CRIMENEWSನಮ್ಮರಾಜ್ಯ

ಮೊಸಳೆಹೊಸಳ್ಳಿ ದುರಂತ: ಮೃತರ ಮನೆಗಳಿಗೆ ವ್ಹೀಲ್‌ ಚೇರ್‌ನಲ್ಲೇ ತೆರಳಿ ಸಾಂತ್ವನ ಹೇಳಿದ ಮಾಜಿ ಪ್ರಧಾನಿ ಎಚ್‌ಡಿಡಿ

ವಿಜಯಪಥ ಸಮಗ್ರ ಸುದ್ದಿ

ಹಾಸನ: ಜಿಲ್ಲೆಯ ಮೊಸಳೆಹೊಸಳ್ಳಿಯಲ್ಲಿ ಮೊನ್ನೆ ನಡೆದ ಅಪಘಾತ ಪ್ರಕರಣ ನಿಜಕ್ಕೂ ಘನಘೋರ. ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಚಂದನ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 10ಕ್ಕೆ ಏರಿದೆ. ಇತ್ತ ಟ್ರಕ್ ಚಾಲಕನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದ್ದು, ಆತನ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.

ಈ ನಡುವೆ ಶನಿವಾರ ಸಂಜೆ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದ ಮಾಜು ಪ್ರಾಧಾನಿ ಎಚ್‌.ಡಿ ದೇವೇಗೌಡ ಅವರು ಇಂದು ಮೃತರ ಮನೆಗಳಿಗೆ ತೆರಳಿ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ. ಜತೆಗೆ ಜೆಡಿಎಸ್‌ ಪಕ್ಷದಿಂದ ಪರಿಹಾರ ಮೊತ್ತವನ್ನೂ ಘೋಷಣೆ ಮಾಡಿದ್ದಾರೆ. ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದ ಅವರು, ರಾಜ್ಯ ಸರ್ಕಾರ ಪರಿಹಾರದ ಮೊತ್ತ ಹೆಚ್ಚಿಸುವಂತೆ ಆಗ್ರಹ ಮಾಡಿದ್ದಾರೆ.

ವ್ಹೀಲ್‌ ಚೇರ್‌ನಲ್ಲೇ ಬಂದ ಮಾಜಿ ಪ್ರಧಾನಿ: ಶನಿವಾರ ಸಂಜೆ ಹಾಸನಕ್ಕೆ ಬಂದ ಮಾಜಿ ಪ್ರಧಾನಿ ದೇವೇಗೌಡರು ವ್ಹೀಲ್‌ಚೇರಲ್ಲೇ ಹಿಮ್ಸ್‌ಗೆ ಭೇಟಿ ನೀಡಿ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದರು. ಬಳಿಕ ಮಾತನಾಡಿದ ಗೌಡರು, ಜೆಡಿಎಸ್ ಪಕ್ಷದ ವತಿಯಿಂದ ಮೃತ ಕುಟುಂಬಸ್ಥರಿಗೆ 1 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದರು.

ಅಲ್ಲದೇ ಇಂದು ಮೊಸಳೆಹೊಸಳ್ಳಿಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಸರ್ಕಾರಿ ಇಂಜಿನಿಯರಿಂಗ್‌ ಕಾಲೇಜು ಬಾಲಕರ ವಿದ್ಯಾರ್ಥಿ ನಿಲಯ ಕಟ್ಟಡದ ಕಾಮಗಾರಿ ವೀಕ್ಷಿಸಿದ ಎಚ್‌ಡಿಡಿ ಬಳಿಕ ಟ್ರಕ್‌ ಹರಿದು ಮೃತಪಟ್ಟ ಇಂಜಿನಿಯರಿಂಗ್‌ ವಿದ್ಯಾರ್ಥಿಗಳ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ಈ ವೇಳೆ ಶಾಸಕರಾದ ಎಚ್.ಡಿ ರೇವಣ್ಣ, ಎಚ್.ಪಿ ಸ್ವರೂಪ್‌ಪ್ರಕಾಶ್ ಸೇರಿ ಹಲವರು ಇದ್ದರು.

ವಿದ್ಯಾಭ್ಯಾಸ ಖರ್ಚು ಭರಿಸುವ ಭರವಸೆ: ಹೊಳೆನರಸೀಪುರದ ಬಂಟರಹಳ್ಳಿಯ ಪ್ರಭಾಕರ್, ಮುತ್ತಿಗೆಹಿರೀಹಳ್ಳಿಯ ಗೋಕಲ್‌ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ದೇವೇಗೌಡರು ಮೃತ ಗೋಕಲ್ ತಂಗಿಯ ವಿದ್ಯಾಭ್ಯಾಸ ಖರ್ಚನ್ನು ಭರಿಸುವುದಾಗಿ ಭರವಸೆ ನೀಡಿದ್ದಾರೆ. ಸದ್ಯ ಗೋಕುಲ್‌ ತಂಗಿ ನಾಲ್ಕನೇ ತರಗತಿ ಓದುತ್ತಿದ್ದಾಳೆ.

ಡಿಜೆಗೆ ಕುಣಿಯಲು ಬಂದ ಯುವಕರು…?: ಗಣೇಶ್ ಸಂಭ್ರಮ ನೋಡಲು ಬಂದವರು ನೋಡ ನೋಡ್ತಿದ್ದಂತೆ ಹೆಣವಾಗಿದ್ದು, ನಿಜಕ್ಕೂ ಘೋರ ದುರಂತವೇ ಸರಿ. ಟ್ರಕ್ ಹರಿದ ರಭಸಕ್ಕೆ ಸ್ಥಳದಲ್ಲೇ 9 ಜನರು ಸಾವನಪ್ಪಿದ್ದರೇ. ಗಂಭೀರವಾಗಿ ಗಾಯಗೊಂಡಿದ್ದ ಹಾಸನದ ಶಿವಯ್ಯನ ಕೊಪ್ಪಲು ಗ್ರಾಮದ 28 ವರ್ಷದ ಯುವಕನ ಬ್ರೈನ್ ಡೆಡ್ ಆಗಿತ್ತು. ಹಿಮ್ಸ್ ಆಸ್ಪತ್ರೆಯ ಐಸಿಯುನಲ್ಲಿ ಚಂದನ್ ಚಿಕಿತ್ಸೆ ಫಲಕಾರಿಯಾಗದೇ ಕೊನೆ ಉಸಿರೆಳೆದಿದ್ದಾನೆ.

Advertisement

ಪುತ್ರನ ಸಾವಿನ ಸುದ್ದಿ ತಿಳಿದು ಆಸ್ಪತ್ರೆ ಅವರಣದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಆಟೋ ಚಾಲಕನಾಗಿದ್ದ ಚಂದನ್‌ಗೆ ಇನ್ನೂ ಮದುವೆಯಾಗಿಲ್ಲ.. ಕುಟುಂಬಕ್ಕೆ ಅಧಾರ ಸ್ತಂಭವಾಗಿದ್ದ, ತನ್ನ ಗ್ರಾಮದಿಂದ ಮೊಸಳೆಹೊಸಳ್ಳಿ ಬಾಡಿಗಿಗೆ ಬಂದಿದ್ದ ಚಂದನ ಟೀ ಕುಡಿಯಲು ಆಟೋ ನಿಲ್ಲಿಸಿ. ಕುತೂಹಲಕ್ಕೆ ಮೆರವಣಿಗೆ ನೋಡಲು ನಿಂತವನು ಮಸಣ ಸೇರಿದ್ದಾನೆ.

ಅಪಘಾತದಲ್ಲಿ ಸಾವನಪ್ಪಿದ ಹೊಳೆನರಸೀಪುರ ತಾಲೂಕು ಡನಾಯಕನಹಳ್ಳಿ ಕೊಪ್ಪಲು ನಿವಾಸಿ ಈಶ್ವರ ಬಿನ್ ರವಿಕುಮಾರ್ ಅಂತ್ಯಕ್ರಿಯೆ ಸ್ವಗ್ರಾಮದಲ್ಲಿ ನೇರವೇರಿದೆ. ಎಸ್‌ಎಸ್‌ಎಲ್‌ಸಿಯಲ್ಲಿ 95% ಅಂಕ ಪಡೆದು, ಪಿಯುಸಿ ವಿಜ್ಞಾನ ವಿಭಾಗದಲ್ಲಿ ಓದುತ್ತಿದ್ದ ಈಶ್ವರ. ಮೆರವಣಿಗೆ ನೋಡಲು ಬಂದು ತನ್ನ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಆಟೋ ಓಡಿಸಿಕೊಂಡು ಗ್ರಾಮದಲ್ಲಿ ಜೀವನ ಸಾಗಿಸುತ್ತಿದ್ದ ಈಶ್ವರನ ಪೋಷಕರು ಮಗನನ್ನು ಚನ್ನಾಗಿ ಓದಿಸುವ ಆಕಾಂಕ್ಷೆ ಹೊಂದಿದ್ದರು.

ವಿಜಯಪಥ - vijayapatha.in
Megha
the authorMegha

Leave a Reply

error: Content is protected !!