NEWSನಮ್ಮಜಿಲ್ಲೆನಮ್ಮರಾಜ್ಯ

ಅರ್ಹರಿಗೆ ತಕ್ಷಣವೇ ಬಿಪಿಎಲ್ ಕಾರ್ಡ್ ನೀಡಬೇಕು: ಅಧಿಕಾರಿಗಳಿಗೆ ಸಿಎಂ ತಾಕೀತು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಅನರ್ಹ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಆದರೆ, ಅರ್ಹ ಬಿಪಿಎಲ್ ಕಾರ್ಡುದಾರರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಅರ್ಹರು ಯಾರಾದರೂ ಬಿಟ್ಟು ಹೋಗಿದ್ದರೆ ಅವರಿಗೆ ಬಿಪಿಎಲ್ ಕಾರ್ಡ್ ನೀಡಲು ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಮಾಡಿದ್ದಾರೆ.

ಇಂದು ಅವರ ಅಧ್ಯಕ್ಷತೆಯಲ್ಲಿ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ಈಗಾಗಲೇ ಗುರುತಿಸಲಾಗಿರುವ ಅನರ್ಹ ಬಿಪಿಎಲ್ ಪಡಿತರ ಚೀಟಿದಾರರ ಪೈಕಿ 3,65,614 ಪಡಿತರ ಚೀಟಿಗಳನ್ನು ರದ್ದು/ ವರ್ಗ ಬದಲಾವಣೆ ಮಾಡಲಾಗಿದೆ ಎಂದು ತಿಳಿಸಿದರು.

ಇನ್ನು ಅನ್ನಭಾಗ್ಯ ಯೋಜನೆಯಡಿ ಅಕ್ಕಿಯ ಜತೆಗೆ ಪೌಷ್ಟಿಕ ಧಾನ್ಯ, ಅಗತ್ಯ ಆಹಾರ ಸಾಮಾಗ್ರಿಗಳನ್ನು ಒಳಗೊಂಡ ಕಿಟ್ ಒದಗಿಸುವ ಕುರಿತು ಪರಿಶೀಲನೆ ನಡೆಸಲಾಗುವುದು. ಈ ಕುರಿತು ಅಧಿಕಾರಿಗಳು ಪ್ರಸ್ತಾವನೆ ಸಲ್ಲಿಸಿ ಎಂದು ಹೇಳಿದರು.

ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮುದಾಯದವರಿಗೆ ಹೊಸ ನ್ಯಾಯಬೆಲೆ ಅಂಗಡಿಗಳನ್ನು ಆದ್ಯತೆ ಮೇಲೆ ನೀಡಲು ಕ್ರಮ ಕೈಗೊಳ್ಳಬೇಕು. ಆಹಾರ ಧಾನ್ಯಗಳನ್ನು ಸರಬರಾಜು ಮಾಡುತ್ತಿರುವ ವಾಹನಗಳಿಗೆ ಜಿಪಿಎಸ್ ಟ್ರಾಕರ್‌ಗಳನ್ನು ಅಳವಡಿಸಬೇಕು. ರಾಜ್ಯದಲ್ಲಿರುವ ಎಲ್ಲ ಗೋದಾಮುಗಳಲ್ಲಿ ಸಿಸಿಟಿವಿ ಅಳವಡಿಸಲು ಕ್ರಮ ಕೈಗೊಳ್ಳಬೇಕು ಎಂದು ತಾಕೀತು ಮಾಡಿದರು.

ಕನಿಷ್ಠ ಬೆಂಬಲ ಯೋಜನೆಯಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಹಾಗೂ ಸ್ವಸಹಾಯ ಸಂಘಗಳ ಸಹಯೋಗದೊಂದಿಗೆ ಆಹಾರಧಾನ್ಯಗಳ ಖರೀದಿ ಪ್ರಕ್ರಿಯೆ ನಡೆಸಬೇಕು. ಇದೇ ಪ್ರಥಮ ಬಾರಿಗೆ 0.29 ಲಕ್ಷ ಮೆಟ್ರಿಕ್ ಟನ್ ಕಿರು ಸಿರಿಧಾನ್ಯಗಳನ್ನು ಖರೀದಿಸಲಾಗುತ್ತಿದೆ ಎಂದು ತಿಳಿಸಿದರು.

ಇನ್ನು ಪ್ರಮುಖವಾಗಿ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದಲ್ಲಿ ಖಾಲಿಯಿರುವ ಅಗತ್ಯ ಸಿಬ್ಬಂದಿಗಳ ನೇಮಕಾತಿಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಹೇಳಿದರು.

Megha
the authorMegha

Leave a Reply

error: Content is protected !!
Latest news
ಒಲಿಂಪಿಕ್ಸ್‌ ಚಿನ್ನದ ಪದಕ ವಿಜೇತರಿಗೆ 6 ಕೋಟಿ ರೂ. ಭಾರಿ ನಗದು ಬಹುಮಾನ: ಕ್ರೀಡಾಪಟುಗಳ ಬದುಕಿಗೆ ಭರವಸೆ ನೀಡಿದ ಸಿಎಂ BMTC: ಮಹಿಳಾ ಕಂಡಕ್ಟರ್‌ಗಳಿಗೆ ಶೇ.33ರಷ್ಟು ಮುಂಬಡ್ತಿ ಮೀಸಲಾತಿ ಅಸಾಧ್ಯ- ಸಂಸ್ಥೆ ನಿಯಮದಲ್ಲೂ ಇಲ್ಲ ಅವಕಾಶ ಎಂದ ಸಿಪಿಎ... ಶಕ್ತಿಯೋಜನೆಗಾಗಿ ರಾಜಸ್ಥಾನದ ಆಧಾರ್‌ ಕಾರ್ಡ್‌ಗೆ ಬೆಂಗಳೂರು ನಿವಾಸಿ ಎಂಬ ನಕಲಿ ಕಾರ್ಡ್‌ ಸೃಷ್ಟಿಸಿಕೊಂಡು ಮಹಿಳೆ ಓಡಾಟ! BMTC ಘಟಕ 29: ಡಿಪೋ ಆವರಣದಲ್ಲಿ ಎಲೆಕ್ಟ್ರಿಕ್ ಬಸ್ ಡಿಕ್ಕಿ- ಚಾಲಕನಿಗೆ ತೀವ್ರ ಗಾಯ ತಿ.ನರಸೀಪುರ: ಯುವಕನ ಕಿರುಕುಳದಿಂದ ಮದುವೆ ನಿಶ್ಚಯವಾಗಿದ್ದ ಯುವತಿ ಜತೆಗೆ ಅಪ್ಪಅಮ್ಮ ಆತ್ಮಹತ್ಯೆ ತಿ.ನರಸೀಪುರ: ವಿದ್ಯುತ್‌ ಖಾಸಗೀಕರಣ ವಿರೋಧಿಸಿ ರೈತರ ಪ್ರತಿಭಟನೆ ತಹಸೀಲ್ದಾರ್‌ಗೆ ಮನವಿ ಚಾಲನೆಯಲ್ಲಿದ್ದ ಬಸ್‌ನ ಸ್ಟೇರಿಂಗ್‌ ಹಿಡಿದ ಕುಡುಕ- ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಬಸ್‌ ಡಿಕ್ಕಿ, 11 ಮಂದಿಗೆ ಗಂಭೀರ... KSRTC: ಶೇ.44 ರಷ್ಟು ಬಸ್‌ ಪ್ರಯಾಣ ದರ ಹೆಚ್ಚಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ ಗೃಹಜ್ಯೋತಿಯಿಂದ ಸರ್ಕಾರಿ ನೌಕರರ ಹೊರಗಿಡಲು ಸರ್ಕಾರದ ಚಿಂತನೆ ಸರ್ಕಾರಿ ನೌಕರಿ ಮಹಿಳೆಯರಿಗೆ ಇನ್ನು ಮುಂದೆ ಸಿಗಲ್ವ ಶಕ್ತಿ ಯೋಜನೆಯ ಉಚಿತ ಪ್ರಯಾಣ?