CRIMENEWSನಮ್ಮಜಿಲ್ಲೆಮೈಸೂರು

ಕಾಡುಪ್ರಾಣಿಗಳ ದಾಳಿಯಿಂದ ಸತ್ತರೆ ಲಕ್ಷ ಲಕ್ಷ ಪರಿಹಾರ ಸಿಗುತ್ತದೆ ಎಂಬ ಆಸೆಗೆ ಬಿದ್ದು ಪತಿಯನ್ನೇ ಕೊಂದು ಕಥೆ ಕಟ್ಟಿದ ಐನಾತಿ ಪತ್ನಿ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಕಾಡು ಪ್ರಾಣಿಗಳಿಂದ ಜೀವ ಕಳೆದುಕೊಂಡವರ ಕುಟುಂಬಕ್ಕೆ ಸರ್ಕಾರದಿಂದ ಸಿಗುವ ಪರಿಹಾರ ಹಣದ ಆಸೆಗೆ ಪತಿಯನ್ನು ತಾನೇ ಕೊಂದು, ಹುಲಿ ಕೊಂದಿದೆ ಅಂತ ನಂಬಿಸಲು ಯತ್ನಿಸಿದ ಪತ್ನಿ ಸದ್ಯ ಪೊಲೀಸರ ಅತಿಥಿಯಾಗಿದ್ದಾಲೆ.

ಈ ಕೃತ್ಯ ಎಸಗಿರುವುದು ಮೈಸೂರು ಜಿಲ್ಲೆಯ ಹುಣಸೂರು ತಾಲೂಕು ಚಿಕ್ಕ ಹೆಜ್ಜೂರು ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಗ್ರಾಮದ ನಿವಾಸಿ ವೆಂಕಟಸ್ವಾಮಿ ಕೊಲೆಯಾದ ವ್ಯಕ್ತಿ.

ಈತನ ಪತ್ನಿ ಸಲ್ಲಾಪುರಿ ಎಂಬಾಕೆಯೆ ಪತಿಯನ್ನು ಕೊಲೆ ಮಾಡಿ ಹುಲಿ ಕೊಂದಿದೆ ಎಂದು ನಾಟಕವಾಡಿದ್ದ ಐನಾತಿ ಹೆಂಗಸು.

ಈ ದಂಪತಿ ಅಡಿಕೆ ತೋಟದಲ್ಲಿ ಕೆಲಸ ಮಾಡಿಕೊಂಡು ಅಲ್ಲೇ ವಾಸ ಇದ್ದರು. ಒಂದು ವಾರದ ಹಿಂದೆ ಪತಿ ನಾಪತ್ತೆಯಾಗಿದ್ದಾರೆ ಎಂದು ಪತ್ನಿ ಸಲ್ಲಾಪುರಿ ದೂರು ನೀಡಿದ್ದರು. ದೂರಿನಲ್ಲಿ ಹುಲಿ ಆತನನ್ನು ಕೊಂದು ಎಳೆದುಕೊಂಡು ಹೋಗಿರಬಹುದೆಂದು ಅನುಮಾನ ವ್ಯಕ್ತಪಡಿಸಿದ್ದಳು.

ದೂರು ದಾಖಲಿಸಿಕೊಂಡ ಪೊಲೀಸರು ಈ ಬಗ್ಗೆ ಅರಣ್ಯ ಇಲಾಖೆ ಸಿಬ್ಬಂದಿ ಜತೆಗೂಡಿ ಪರಿಶೀಲನೆ ನಡೆಸಿದ ವೇಳೆ ಯಾವುದೇ ಪ್ರಾಣಿ ಬಂದ ಕುರುಹು ಸಿಕ್ಕಿಲ್ಲ. ಹೀಗಾಗಿ ಅನುಮಾನಗೊಂಡು ಪೊಲೀಸರು ಮನೆಯಲ್ಲಿ ಹುಡುಕಾಟ ನಡೆಸಿದ್ದು, ಆಗ ಮನೆಯ ಹಿಂದೆ ಇರುವ ತಿಪ್ಪೆಗುಂಡಿಯಲ್ಲಿ ವೆಂಕಟಸ್ವಾಮಿ ಶವ ಪತ್ತೆಯಾಗಿದೆ.

ವಿಷ ಹಾಕಿ ಪತಿಯನ್ನು ತಾನೆ ಕೊಲೆ ಮಾಡಿ ನಂತರ ತಿಪ್ಪೆಗುಂಡಿಗೆ ಎಳೆದುಕೊಂಡುಹೋಗಿ ಹೂತುಹಾಕಿ ಕಥೆ ಕಟ್ಟಿದ್ದಾಳೆ. ಪೊಲೀಸರ ವಿಚಾರಣೆ ವೇಳೆ ಪರಿಹಾರದ ಹಣಕ್ಕಾಗಿ ಈ ಕೃತ್ಯವೆಸಗಿದ್ದಾಗಿ ಆಕೆ ಬಾಯಿಬಿಟ್ಟಿದ್ದಾಳೆ.

Advertisement

ಕಾಡು ಪ್ರಾಣಿಯಿಂದ ಹತ್ಯೆಗೊಳಗಾದ ಕುಟುಂಬಕ್ಕೆ ಲಕ್ಷ ಲಕ್ಷ ಪರಿಹಾರ ಸಿಗುತ್ತದೆ ಎಂದು ಕೊಲೆ ಮಾಡಿರುವ ಸಲ್ಲಾಪುರಿಯನ್ನು ಸದ್ಯ ಪೊಲೀಸರು ಬಂಧಿಸಿದ್ದು, ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.

ವಿಜಯಪಥ - vijayapatha.in
Megha
the authorMegha

Leave a Reply

error: Content is protected !!