NEWSನಮ್ಮರಾಜ್ಯಸಿನಿಪಥ

ಚಲನಚಿತ್ರ ಪ್ರಶಸ್ತಿ ಆಕ್ಷೇಪಣೆ ಸಲ್ಲಿಸಲು ಅವಕಾಶ 

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: 2019ನೇ ವರ್ಷದ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿ  ಒಟ್ಟು 179 ಚಲನಚಿತ್ರ ನಿರ್ಮಾಪಕರಿಂದ ಅರ್ಜಿಗಳನ್ನು  ಸ್ವೀಕರಿಸಲಾಗಿದೆ.

ಈ ಅರ್ಜಿಗಳನ್ನು ಹೊರತುಪಡಿಸಿ ಇನ್ನೂ ಯಾವುದಾದರು ಚಿತ್ರ ನಿರ್ಮಾಪಕರು ನಿಗದಿತ ಅವಧಿಯೊಳಗೆ ಇಲಾಖೆಗೆ ಅರ್ಜಿ ಸಲ್ಲಿಸಿದ್ದು, ಪಟ್ಟಿಯಲ್ಲಿ ಬಿಟ್ಟು ಹೋಗಿದ್ದಲ್ಲಿ ಅಂತಹ ಚಿತ್ರ ನಿರ್ಮಾಪಕರು  ಜೂ. 20 ರೊಳಗಾಗಿ ಉಪನಿರ್ದೇಶಕರು, ಚಲನಚಿತ್ರ ಶಾಖೆ ಇವರಿಗೆ ಇಲಾಖೆಯು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ನೀಡಿರುವ ಸ್ವೀಕೃತಿಯ  (Acknowledgement)     ಮಾಹಿತಿಯನ್ನು ನೀಡಿದರೆ ಅರ್ಜಿಯನ್ನು ಪರಿಗಣಿಸಲಾಗುವುದು.

ಚಿತ್ರಗಳ ಪೈಕಿ ರಿಮೇಕ್ ಅಥವಾ ಡಬ್ಬಿಂಗ್ ಚಿತ್ರಗಳಾಗಿ ನಿರ್ಮಾಣಗೊಂಡ ಚಿತ್ರಗಳೆಂದು  ಏನಾದರೂ ಆಕ್ಷೇಪಣೆಗಳಿದ್ದಲ್ಲಿ ಜೂ. 20  ರೊಳಗಾಗಿ ಸೂಕ್ತ ದಾಖಲೆಯೊಂದಿಗೆ ಉಪನಿರ್ದೇಶಕರು, ಚಲನಚಿತ್ರ ಶಾಖೆ ಇವರಿಗೆ ಖುದ್ದಾಗಿ ನೀಡುವಂತೆ ತಿಳಿಸಲಾಗಿದೆ. ನಿಗದಿತ ಅವಧಿಯ ನಂತರ ನೀಡುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಯನ್ನು ಇಲಾಖೆಯ ವೆಬ್ ಸೈಟ್ ವಿಳಾಸ  dipr.karnataka.gov.in ವೀಕ್ಷಿಸಬಹುದೆಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ತಿಳಿಸಿದೆ.

Leave a Reply

error: Content is protected !!
LATEST
ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ...