NEWSದೇಶ-ವಿದೇಶನಮ್ಮರಾಜ್ಯ

ಜೂನ್‌ 10- ರಾಜ್ಯದಲ್ಲಿ ಕೊರೊನಾಗೆ ಮೂವರು ಬಲಿ, 120 ಸೋಂಕು ದೃಢ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಮರಣ ಮೃದಂಗ ಮುಂದುವರಿದಿದ್ದು, ಬುಧವಾರ ಮಹಾಮಾರಿಗೆ ಮತ್ತೆ ಮೂವರು ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 71ಕ್ಕೇರಿಕೆಯಾಗಿದೆ. (ಅನ್ಯಕಾರಣದಿಂದ ಇಬ್ಬರು ಮೃತ).

ಇಂದು 120 ಜನರಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 6041ಕ್ಕೆ ಏರಿಕೆಯಾಗಿದೆ. ಇನ್ನು 120 ಸೋಂಕಿತರಲ್ಲಿ 68 ಮಂದಿ ಅಂತಾರಾಜ್ಯ ಪ್ರಯಾಣದ ಹಿನ್ನೆಲೆ ಹೊಂದಿದ್ದು, ಮೂವರು ಅಂತಾರಾಷ್ಟ್ರೀಯ ಪ್ರಯಾಣದಿಂದ ಮರಳಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

ಬೆಂಗಳೂರು 42, ಯಾದಗಿರಿಯಲ್ಲಿ 27, ವಿಜಯಪುರದಲ್ಲಿ 13, ಕಲಬುರಗಿಯಲ್ಲಿ 11 ಹಾಗೂ ಬೀದರ್ ನಲ್ಲಿ 5 ಪ್ರಕರಣ ಸೇರಿದಂತೆ ಇಂದು ಹೊಸದಾಗಿ 120 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.  ಅಲ್ಲದೆ ಇಂದು 257 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ಧಾರವಾಡ ಜಿಲ್ಲೆಯ 58 ವರ್ಷದ ವ್ಯಕ್ತಿ ಕೊರೊನಾಗೆ ಬಲಿಯಾಗಿದ್ದು, ಇವರು ಮಹಾರಾಷ್ಟ್ರದಿಂದ ಹಿಂದಿರುಗಿದ್ದರು  ಹುಬ್ಬಳ್ಳಿ ಧಾರವಾಡ ಜಿಲ್ಲೆಯ ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ  ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

ಇನ್ನು ಬೆಂಗಳೂರು ನಗರ ಜಿಲ್ಲೆಯಲ್ಲಿ ಇಬ್ಬರು ಮೃತಪಟ್ಟಿದ್ದು ಅದರಲ್ಲಿ 32ವರ್ಷದ ಮತ್ತು 57 ವರ್ಷದ ಪುರುಷರು ಮೃತಪಟ್ಟಿದ್ದಾರೆ.  ಇವರನ್ನು ನಿಗದಿತ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದಾರೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ದೇಶದಲ್ಲಿ 276,583 ಕ್ಕೇರಿದ ಸೋಂಕಿತರ ಸಂಖ್ಯೆ
ಇನ್ನು ದೇಶದಲ್ಲಿ ಈವರೆಗೆ 276,583 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. 7,745 ಮಂದಿ ಮೃತಪಟ್ಟಿದ್ದಾರೆ. 135,206 ಮಂದಿ ರೋಗಮುಕ್ತರಾಗಿದ್ದಾರೆ. ಪ್ರಪಂಚಾದ್ಯಂತ ಈವರೆಗೆ 7,354,275  ಜನರಲ್ಲಿ ಸೋಂಕು ಇರುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಖಚಿತಪಡಿಸಿದೆ. ಇನ್ನು 414,377 ಜನರು ಮೃತಪಟ್ಟಿದ್ದಾರೆ 3,628,913 ಮಂದಿ ರೋಗದಿಂದ ಮುಕ್ತಗೊಂಡಿದ್ದಾರೆ. view by country

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

Leave a Reply

error: Content is protected !!
LATEST
BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ