ ಮಹಿಳೆ, ಜತೆಗೆ 65 ವರ್ಷದ ಮಹಿಳೆ ಸೋಂಕಿನಿಂದ ಮೃತಪಟ್ಟಿದ್ದಾರೆ. ಇವರು ತೀವ್ರ ಉಸಿರಾಟದ ಸಮಸ್ಯೆ ಎದುರಿಸುತ್ತಿದ್ದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

ದೇಶದಲ್ಲಿ 258,090 ಕ್ಕೇರಿದ ಸೋಂಕಿತರ ಸಂಖ್ಯೆ
ಇನ್ನು ದೇಶದಲ್ಲಿ ಈವರೆಗೆ 258,090 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. 7,210 ಮಂದಿ ಮೃತಪಟ್ಟಿದ್ದಾರೆ. 124,380 ಮಂದಿ ರೋಗಮುಕ್ತರಾಗಿದ್ದಾರೆ. ಪ್ರಪಂಚಾದ್ಯಂತ ಈವರೆಗೆ 7,123,198 ಜನರಲ್ಲಿ ಸೋಂಕು ಇರುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಖಚಿತಪಡಿಸಿದೆ. ಇನ್ನು 406,747 ಜನರು ಮೃತಪಟ್ಟಿದ್ದಾರೆ 3,477,975 ಮಂದಿ ರೋಗದಿಂದ ಮುಕ್ತಗೊಂಡಿದ್ದಾರೆ. view by country

 

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...