ಬೆಂಗಳೂರು: ಶಿಕ್ಷಣ ಇಲಾಖೆ ಜುಲೈ 1ರಿಂದ ಶಾಲೆಯನ್ನೂ ಪ್ರಾರಂಭಿಸುವ ಉದ್ದೇಶವನ್ನು ಹೊಂದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ರಾಜ್ಯದಲ್ಲಿ ಶಾಲಾರಂಭ ಕುರಿತಂತೆ ಮುಂದಿನ ಸಚಿವ ಸಂಪುಟದ ಸಭೆಯಲ್ಲಿ ಚರ್ಚಿಸಿ ಸಹಮತವನ್ನು ಪಡೆಯಲಾಗುವುದು. ಹೀಗಾಗಿ ಈ ಬಗ್ಗೆ ಯಾವುದೇ ಪೋಷಕರು ಅನವಶ್ಯಕವಾಗಿ ಗೊಂದಲಕ್ಕೆ ಒಳಗಾಗುವುದು ಬೇಡ ಎಂದು ಹೇಳಿಕೆ ಬಿಡುಗಡೆ ಮಾಡಿದ್ದಾರೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಶಾಲಾ ಅರಂಭದ ಕುರಿತಂತೆ ವಿವಿಧ ರಾಜ್ಯಗಳ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲದಯ ವಿಡಿಯೋ ಸಂವಾದ ನಡೆಸಿ ಎಲ್ಲ ರಾಜ್ಯಗಳ ಅಭಿಪ್ರಾಯ ಸಂಗ್ರಹ ಮಾಡಿದೆ. ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರೂ ಸಹ ಆಗಸ್ಟ್ 15ರ ಬಳಿಕವಷ್ಟೇ ಶಾಲಾರಂಭದ ದಿನಾಂಕವನ್ನು ನಿಗದಿಪಡಿಸಲಾಗುವುದೆಂಬ ಸುಳಿವು ನೀಡಿದ್ದಾರೆ ಎಂದು ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ನಿರ್ದೇಶನದಂತೆ ಶಿಕ್ಷಣ ಇಲಾಖೆಯು ನಮ್ಮ ರಾಜ್ಯದಲ್ಲಿ ಶಾಲಾರಂಭದ ಕುರಿತು ಪೋಷಕರ ಅಭಿಪ್ರಾಯವನ್ನು ಸಂಗ್ರಹಿಸಲು ಜೂನ್ 10, 12 ಮತ್ತು 12ರಂದು ಪೋಷಕರ/ ಎಸ್ ಡಿಎಂಸಿ / ಎಸ್ ಎಂಸಿ ಸಭೆಗಳನ್ನು ನಡೆಸಿ ಕ್ರಮ ವಹಿಸಲು ನೀಡಲಾಗಿದ್ದ ಸೂಚನೆಯನ್ನು ಜೂನ್ 20ರವರೆಗೆ ವಿಸ್ತರಿಸಲು ಸಭೆಯು ನಿರ್ಣಯಿಸಿದೆ ಎಂದು ವಿವರಿಸಿದ್ದು, ಹೀಗಾಗಿ ಪೋಷಕರು ವಿನಾಕಾರಣ ಗೊಂದಲಕ್ಕೆ ಒಳಗಾಗುವುದು ಎಂದು ತಿಳಿಸಿದ್ದಾರೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail