CRIMENEWSನಮ್ಮಜಿಲ್ಲೆ

ಸಾಲಬಾಧೆ-ಗಂಡ, ಇಬ್ಬರು ಮಕ್ಕಳು ಸೇರಿ ನಾಲ್ವರು ಆತ್ಮಹತ್ಯೆಗೆ ಯತ್ನ ಮೂವರು ಮೃತ: ಸಾವು ಬದುಕಿನ ನಡುವೆ ತಾಯಿ ಸೆಣಸಾಟ

ವಿಜಯಪಥ ಸಮಗ್ರ ಸುದ್ದಿ

ಹೊಸಕೋಟೆ: ಸಾಲಬಾಧೆ ತಾಳಲಾರದೇ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು, ಈ ಪೈಕಿ ಮೂವರು ಮೃತಪಟ್ಟಿರುವ ಘಟನೆ ತಾಲೂಕಿನ ಗೊಣಕನಹಳ್ಳಿಯಲ್ಲಿ ಗ್ರಾಮದಲ್ಲಿ ನಡೆದಿದೆ.

ಗಂಡ, ಇಬ್ಬರು ಮಕ್ಕಳನ್ನು ಕೊಲೆ ಮಾಡಿದ ಬಳಿಕ ತಾಯಿ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.‌ ಅದೃಷ್ಟವಶಾತ್‌ ಆಕೆ ಪ್ರಾಣಾಪಾಯದಿಂದ ಪಾರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಡ ಶಿವು (32), ಮಗಳು ಚಂದ್ರಕಳಾ (11) ಮಗ ಉದಯ್ ಸೂರ್ಯ (07) ಮೃತರು.

ಈ ಹಿಂದೆ ಪತಿ ಅಪಘಾತದಲ್ಲಿ ಗಾಯಗೊಂಡಿದ್ದ ಕಾರಣ ಚಿಕಿತ್ಸೆಗಾಗಿ ಕುಟುಂಬ ಸಾಲ ಮಾಡಿಕೊಂಡಿತ್ತು. ಸಾಲ ಹೆಚ್ಚಾಗಿದ್ದರಿಂದ ದಂಪತಿ ಆತ್ಮಹತ್ಯೆ ನಿರ್ಧಾರ ಮಾಡಿದ್ದಾರೆ. ನಾವು ಸತ್ತರೆ ಮಕ್ಕಳು ತಬ್ಬಲಿಗಳಾಗುತ್ತಾರೆ ಎಂದು ಮಕ್ಕಳನ್ನೂ ಸಾಯಿಸುವ ನಿರ್ಧಾರ ಮಾಡಿದ್ದಾರೆ.

ಮೊದಲಿಗೆ ಗಂಡ ಮತ್ತು ಮಕ್ಕಳ ಕುತ್ತಿಗೆಯನ್ನು ವೇಲ್‌ನಿಂದ ಸುತ್ತಿ ಪತ್ನಿ ಕೊಲೆ ಮಾಡಿದ್ದಾಳೆ. ಬಳಿಕ ತಾನೂ ಹಗ್ಗ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾಳೆ. ಹಗ್ಗ ತುಂಡಾದ ಕಾರಣ ಪ್ರಾಣಾಪಾಯದಿಂದ ಪಾರಾಗಿದ್ದಾಳೆ.

ಸದ್ಯ ಮಹಿಳೆಗೆ ಹೊಸಕೋಟೆ ಸರ್ಕಾರಿ ಆಸ್ವತ್ರೆಯಲ್ಲಿ‌ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಘಟನೆ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯಪಥ - vijayapatha.in
Megha
the authorMegha

Leave a Reply

error: Content is protected !!