ನ್ಯೂಡೆಲ್ಲಿ: ದೇಶದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ.ರಾಧಾಕೃಷ್ಣನ್ ಅವರು ಇಂದು (ಶುಕ್ರವಾರ ಸೆ.12) ಗಣ್ಯರ ಸಮ್ಮುಖದಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ರಾಜನಾಥ್ ಸಿಂಗ್, ಎಚ್.ಡಿ.ಕುಮಾರಸ್ವಾಮಿ, ನಿರ್ಗಮಿತ ರಾಜ್ಯಪಾಲರಾದ ಜಗದೀಪ್ ಧನಕರ್ ಸೇರಿದಂತೆ ನೂರಾರು ಗಣ್ಯರ ಸಮ್ಮುಖದಲ್ಲಿ ಇಂದು ಬೆಳಗ್ಗೆ 10ಗಂಟೆ ಸುಮಾರು ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಮಾಣವಚನ ಬೋಧಿಸಿದರು.
ಈ ವೇಳೆ ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ, ಕರ್ನಾಟಕ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್, ಆಂಧ್ರಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು, ಪಂಜಾಬ್ ರಾಜ್ಯಪಾಲ ಮತ್ತು ಚಂಡೀಗಢ ಆಡಳಿತಾಧಿಕಾರಿ ಗುಲಾಬ್ ಚಂದ್ ಕಟಾರಿಯಾ, ಜಾರ್ಖಂಡ್ ರಾಜ್ಯಪಾಲ ಸಂತೋಷ್ ಗಂಗ್ವಾರ್ ಮತ್ತು ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.
ಜಗದೀಪ್ ಧನ್ಕರ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಉಪರಾಷ್ಟ್ರಪತಿ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆಯುವ ಮೂಲಕ ಸಿ.ಪಿ.ರಾಧಾಕೃಷ್ಣನ್ ಗೆಲುವು ಸಾಧಿಸಿದ್ದರು. ರಾಧಾಕೃಷ್ಣನ್ ಅವರು 452 ಮೊದಲ ಪ್ರಾಶಸ್ತ್ಯದ ಮತಗಳನ್ನು ಪಡೆದು ಗೆಲುವು ಸಾಧಿಸಿದರೆ, ಪ್ರತಿಸ್ಪರ್ಧಿ ಸುದರ್ಶನ್ ರೆಡ್ಡಿ 300 ಮತಗಳನ್ನು ಪಡೆದು ಪರಾಭವಗೊಂಡಿದ್ದರು.
ರಾಜೀನಾಮೆ ಬಳಿಕ ಕಾಣಿಸಿಕೊಂಡ ಧನಕರ್: ಇನ್ನೂ ಪ್ರಮಾಣವಚನ ಕಾರ್ಯಕ್ರಮದಲ್ಲಿ ಮಾಜಿ ಉಪರಾಷ್ಟ್ರಪತಿ, ರಾಜೀನಾಮೆ ನೀಡಿದ ಉಪರಾಷ್ಟ್ರಪತಿ ಹಾಗೂ ಪ್ರಸ್ತುತ ಉಪರಾಷ್ಟ್ರಪತಿಗಳು ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಜಗದೀಪ್ ಧನಕರ್ ರಾಜೀನಾಮೆ ಬಳಿಕ ಮೊದಲ ಬಾರಿ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದು, ಹಲವರ ಅಚ್ಚರಿಗೆ ಕಾರಣವಾಗಿದೆ.

Related


You Might Also Like
ಸೆ.22ರಿಂದ ಅ.7ರವರೆಗೆ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದಲ್ಲಿ ಇದೇ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರವರೆಗೆ ಹೊಸದಾಗಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ಎಲ್ಲರೂ...
ಬೋನಿನಲ್ಲಿದ್ದ ಕರುವ ಬೇಟೆಯಾಡಲು ಬಂದು ತಿನ್ನದೆ ಅಚ್ಚರಿ ಮೂಡಿಸಿದ ಚಿರತೆ !
ಮೈಸೂರು: ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನಲ್ಲಿ ಅಚ್ಚರಿಯೊಂದು ನಡೆದಿದೆ. ಬೋನಿನಲ್ಲಿ ಹಸುವಿನ ಕರು ಇದ್ದರೂ ಅದನ್ನು ತಿನ್ನದೆ ಚಿರತೆ ಹಾಗೆಯೇ ಅದರ ಜತೆಗೆ ಇದ್ದಿದ್ದು ಭಾರಿ ಅಚ್ಚರಿ ಮೂಡಿಸಿದೆ....
ಕಾಡುಪ್ರಾಣಿಗಳ ದಾಳಿಯಿಂದ ಸತ್ತರೆ ಲಕ್ಷ ಲಕ್ಷ ಪರಿಹಾರ ಸಿಗುತ್ತದೆ ಎಂಬ ಆಸೆಗೆ ಬಿದ್ದು ಪತಿಯನ್ನೇ ಕೊಂದು ಕಥೆ ಕಟ್ಟಿದ ಐನಾತಿ ಪತ್ನಿ
ಮೈಸೂರು: ಕಾಡು ಪ್ರಾಣಿಗಳಿಂದ ಜೀವ ಕಳೆದುಕೊಂಡವರ ಕುಟುಂಬಕ್ಕೆ ಸರ್ಕಾರದಿಂದ ಸಿಗುವ ಪರಿಹಾರ ಹಣದ ಆಸೆಗೆ ಪತಿಯನ್ನು ತಾನೇ ಕೊಂದು, ಹುಲಿ ಕೊಂದಿದೆ ಅಂತ ನಂಬಿಸಲು ಯತ್ನಿಸಿದ ಪತ್ನಿ...
ರಾಷ್ಟ್ರಕವಿ ಕುವೆಂಪುರಿಗೆ ಭಾರತ ರತ್ನ ಕೊಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಸಂಪುಟ ನಿರ್ಧಾರ: ಸಚಿವ HKP
ಬೆಂಗಳೂರು: ವಿಶ್ವ ಮಾನವ ಸಂದೇಶ ಸಾರಿದ ಕುವೆಂಪು ಅವರ ಬರಹಗಳು ಮತ್ತು ಚಿಂತನೆಗಳನ್ನು ರಾಷ್ಟ್ರವ್ಯಾಪಿಯಾಗಿಸಲು, ಆ ಮೂಲಕ ಸಮಾಜದಲ್ಲಿ ಜಾತ್ಯತೀತ ಮತ್ತು ಸೌಹಾರ್ದ ಮನೋವೃತ್ತಿಯನ್ನು ಬೆಳೆಸಲು ಕುವೆಂಪು...
ಮೈಸೂರು-ಮನಕಲಕುವ ಘಟನೆ: ಆಸ್ಪತ್ರೆ ಬಿಲ್ ಕಟ್ಟಲು ಗ್ರಾಮದ ಯುವಕರು, ಸಂಬಂಧಿಕರ ಜತೆ ಭಿಕ್ಷೆ ಬೇಡಿದ ಕುಟುಂಬ
ಮೈಸೂರು: ನಂಜನಗೂಡು ತಾಲೂಕಿನ ಹೆಡತಲೆ ಗ್ರಾಮದಲ್ಲೊಂದು ಮನಕಲಕುವ ಘಟನೆ ನಡೆದಿದೆ. ಆಸ್ಪತ್ರೆಯ ಬಿಲ್ ಕಟ್ಟಲು ಗ್ರಾಮದ ಯುವಕರು, ಸಂಬಂಧಿಕರ ಜೊತೆ ಸೇರಿ ಕುಟುಂಬವೊಂದು ಭಿಕ್ಷೆ ಬೇಡಿದೆ. ಹೌದು....
ವರದಕ್ಷಿಣೆ ಕಿರುಕುಳ ಆರೋಪ: ಚಲನಚಿತ್ರ ನಿರ್ದೇಶಕ, ನಟ ಎಸ್.ನಾರಾಯಣ್, ಪತ್ನಿ, ಪುತ್ರನ ವಿರುದ್ಧ FIR ದಾಖಲು
ಬೆಂಗಳೂರು: ಸೊಸೆಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪದಡಿ ಖ್ಯಾತ ಚಲನಚಿತ್ರ ನಿರ್ದೇಶಕ, ನಟ ಎಸ್.ನಾರಾಯಣ್, ಪತ್ನಿ ಹಾಗೂ ಪುತ್ರನ ವಿರುದ್ಧ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಸೊಸೆಯೇ ದೂರು...
ಡಾ.ವಿಷ್ಣುವರ್ಧನ್, ಸರೋಜಾದೇವಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ: ಸರ್ಕಾರ ಘೊಷಣೆ- ಅಭಿಮಾನಿಗಳಲ್ಲಿ ಹರ್ಷ
ಬೆಂಗಳೂರು: ರಾಜ್ಯ ಸರ್ಕಾರ ಸಾಹಸಸಿಂಹ ವಿಷ್ಣುವರ್ಧನ್ ಹಾಗೂ ಹಿರಿಯ ನಟಿ ಸರೋಜಾದೇವಿಗೆ ಇಂದು ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಿದೆ. ನಮ್ಮ ದಶಕಗಳ ಬೇಡಿಕೆ ಫಲಿಸಿದೆ ಎಂದು...
ಹುತಾತ್ಮರಾದವರ ಕುಟುಂಬಗಳಿಗೆ 50 ಲಕ್ಷ ರೂ. ಪರಿಹಾರ: ಸಚಿವ ಈಶ್ವರ್ ಖಂಡ್ರೆ
ಬೆಂಗಳೂರು: ಕಾಡುಗಳ್ಳ ವೀರಪ್ಪನ್ ವಿರುದ್ಧ ಕಾರ್ಯಾಚರಣೆ, ಕಳ್ಳಬೇಟೆಗಾರರ ಹತ್ತಿಕ್ಕುವ ವೇಳೆ, ಕಾಡ್ಗಿಚ್ಚು ನಂದಿಸುವ ವೇಳೆ, ಮಾನವ – ಪ್ರಾಣಿಗಳ ಸಂಘರ್ಷದ ವೇಳೆ ಬಲಿಯಾದವರಿಗೆ 50 ಲಕ್ಷ ರೂ....
ಬಸ್ಸಿನಲ್ಲಿ ಪುತ್ರಿಗೆ ಲೈಂಗಿಕ ಕಿರುಕುಳ ನೀಡಿದ ಚಾಲಕನ ಬಟ್ಟೆ ಬಿಚ್ಚಿಸಿ ಥಳಿಸಿದ ತಾಯಿ
ಬೆಂಗಳೂರು: ಚಾಲಕ ಬಸ್ಸಿನಲ್ಲಿ ನಮ್ಮ ಮಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿ ತಾಯಿಯೊಬ್ಬಳು ಚಾಲಕನ ಬಟ್ಟೆ ಬಿಚ್ಚಿಸಿ ಥಳಿಸಿರುವ ಘಟನೆ ನಗರದ ಬಸವೇಶ್ವರ ಸರ್ಕಲ್ ಬಳಿ...