CRIMENEWSನಮ್ಮರಾಜ್ಯ

ಬಸ್ಸಿನಲ್ಲಿ ಪುತ್ರಿಗೆ ಲೈಂಗಿಕ ಕಿರುಕುಳ ನೀಡಿದ ಚಾಲಕನ ಬಟ್ಟೆ ಬಿಚ್ಚಿಸಿ ಥಳಿಸಿದ ತಾಯಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಚಾಲಕ ಬಸ್ಸಿನಲ್ಲಿ ನಮ್ಮ ಮಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿ ತಾಯಿಯೊಬ್ಬಳು ಚಾಲಕನ ಬಟ್ಟೆ ಬಿಚ್ಚಿಸಿ ಥಳಿಸಿರುವ ಘಟನೆ ನಗರದ ಬಸವೇಶ್ವರ ಸರ್ಕಲ್ ಬಳಿ ನಡೆದಿದೆ.

ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಸ್ಲೀಪರ್‌ ಬಸ್ಸಿನಲ್ಲಿ 15 ವರ್ಷದ ಬಾಲಕಿ ಇದ್ದು, ಆಕೆ ರಾತ್ರಿ ಮೊಬೈಲಿನ ಚಾರ್ಜ್‌ ಖಾಲಿಯಾಗಿದ್ದರಿಂದ ಚಾಲಕನ ಬಳಿ ಚಾರ್ಜ್‌ ಹಾಕುವಂತೆ ಮನವಿ ಮಾಡಿದ್ದಾಳೆ.

ಆ ವೇಳೆ ಚಾರ್ಜ್‌ಗೆ ಹಾಕಿದ್ದು, ಸ್ವಲ್ಪ ಸಮಯದ ಬಳಿಕ ಬಾಲಕಿ ಮೊಬೈಲ್‌ ಕೊಡುವಂತೆ ಕೇಳಿದ್ದಾಳೆ. ಆಗ ಚಾಲಕ ಆರೀಫ್‌ ಮುತ್ತು ಕೊಟ್ಟರೆ ಮಾತ್ರ ನೀಡುವುದಾಗಿ ಹೇಳಿದ್ದಾನೆ. ಅಷ್ಟೇ ಅಲ್ಲದೇ ಮಲಗಿದ್ದಾಗ ಸೀಟ್‌ ಬಳಿ ಬಂದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅದಕ್ಕೆ ವಿರೋಧ ವ್ಯಕ್ತಪಡಿಸಿದರೂ ರಾತ್ರಿ ಪದೇಪದೆ ಬಂದು ಲೈಂಗಿಕ ಕಿರುಕುಳ ನೀಡಿದ್ದಾನೆ.

ಈ ವೇಳೆ ಈತನ ಕಿರುಕುಳ ತಾಳಲಾರದೇ ಬಾಲಕಿ ಕರೆ ತನ್ನ ಪಾಲಕರಿಗೆ ಕರೆ ಮಾಡಿದ್ದು, ತಾಯಿ ಬಳಿ ನಡೆದ ಘಟನೆಯನ್ನು ವಿವರಿಸಿದ್ದಾಳೆ. ಇದರಿಂದ ಗಾಬರಿಗೊಂಡ ತಾಯಿ ತನ್ನ ಸಹೋದರನೊಂದಿಗೆ ಇಂದು ಬೆಳಗ್ಗೆ ಬಸವೇಶ್ವರನಗರದ ಸರ್ಕಲ್‌ ಬಳಿಕ ಬಂದು ಕಾದುಕುಳಿತ್ತಿದ್ದರು.

ಇನ್ನು ಬಸ್‌ ಬಸವೇಶ್ವರನಗರಕ್ಕೆ ಬರುತ್ತಿದ್ದಂತೆ ಚಾಲಕ ಆರೀಫ್‌ನನ್ನು ಕೆಳಗೆ ಇಳಿಸಿ ತಾಯಿ ಮತ್ತು ಆಕೆಯ ಸಹೋದರ ಪ್ರಶ್ನಿಸಿದ್ದಾರೆ. ಈ ವೇಳೆ ಆರೀಫ್‌ ಕೈ ಮುಗಿದು ತಪ್ಪಾಗಿದೆ ಎಂದು ಹೇಳಿದ್ದಾನೆ. ನಂತರ ಆತನ ಬಟ್ಟೆಯನ್ನು ಬಿಚ್ಚಿಸಿ ಚೆನ್ನಾಗಿ ಥಳಿಸಿದ್ದಾರೆ.

ಆತ ಧರಿಸಿದ್ದ ಎಲ್ಲ ಬಟ್ಟೆಯನ್ನು ತೆಗೆದು ಬೆತ್ತಲೆಗೊಳಿಸಲು ಮುಂದಾದಾಗ ಪೊಲೀಸರು ಸ್ಥಳಕ್ಕೆ ಆಗಮಿಸಿ ತಾಯಿಯನ್ನು ತಡೆದು ಆತನನ್ನು ವಶಕ್ಕೆ ಪಡೆದಿದ್ದಾರೆ.

Advertisement

ಈ ವೇಳೆ ಮಾಧ್ಯಮಗಳ ಜತೆ ಮಾತನಾಡಿದ ಬಾಲಕಿಯ ತಾಯಿ, ಹೈದರಾಬಾದ್‌ನಲ್ಲಿರುವ ನನ್ನ ಮಗಳ ಮನೆಗೆ ಇವಳು ಹೋಗಿದ್ದಳು. ರಾತ್ರಿ ಮಗಳು ಫೋನ್‌ ಮಾಡಿ ತಂಗಿಯನ್ನು ಬಸ್ಸಿನಲ್ಲಿ ಹತ್ತಿಸಿದ್ದೇನೆ ಎಂದು ಹೇಳಿದ್ದಳು. ಆದರೆ ಈತ ಮಗಳಿಗೆ ಬಸ್ಸಿನಲ್ಲಿ ಕೊಡಬಾರದ ಕಿರುಕುಳ ನೀಡಿದ್ದಾನೆ. ಅದನ್ನು ಇಲ್ಲಿ ಹೇಳಲು ಅಸಹ್ಯವಾಗುತ್ತಿದೆ. ಪೊಲೀಸರು ಏನು ಕ್ರಮ ಕೈಗೊಳ್ಳುತ್ತಾರೋ ಗೊತ್ತಿಲ್ಲ. ನಾನು ಮಾತ್ರ ಈತನನ್ನು ಸುಮ್ಮನೆ ಬಿಡುವುದಿಲ್ಲ ಎಂದು ಹೇಳಿದ್ದಾರೆ.

ವಿಜಯಪಥ - vijayapatha.in
Megha
the authorMegha

Leave a Reply

error: Content is protected !!