Please assign a menu to the primary menu location under menu

NEWSದೇಶ-ವಿದೇಶನಮ್ಮರಾಜ್ಯ

ನನ್ನ ಸ್ಪರ್ಧೆ ನಿರ್ಧಾರ ಸೋನಿಯಾ ಮೇಡಂಗೆ ಸಂತಸ ತಂದಿದೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರುರಾಜ್ಯಸಭೆ ಚುನಾವಣೆಯ ನನ್ನ ಸ್ಪರ್ಧೆ  ನಿರ್ಧಾರದಿಂದ  ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಸಂತಸ ಉಂಟು ಮಾಡಿದೆ ಎಂದು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ತಿಳಿಸಿದರು.

ಜೆಡಿಎಸ್ ಅಭ್ಯರ್ಥಿಯಾಗಿ ಮಂಗಳವಾರ ನಾಮಪತ್ರ ಸಲ್ಲಿಸಿ ಬಳಿಕ ಮಾತನಾಡಿ, ಪಕ್ಷ ಸಂಘಟನೆ ಮಾಡುವುದು ನನ್ನ ಆದ್ಯತೆಯಾಗಿದೆ . ಹೀಗಾಗಿ ರಾಜ್ಯಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಉದ್ದೇಶವಿರಲಿಲ್ಲ.  ಆದರೆ ಪಕ್ಷದ ಶಾಸಕರು ಶಾಸಕಾಂಗ ಸಭೆಯಲ್ಲಿ ಒಮ್ಮತದ ಅಭಿಪ್ರಾಯ ವ್ಯಕ್ತಪಡಿಸಿ ನನ್ನ ಸ್ಪರ್ಧೆಗೆ ಒತ್ತಡ ಹೇರಿದ್ದರು. ಇದರಿಂದ ನಾನು ಕಣಕ್ಕೀಲಿಯಬೇಕಾಯಿತು ಎಂದು ವಿವರಿಸಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

ಕಾಂಗ್ರೆಸ್ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರನ್ನು ಸೋನಿಯಾ ಗಾಂಧಿ ಘೋಷಣೆ ಮಾಡಿದರು. ಆದರೆ  ಮತ್ತೊಬ್ಬ ಅಭ್ಯರ್ಥಿಯ ಹೆಸರನ್ನು ಘೋಷಣೆ ಮಾಡಲಿಲ್ಲ. ಈ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್‌ ಮಾತನಾಡಿಕೊಂಡು, ಈ ವೇಳೆ ಸೋನಿಯಾ ಗಾಂಧಿ ಅವರೊಂದಿಗೆ ನಾನು ಮಾತನಾಡುವಂತೆ ತಿಳಿಸಿದರು. ಈ ಕಾರಣಕ್ಕಾಗಿ ಶನಿವಾರ ಮಾತುಕತೆ ನಡೆಸಿದ್ದೆ ಎಂದು ವಿವರಿಸಿದರು.

ಸೋನಿಯಾ ಗಾಂಧಿ ಅವರು ಎಲ್ಲಾ ರೀತಿಯ ಬೆಂಬಲ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ. ಒಟ್ಟಿನಲ್ಲಿ ಕಾರ್ಯಕರ್ತರ ಒತ್ತಡ, ಸೋನಿಯಾ ಗಾಂಧಿಯವರ ಭಾವನೆ ಹಾಗೂ ಎಡಪಕ್ಷಗಳು ಸೇರಿದಂತೆ ಇತರ ಪಕ್ಷಗಳ ಮುಖಂಡರ ಮನವಿ ಮೇರೆಗೆ ರಾಜ್ಯಸಭೆಗೆ ಸ್ಪರ್ಧೆ ಮಾಡುವ ನಿರ್ಧಾರ ತೆಗೆದುಕೊಂಡೆ ಎಂದು  ತಿಳಿಸಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

ಬಿಜೆಪಿಯವರು ಇಬ್ಬರು ಅಭ್ಯರ್ಥಿಗಳನ್ನು ರಾಜ್ಯಸಭೆ ಚುನಾವಣೆ ಕಣಕ್ಕಿಳಿಸಿದ್ದಾರೆ. ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ರಾಜ್ಯದ ಶಿಫಾರಸಿನ ಹೊರತಾಗಿ ಬೇರೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ.  ಇನ್ನು ಚುನಾವಣಾ ನಿಟ್ಟಿನಲ್ಲಿ ಬಿಜೆಪಿಯ ಯಾರನ್ನು ಸಂಪರ್ಕ ಮಾಡಿಲ್ಲ. ನನ್ನ ರಾಜಕೀಯ ಜೀವನವೆಲ್ಲಾ ಜಾತ್ಯತೀತವಾಗಿಯೇ ಹೋರಾಟ ಮಾಡಿಕೊಂಡು ಬಂದಿದ್ದೇನೆ. ಅವಿರೋಧ ಆಯ್ಕೆ ಆಗುವ ಮೂಲಕ ಪ್ರಾದೇಶಿಕ ಪಕ್ಷಕ್ಕೆ ಒಂದು ಅವಕಾಶ ಸಿಕ್ಕಿದೆ ಎಂದರು.

ಮುಂದಿನ ದಿನಗಳಲ್ಲಿ ಜನರ ಸಮಸ್ಯೆಗಳಿಗೆ ಹೋರಾಟ ನಡೆಸುತ್ತೇನೆ. ನಮ್ಮ ಪಕ್ಷ ಯಾವುದೇ ದಾಕ್ಷಿಣ್ಯಕ್ಕೆ ಒಳಗಾಗಿಲ್ಲ. ರಾಜ್ಯಸಭೆಯಲ್ಲಿ ಮಾತನಾಡಲು ಹೆಚ್ಚಿನ ಅವಕಾಶ ನೀಡುವಂತೆ ಸಭಾಪತಿಗೆ ಕೇಳುತ್ತೇನೆ. ಇದು ನನ್ನ ಕಡೆಯ ಅವಕಾಶವೆನೋ ಗೊತ್ತಿಲ್ಲ ಎಂದು ಹೇಳಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

Leave a Reply

error: Content is protected !!
LATEST
ಸರ್ಕಾರಿ ವಾಹನ ಚಾಲಕರಿಗೆ ಕನಿಷ್ಠ ವೇತನ ₹34,100 ನಿಗದಿಗೊಳಿಸಿ ಸರ್ಕಾರ ಆದೇಶ ಇಂದಿನಿಂದ ನಿವೃತ್ತ ಸಾರಿಗೆ ನೌಕರರಿಗೆ ಉಪಧನ, ನಿವೃತ್ತಿ ಗಳಿಕೆ ರಜೆ ನಗದೀಕರಣ ಪಾವತಿಗೆ ಎಂಡಿ ಆದೇಶ BMTC: ಡಿ.24ರಂದು ನೌಕರರಿಗೆ 7 ತಿಂಗಳ ತುಟ್ಟಿಭತ್ಯೆ ಹಿಂಬಾಕಿ ಪಾವತಿಗೆ ಎಂಡಿ ಆದೇಶ KKRTC ಸಂಸ್ಥೆಯ ಸಿಬ್ಬಂದಿಗಳಿಗೆ ಉಚಿತ ಒಂದು ಕೋಟಿ ರೂ. ಅಪಘಾತ ವಿಮೆ ಜತೆಗೆ ನೌಕರರಿಗೆ ಸಿಗುವ ಇತರ ಸೌಲಭ್ಯಗಳು KKRTC: ನಗದು ರಹಿತ ಚಿಕಿತ್ಸೆಗಾಗಿ ಸಿಬ್ಬಂದಿಗಳ ವೈಯಕ್ತಿಕ, ಅವಲಂಬಿತರ ಮಾಹಿತಿ ಸಂಗ್ರಹಿಸಿ- ಅಧಿಕಾರಿಗಳಿಗೆ ಆದೇಶ ಹೈಕೋರ್ಟ್‌ ಆದೇಶದ ಬೆನ್ನಲ್ಲೇ ದಾವಣಗೆರೆಯಲ್ಲಿ ಪೊಲೀಸರಿಂದ ಸಿ.ಟಿ.ರವಿ ಬಿಡುಗಡೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ: ಮಂಡ್ಯಕ್ಕೆ ಆಗಮಿಸಿದ ಸಮ್ಮೇಳನಾಧ್ಯಕ್ಷರಿಗೆ ಸ್ವಾಗತ ಉತ್ತಮ ಆಡಳಿತ ಸಪ್ತಾಹ: ಹಿರಿಯ ನಾಗರಿಕರಿಗೆ ಗುರುತಿನ ಚೀಟಿ ವಿತರಿಸಿದ ಡಿಸಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅಶ್ಲೀಲ ಪದ ಬಳಕೆ ಆರೋಪ: ಸಿ.ಟಿ.ರವಿ ಬಂಧನ ಸಾರ್ವಜನಿಕರ ಸಮಸ್ಯೆ ಶೀಘ್ರ ಪರಿಹರಿಸಿ: ಅಧಿಕಾರಿಗಳಿಗೆ ಡಿಸಿ ಸೂಚನೆ