ಹಾಸನ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಹಾಸನ ವಿಭಾಗದ ತನಿಖಾ ಸಿಬ್ಬಂದಿ ಸತ್ಯ ಮರೆಮಾಚಲು ಬಾಡಿ ಕ್ಯಾಮರಾ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಕೆಲವೊಂದು ಸಮಯದಲ್ಲಿ ಹ್ಯಾಂಗ್ ಆಗುತ್ತಿದ್ದು, ಕ್ಯಾಮರಾ ಸರಿಯಾಗಿ ಕಾರ್ಯ ನಿರ್ವಹಿಸದ ಕಾರಣ ಪ್ರಕರಣದ ವಿಡಿಯೋ ಚಿತ್ರೀಕರಣ ಆಗಿಲ್ಲ ಎಂದು ಸುಳ್ಳು ಹೇಳಿದ್ದಕ್ಕೆ ಕಾನೂನು ಕ್ರಮ ತೆಗೆದುಕೊಳ್ಳಲು ವಿಭಾಗೀಯ ನಿಯಂತ್ರಣಾಧಿಕಾರಿ ದೀಪಕ್ ಕುಮಾರ್ ಮುಂದಾಗಿದ್ದಾರೆ.
ಹಾಸನ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಹಾಗೂ ಶಿಸ್ತು ಪ್ರಾಧಿಕಾರಿಯಾದ ದೀಪಕ್ ಕುಮಾರ್ ಅವರು ಈ ಪ್ರಕರಣದ ಬಗ್ಗೆ ಸತ್ಯಾಸತ್ಯತೆಗಳನ್ನು ತಿಳಿಯಲು ನಿಯಮ 22ರ ಅನ್ವಯ ತನಿಖಾ ವಿಭಾಗದ ಸಂಚಾರ ನಿರೀಕ್ಷಕರಾದ ರಾಜಣ್ಣ, ಹಾಗೂ ಎಚ್.ಎಚ್. ಮಲ್ಲೇಶ್ ಅವರಿಗೆ ಆರೋಪ ಪತ್ರ ಜಾರಿ ಮಾಡಿದ್ದಾರೆ.
13-04-2023 ರಂದು ವಿಭಾಗೀಯ ತನಿಖಾದಳದಲ್ಲಿ ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಸಂಜೆ ಸುಮಾರು 4.09ರಲ್ಲಿ ಬೆಂಗಳೂರು ಕೇಂದ್ರೀಯ ವಿಭಾಗದ ಆರನೇ ಘಟಕದ ವಾಹನ ಸಂಖ್ಯೆ ಕೆಎ57 ಎಫ್-2736 ಮಾರ್ಗ ಸಂಖ್ಯೆ 96ಎಬಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಜಯದೇವ ಎಂ. ಚಾಲಕ-ಕಂ-ನಿರ್ವಾಹಕ ಮತ್ತು ಸಿದ್ದಗಂಗಯ್ಯ, ಚಾಲಕ ಅವರು ಮಟ್ಟನವಿಲೆ ಹತ್ತಿರ ಸರ್ವಿಸ್ ರಸ್ತೆ ಮೂಲಕ ಕಾರ್ಯಾಚರಣೆ ಮಾಡದೆ ಬೈಪಾಸ್ ರಸ್ತೆ ಮೂಲಕ ಕಾರ್ಯಾಚರಣೆ ಮಾಡಿರುವ ಸಂಬಂಧ ಕೆಂಪು ಗುರುತಿನ ಪ್ರಕರಣ ದಾಖಲಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ದೇಹಕ್ಕೆ ಧರಿಸುವ ಕ್ಯಾಮರಾದಲ್ಲಿ ಚಿತ್ರೀಕರಣ ಮಾಡಿಲ್ಲ.
ಪ್ರಕರಣದ ಚಿತ್ರೀಕರಣ ಮಾಡದೆ ಇರುವ ಬಗ್ಗೆ ಸ್ಪಷ್ಟಿಕರಣ ನೀಡಲು ಸೂಚಿಸಿದಾಗ ಸತ್ಯ ಮರೆಮಾಚಲು ಕ್ಯಾಮೆರಾ ಸರಿಯಾಗಿ ಕಾರ್ಯ ನಿರ್ವಹಿಸುತ್ತಿರುವುದಿಲ್ಲ. ಕೆಲವೊಂದು ಸಮಯದಲ್ಲಿ ಹ್ಯಾಂಗ್ ಆಗುತ್ತಿದ್ದು, ಕ್ಯಾಮರಾ ಸರಿಯಾಗಿ ಕಾರ್ಯ ನಿರ್ವಹಿಸದ ಕಾರಣ ಈ ಪ್ರಕರಣದ ವಿಡಿಯೋ ಚಿತ್ರೀಕರಣ ಆಗಿಲ್ಲ ಎಂದು ತಿಳಿಸಿದ್ದೀರಿ.
ಆದರೆ ಕ್ಯಾಮೆರಾದ ಚಿತ್ರೀಕರಣದ ತುಣುಕುಗಳನ್ನು ಪರಿಶೀಲಿಸಿದಾಗ ಆ ದಿನದಂದು ಯಾವುದೇ ಚಿತ್ರೀಕರಣ ದಾಖಲಾಗದೆ ಇರುವುದು ಕಂಡುಬಂದಿದೆ ಸುತ್ತೋಲೆ ಸಂಖ್ಯೆ-1591 ದಿನಾಂಕ-03-02-2021ರ ನಿರ್ದೇಶನಗಳನ್ನು ಉಲ್ಲಂಘಿಸಿ, ಪ್ರಕರಣದ ಚಿತ್ರೀಕರಣ ಮಾಡದೆ ಇರುವುದರಿಂದ ಜಯದೇವ ಅವರಿಗೆ ಕರ್ನಾಟಕ ಮಾಹಿತಿ ಆಯೋಗ ಪ್ರಕರಣದ ಚಿತ್ರೀಕರಣವನ್ನು ನೀಡುವಂತೆ ಆದೇಶಿಸಿದ್ದು ಮಾಹಿತಿ ನೀಡಲು ಕಷ್ಟಕರವಾಗಲು ನೀವು ಕಾರಣರಾಗಿದ್ದೀರಿ.
ಈ ಮೂಲಕ ಜವಾಬ್ದಾರಿಯುತ ಸಂಚಾರ ಮೇಲ್ವಿಚಾರಕ ಸಿಬ್ಬಂದಿಗಳಾದ ನೀವು ಕರ್ತವ್ಯ ನಿರ್ಲಕ್ಷ್ಯತನ ತೋರಿ ಕರ್ತವ್ಯಲೋಪವೆಸಗಿರುತ್ತೀರಿ.

ಅಲ್ಲದೆ ವಿಭಾಗೀಯ ಸಂಚಲನಾಧಿಕಾರಿಗಳನ್ನು ಸಾಕ್ಷಿಯಾಗಿರಿಸಿದ್ದು, ಕೆಲ ದಾಖಲೆಗಳನ್ನು ಹಾಕ್ಕಿದ್ದೀರಿ ಆದರೆ ಇದೆಷ್ಟೇ ಅಲ್ಲದೆ ಅಗತ್ಯವೆಂದು ಕಂಡು ಬರುವ ಹೆಚ್ಚುವರಿ ಸಾಕ್ಷಿಗಳನ್ನು ಪರೀಕ್ಷಿಸುವ ಹಕ್ಕನ್ನು ಸಹಾ ವಿಚಾರಣಾ ಪ್ರಾಧಿಕಾರವು ಹೊಂದಿದೆ. ಹೀಗಾಗಿ ಈ ಆರೋಪ ಪತ್ರ ತಲುಪಿದ ಹತ್ತು ದಿನಗಳಲ್ಲಿ ತನ್ನ ರಕ್ಷಣಾ ಲಿಖಿತ ಹೇಳಿಕೆಗಳನ್ನು ಹಾಜರು ಪಡಿಸಬೇಕು ಎಂದು ಡಿಸಿ ಆದೇಶಿಸಿದ್ದಾರೆ.
ಈ ಆರೋಪಗಳಿಗೆ ನಿಮ್ಮ ಸಮಜಾಯಿಷಿಯು ನಿಗದಿತ ಸಮಯದಲ್ಲಿ ತಲುಪದೇ ಹೋದಲ್ಲಿ ಅವುಗಳಿಗೆ ಯಾವುದೇ ಸಮಜಾಯಿಷಿಯನ್ನು ನೀಡಲು ಇರುವುದಿಲ್ಲವೆಂದು ಭಾವಿಸಿ ಸಂಸ್ಥೆ ಸೇವಾ ನಿಯಮಾವಳಿಗಳ ಮೇರೆಗೆ ಏಕಪಕ್ಷೀಯವಾಗಿ ನಿರ್ಣಯಿಸಲಾಗುವುದು. ಆರೋಪ ಪತ್ರವನ್ನು ದ್ವಿಪ್ರತಿಯಲ್ಲಿ ಕಳುಹಿಸಲಾಗಿದ್ದು, ಮೂಲ ಪ್ರತಿಯನ್ನು ದಾಖಲೆಗೆ ಇರಿಸಿಕೊಂಡು ನಕಲು ಪ್ರತಿಯನ್ನು ತಮ್ಮ ಸಹಿಯೊಂದಿಗೆ ಹಿಂದಿರುಗಿಸಬೇಕು ಎಂದು ತಿಳಿಸಿದ್ದಾರೆ.
Related


You Might Also Like
KSRTC ಹಾಸನ: ತನಿಖಾಧಿಕಾರಿಗಳ ಬಾಡಿ ಕ್ಯಾಮೆರಾದ ವಿಡಿಯೋ ರೆಕಾರ್ಡಿಂಗ್ ಕೊಡಲು ವಿಫಲ- ಆರೋಪ ಪತ್ರ ಜಾರಿ ಮಾಡಿದ ಡಿಸಿ
ಹಾಸನ: ಸಾರಿಗೆ ಸಂಸ್ಥೆಯ ಮಾರ್ಗ ತನಿಖಾಧಿಕಾರಿಗಳು ಬಾಡಿ ಕ್ಯಾಮೆರಾವನ್ನು ಹಾಕಿಕೊಂಡು ತನಿಖೆ ಮಾಡದ ಪರಿಣಾಮ ಮಾಹಿತಿ ಆಯೋಗದಲ್ಲಿ ಪ್ರಕರಣ ದಾಖಲು ಮಾಡಿದ ನೌಕರನಿಗೆ ವಿಡಿಯೋ ರೆಕಾರ್ಡಿಂಗ್ ಕೊಡಲು...
ಮೆಜೆಸ್ಟಿಕ್ BMTC: ಟೀ ಚೆನ್ನಾಗಿರುವುದಿಲ್ಲ ಬೇರೆ ಅಂಗಡಿಗೆ ಹೋಗೋಣ ಎಂದಿದ್ದಕ್ಕೆ ಚಾಲಕನ ಮೇಲೆ ಹಲ್ಲೆ- ಆರೋಪಿ ಬಂಧನ
ಬೆಂಗಳೂರು: ಈ ಅಂಗಡಿಯಲ್ಲಿ ಬೇಡ ಇಲ್ಲಿ ಟೀ ಚೆನ್ನಾಗಿರುವುದಿಲ್ಲ ಎಂದು ಹೇಳಿ ಅಲ್ಲಿಯೇ ಪಕ್ಕದಲ್ಲಿದ್ದ ಟೀ ಅಂಗಡಿಗೆ ಹೋಗೋಣ ಎಂದು ಸಹೋದ್ಯೋಗಿಗೆ ಹೇಳಿದ್ದಕ್ಕೆ ಕುಪಿತನಾದ ಟೀ ಮಾರುವ...
KRSTC: ಅನ್ಯಮಾರ್ಗದಲ್ಲಿ ಹೋಗಲು ಮಹಿಳಾ ಕಂಡಕ್ಟರನ್ನು ರಾತ್ರಿ ಅರ್ಧದಲ್ಲೇ ಇಳಿಸಿಹೋದ ಸಹೋದ್ಯೋಗಿಗಳು…!
ಸಾರಿಗೆ ಚಾಲನಾ ಸಿಬ್ಬಂದಿಗಳಲ್ಲಿ ಒಬ್ಬರಿಗೊಬ್ಬರು ಆಗುವುದಿಲ್ಲ ಎಂಬುದಕ್ಕೆ ಇದು ಮತ್ತೊಂದು ನಿದರ್ಶನ ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಬಹುತೇಕ ಎಲ್ಲ ಚಾಲನಾ ಸಿಬ್ಬಂದಿಗಳಲ್ಲಿ...
ಸೆ.22ರಿಂದ ಅ.7ರವರೆಗೆ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದಲ್ಲಿ ಇದೇ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರವರೆಗೆ ಹೊಸದಾಗಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ಎಲ್ಲರೂ...
ಬೋನಿನಲ್ಲಿದ್ದ ಕರುವ ಬೇಟೆಯಾಡಲು ಬಂದು ತಿನ್ನದೆ ಅಚ್ಚರಿ ಮೂಡಿಸಿದ ಚಿರತೆ !
ಮೈಸೂರು: ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನಲ್ಲಿ ಅಚ್ಚರಿಯೊಂದು ನಡೆದಿದೆ. ಬೋನಿನಲ್ಲಿ ಹಸುವಿನ ಕರು ಇದ್ದರೂ ಅದನ್ನು ತಿನ್ನದೆ ಚಿರತೆ ಹಾಗೆಯೇ ಅದರ ಜತೆಗೆ ಇದ್ದಿದ್ದು ಭಾರಿ ಅಚ್ಚರಿ ಮೂಡಿಸಿದೆ....
ಕಾಡುಪ್ರಾಣಿಗಳ ದಾಳಿಯಿಂದ ಸತ್ತರೆ ಲಕ್ಷ ಲಕ್ಷ ಪರಿಹಾರ ಸಿಗುತ್ತದೆ ಎಂಬ ಆಸೆಗೆ ಬಿದ್ದು ಪತಿಯನ್ನೇ ಕೊಂದು ಕಥೆ ಕಟ್ಟಿದ ಐನಾತಿ ಪತ್ನಿ
ಮೈಸೂರು: ಕಾಡು ಪ್ರಾಣಿಗಳಿಂದ ಜೀವ ಕಳೆದುಕೊಂಡವರ ಕುಟುಂಬಕ್ಕೆ ಸರ್ಕಾರದಿಂದ ಸಿಗುವ ಪರಿಹಾರ ಹಣದ ಆಸೆಗೆ ಪತಿಯನ್ನು ತಾನೇ ಕೊಂದು, ಹುಲಿ ಕೊಂದಿದೆ ಅಂತ ನಂಬಿಸಲು ಯತ್ನಿಸಿದ ಪತ್ನಿ...
ಇಂದು 15ನೇ ಉಪರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸಿ.ಪಿ.ರಾಧಾಕೃಷ್ಣನ್
ನ್ಯೂಡೆಲ್ಲಿ: ದೇಶದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ.ರಾಧಾಕೃಷ್ಣನ್ ಅವರು ಇಂದು (ಶುಕ್ರವಾರ ಸೆ.12) ಗಣ್ಯರ ಸಮ್ಮುಖದಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ರಾಜನಾಥ್ ಸಿಂಗ್,...
ರಾಷ್ಟ್ರಕವಿ ಕುವೆಂಪುರಿಗೆ ಭಾರತ ರತ್ನ ಕೊಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಸಂಪುಟ ನಿರ್ಧಾರ: ಸಚಿವ HKP
ಬೆಂಗಳೂರು: ವಿಶ್ವ ಮಾನವ ಸಂದೇಶ ಸಾರಿದ ಕುವೆಂಪು ಅವರ ಬರಹಗಳು ಮತ್ತು ಚಿಂತನೆಗಳನ್ನು ರಾಷ್ಟ್ರವ್ಯಾಪಿಯಾಗಿಸಲು, ಆ ಮೂಲಕ ಸಮಾಜದಲ್ಲಿ ಜಾತ್ಯತೀತ ಮತ್ತು ಸೌಹಾರ್ದ ಮನೋವೃತ್ತಿಯನ್ನು ಬೆಳೆಸಲು ಕುವೆಂಪು...
ಮೈಸೂರು-ಮನಕಲಕುವ ಘಟನೆ: ಆಸ್ಪತ್ರೆ ಬಿಲ್ ಕಟ್ಟಲು ಗ್ರಾಮದ ಯುವಕರು, ಸಂಬಂಧಿಕರ ಜತೆ ಭಿಕ್ಷೆ ಬೇಡಿದ ಕುಟುಂಬ
ಮೈಸೂರು: ನಂಜನಗೂಡು ತಾಲೂಕಿನ ಹೆಡತಲೆ ಗ್ರಾಮದಲ್ಲೊಂದು ಮನಕಲಕುವ ಘಟನೆ ನಡೆದಿದೆ. ಆಸ್ಪತ್ರೆಯ ಬಿಲ್ ಕಟ್ಟಲು ಗ್ರಾಮದ ಯುವಕರು, ಸಂಬಂಧಿಕರ ಜೊತೆ ಸೇರಿ ಕುಟುಂಬವೊಂದು ಭಿಕ್ಷೆ ಬೇಡಿದೆ. ಹೌದು....