ಭ್ರಷ್ಟ ಕಾರ್ಮಿಕ ಅಧಿಕಾರಿಗೆ ಕೆಆರ್ಎಸ್ ಪಕ್ಷದಿಂದ ನಾಗರೀಕ ಸನ್ಮಾನ
ಬೆಂಗಳೂರು: ಕಾರ್ಮಿಕ ಪರವಾನಿಗೆ ಮಾಡಿಕೊಡಲು ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ದಾಳಿಗೆ ಸಿಕ್ಕಿದ ಕಾರ್ಮಿಕ ಅಧಿಕಾರಿಗೆ ಕೆಆರ್ಎಸ್ ಪಕ್ಷದ ವತಿಯಿಂದ ಸನ್ಮಾನ ಮಾಡಲು ಕಚೇರಿಗೆ ಹೋದಾಗ ಅಧಿಕಾರಿ ಇಲ್ಲದ ಕಾರಣ ಅವರ ಭಾವಚಿತ್ರಕ್ಕೆ ಸನ್ಮಾನ ಮಾಡಲಾಯಿತು.
ಸೆ.9ರಂದು ಬೆಂಗಳೂರಿನ ಬಾಗಲಗುಂಟೆಯಲ್ಲಿರುವ ಕಾರ್ಮಿಕ ಇಲಾಖೆಯ ಕಚೇರಿಯಲ್ಲಿ 10,000 ರೂ. ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತರ ದಾಳಿಗೆ ಒಳಗಾದ ಭ್ರಷ್ಟ ಕಾರ್ಮಿಕ ಅಧಿಕಾರಿ ಶ್ಯಾಮರಾವ್ಗೆ ನಾಗರಿಕ ಸನ್ಮಾನ ಮಾಡುವ ಮೂಲಕ ಭ್ರಷ್ಟರಿಗೆ ಅವಮಾನ ಮಾಡುವ ವಿನೂತನ ಪ್ರತಿಭಟನೆಯನ್ನು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಸದಸ್ಯರು ಇಂದು ಆಯೋಜಿಸಿದರು.
ಭ್ರಷ್ಟ ಕಾರ್ಮಿಕ ಅಧಿಕಾರಿ ಕಚೇರಿಯಲ್ಲಿ ಇಲ್ಲವಾದುದರಿಂದ ಅವರು ಕುಳಿತುಕೊಳ್ಳುತ್ತಿದ್ದ ಕುರ್ಚಿಯ ಮೇಲೆ ಅವರ ಭಾವಚಿತ್ರ ಇಟ್ಟು, ಮೈಸೂರು ಪೇಟ ಹಾಕಿ ಶಾಲು ತೊಡಿಸಿ ಹಾರ ಹಾಕುವ ಮೂಲಕ ಅವಮಾನದ ಸನ್ಮಾನವನ್ನು ಮಾಡಿದರು.
ಪಕ್ಷದ ರಾಜ್ಯ ಜಂಟಿ ಕಾರ್ಯದರ್ಶಿ ಎಲ್. ಜೀವನ್, ಬೆಂಗಳೂರು ಪಶ್ಚಿಮ ಜಿಲ್ಲಾ ಕಾರ್ಯದರ್ಶಿ ನರಸಿಂಹ ರೆಡ್ಡಿ ಕೆ ಎಲ್, ದೇವರಾಜ್, ಲೋಕೇಶ್, ಬಾಲಕೃಷ್ಣ, ಶ್ರೀನಿವಾಸ ಮೂರ್ತಿ, ವಾಸುದೇವ, ಕೀರ್ತಿ ಗೌಡ ಹಾಗೂ ಬೆಂಗಳೂರಿನ ಪದಾಧಿಕಾರಿಗಳು ಹಾಗೂ ಸೈನಿಕರು ಉಪಸ್ಥಿತರಿದ್ದರು.
Related


You Might Also Like
ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ 47,848 ಮನೆಗಳು ಮಂಜೂರು: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಪ್ರಧಾನಮಂತ್ರಿ ಆವಾಸ್ ಯೋಜನೆ (ನಗರ) ಅಡಿ ಹಿಂದಿನ ಬಾರಿ ನಮ್ಮ ಸರ್ಕಾರವಿದ್ದಾಗ 43,874 ಮನೆಗಳು ಸೇರಿದಂತೆ ಒಟ್ಟು 47,848 ಮನೆಗಳನ್ನು ಮಂಜೂರು ಮಾಡಲಾಗಿದೆ. ಇದರಲ್ಲಿ 13,303...
ಅರ್ಹರಿಗೆ ತಕ್ಷಣವೇ ಬಿಪಿಎಲ್ ಕಾರ್ಡ್ ನೀಡಬೇಕು: ಅಧಿಕಾರಿಗಳಿಗೆ ಸಿಎಂ ತಾಕೀತು
ಬೆಂಗಳೂರು: ರಾಜ್ಯದಲ್ಲಿ ಅನರ್ಹ ಬಿಪಿಎಲ್ ಕಾರ್ಡ್ಗಳನ್ನು ರದ್ದುಪಡಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಆದರೆ, ಅರ್ಹ ಬಿಪಿಎಲ್ ಕಾರ್ಡುದಾರರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಅರ್ಹರು ಯಾರಾದರೂ ಬಿಟ್ಟು ಹೋಗಿದ್ದರೆ...
ಸಾರಿಗೆ ನೌಕರರ ವೇತನ ಹೆಚ್ಚಳ-38 ತಿಂಗಳ ಹಿಂಬಾಕಿ ಪ್ರಕರಣ ಸೆ.17ಕ್ಕೆ ಮುಂದೂಡಿಕೆ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರ ವೇತನ ಹೆಚ್ಚಳ ಸಂಬಂಧ ಸರ್ಕಾರ ಹಾಗೂ ಸಾರಿಗೆ ನಿಗಮಗಳ ಆಡಳಿತ ಮಂಡಳಿ ವಿರುದ್ಧ ಕಳೆದ ಮಾರ್ಚ್ನಲ್ಲಿ...
KSRTC ಚಿಲ್ಲರೇ ಗಲಾಟೆ: ಸಂಸ್ಥೆ ನೌಕರನ ವಿರುದ್ಧ ಮೃಗದಂತೆ ವರ್ತಿಸಿ ರಾಜೀನಾಮೆ ಕೇಳಿದ ವಿಭಾಗೀಯ ನಿಯಂತ್ರಣಾಧಿಕಾರಿ
ನಾಲ್ಕೂ ಸಾರಿಗೆ ನಿಗಮಗಳ ನೌಕರರು ಹಾಗೂ ಸಂಘಟನೆಗಳ ಬಳಿ ನೋವು ತೋಡಿಕೊಂಡ ನೊಂದ ನೌಕರ ಕೊಳ್ಳೇಗಾಲ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಕೊಳ್ಳೇಗಾಲ ಘಟಕದ ಬಸ್...
KSRTC: ಚಿಲ್ಲರೆಗಾಗಿ ಗಲಾಟೆ ಘಟನೆ- ಕಂಡಕ್ಟರ್ಗೆ ಬೈದು ರಾಜೀನಾಮೆ ಕೇಳಿದ ಡಿಸಿ ಅಶೋಕ್ ವಿರುದ್ಧ ದೂರು ದಾಖಲು
ಕೊಳ್ಳೇಗಾಲ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಕೊಳ್ಳೇಗಾಲ ಘಟಕದ ಬಸ್ ನಿರ್ವಾಹಕ ಮತ್ತು ಪ್ರಯಾಣಿಕನ ನಡುವೆ ಚಿಲ್ಲರೆ ಹಣ ಕೊಡುವ ವಿಚಾರದಲ್ಲಿ ವಾಗ್ವಾದ ನಡೆದಿತ್ತು. ಈ...
ನೇಪಾಳ ಧಗಧಗ: ಅಧ್ಯಕ್ಷ, ಪ್ರಧಾನಿ, ಸಂಸತ್ಗೆ ದಾಳಿಯಿಟ್ಟು ಹಿಂಸಾಚಾರ
ಕಠ್ಮಂಡು: ಸಾಮಾಜಿಕ ಜಾಲತಾಣಗಳ ನಿರ್ಬಂಧ ಮಾಡಿದ್ದಕ್ಕೆ ಯುವಕರು ದಂಗೆ ಎದ್ದಿರುವ ಕಾರಣ ಭಾರತದ ನೆರೆಯ ರಾಷ್ಟ್ರ ನೇಪಾಳ ಹೊತ್ತಿ ಉರಿಯುತ್ತಿದೆ. ಸತತ 3ನೇ ದಿನವೂ ನೇಪಾಳ ಕುದಿಯುತ್ತಿದೆ....
ಸಾರಿಗೆ ಬಸ್ಗಳು ಅಪಘಾತವಾದರೆ ಚಾಲಕರಿಗೆ ಡಿಎಂಗಳು ಜಾಮೀನು ಕೊಡಬೇಕು: ಸಿಟಿಎಂ ಆದೇಶ
ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಗಳು ಅಪಘಾತವಾದ ಸಂದರ್ಭದಲ್ಲಿ ಘಟಕ ವ್ಯವಸ್ಥಾಪಕರು ಚಾಲಕರಿಗೆ ಜಾಮೀನು ನೀಡುವ ವ್ಯವಸ್ಥೆಯನ್ನು ಮಾಡಬೇಕಿರುವುದು ನಿಮ್ಮ ಕರ್ತವ್ಯ ಎಂದು ಮುಖ್ಯ ಸಂಚಾರ...
ಬದುಕಲಾಗುತ್ತಿಲ್ಲ ದಯಮಾಡಿ ನನಗೆ ವಿಷ ಕೊಡಿ: ನ್ಯಾಯಾಧೀಶರಲ್ಲಿ ನಟ ದರ್ಶನ್ ಮನವಿ
ಬೆಂಗಳೂರು: ದಯಮಾಡಿ ನನಗೆ ವಿಷ ಕೊಡಿ ಎಂದು ನಟ ದರ್ಶನ್ ನ್ಯಾಯಾಧೀಶರ ಮುಂದೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪರಪ್ಪನ ಅಗ್ರಹಾರ ಜೈಲಿನಿಂದ ಹಾಜರಾದ ವೇಳೆ ಮನವಿ ಮಾಡಿದ್ದಾರೆ....
ಅನ್ನಭಾಗ್ಯ ಅಕ್ಕಿ ಅಕ್ರಮ ಮಾರಾಟ ಜಾಲಪತ್ತೆ: 1.17 ಕೋಟಿ ರೂ.ಮೌಲ್ಯದ 4,108 ಕ್ವಿಂಟಾಲ್ ಅಕ್ಕಿ ಜಪ್ತಿ- ಇಬ್ಬರ ವಿರುದ್ಧ FIR ದಾಖಲು
ಯಾದಗಿರಿ: ಜಿಲ್ಲೆಯಲ್ಲಿ ಅನ್ನಭಾಗ್ಯ ಅಕ್ಕಿಯನ್ನು ಪಾಲಿಶ್ ಮಾಡಿ ಮಾರಾಟ ಮಾಡುತ್ತಿದ್ದ ಅಪ್ಪ ಮಕ್ಕಳಿಗೆ ಸೇರಿದ ಎರಡು ರೈಸ್ ಮಿಲ್ಗಳ ಮೇಲೆ ಆಹಾರ ಪೊರೈಕೆ ಹಾಗೂ ಕಂದಾಯ ಇಲಾಖೆ...