NEWSದೇಶ-ವಿದೇಶನಮ್ಮರಾಜ್ಯ

ಜೂನ್‌ 11- ಕೊರೊನಾಗೆ ಮೂರು ಬಲಿ, SSLC ವಿದ್ಯಾರ್ಥಿ ಸೇರಿ 204 ಮಂದಿಯಲ್ಲಿ ಸೋಂಕು ದೃಢ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ತನ್ನ ಮರಣ ಮೃದಂಗ ಮುಂದುವರಿಸಿದ್ದು ಗುರುವಾರ ಮಹಾಮಾರಿಗೆ ಮತ್ತೆ ಮೂವರು ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 74ಕ್ಕೆ ಏರಿಕೆಯಾಗಿದೆ. (ಅನ್ಯಕಾರಣದಿಂದ ಇಬ್ಬರು ಮೃತ).

ಇಂದು ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸೇರಿ 204 ಮಂದಿಗೆ ಕೊರೊನಾ ಸೋಂಕು ಪಾಸಿಟಿವ್ ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 6,245ಕ್ಕೆ ಏರಿಕೆಯಾಗಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ರಾಜ್ಯದಲ್ಲಿ ಚೇತರಿಕೆಯ ಪ್ರಮಾಣ ಕೂಡ ಉತ್ತಮವಾಗಿದ್ದು, ಇಂದು 114 ಮಂದಿ ಗುಣಮುಖರಾಗಿದ್ದಾರೆ. ಈವರೆಗೆ ಒಟ್ಟು 2,976ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 3,191 ಸಕ್ರಿಯ ಪ್ರಕರಣಗಳಿದ್ದು, 10 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹೊಸದಾಗಿ ಪತ್ತೆಯಾದ 204 ಸೋಂಕಿತರಲ್ಲಿ 157 ಜನ ಹೊರರಾಜ್ಯ ಪ್ರಯಾಣದ ಇತಿಹಾಸ ಹೊಂದಿದ್ದಾರೆ. ಯಾದಗಿರಿಯಲ್ಲಿ 66, ಉಡುಪಿಯಲ್ಲಿ 22, ಬೆಂಗಳೂರು ನಗರದಲ್ಲಿ 17, ಕಲಬುರಗಿಯಲ್ಲಿ 16, ರಾಯಚೂರಿನಲ್ಲಿ 15, ಬೀದರ್‌ನಲ್ಲಿ 14, ಶಿವಮೊಗ್ಗದಲ್ಲಿ 10, ದಾವಣಗೆರೆಯಲ್ಲಿ 9, ಕೋಲಾರದಲ್ಲಿ 6, ಮೈಸೂರು, ರಾಮನಗರದಲ್ಲಿ ತಲಾ 5, ವಿಜಯಪುರದಲ್ಲಿ 4, ಬಾಗಲಕೋಟೆ, ಉತ್ತರ ಕನ್ನಡದಲ್ಲಿ ತಲಾ 3, ದಕ್ಷಿಣ ಕನ್ನಡ, ಹಾಸನ, ಧಾರವಾಡದಲ್ಲಿ ತಲಾ 2, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಕೊಪ್ಪಳದಲ್ಲಿ ತಲಾ 1 ಪ್ರಕರಣಗಳು ವರದಿಯಾಗಿವೆ ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಬೆಂಗಳೂರು ನಗರದ 35 ವರ್ಷದ ವ್ಯಕ್ತಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಜ್ವರದ ಲಕ್ಷಣಗಳಿಂದ ಆಸ್ಪತ್ರೆಗೆ ದಾಖಲಾಗಿದ್ದರು. ದೀರ್ಘಕಾಲದ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದರು. ನಗರದ 60 ವರ್ಷದ ವ್ಯಕ್ತಿ ಜತೆಗೆ, ರಾಯಚೂರಿನ 28 ವರ್ಷದ ಮಹಿಳೆ ಕೂಡ ಸೋಂಕಿಗೆ ಬಲಿಯಾಗಿದ್ದಾರೆ. ಇವರು ಬೀದರ್ ಜಿಲ್ಲೆಗೆ ಪ್ರಯಾಣ ಬೆಳೆಸಿದ ಹಿನ್ನೆಲೆ ಹೊಂದಿದ್ದು, ತೀವ್ರ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು.

ದೇಶದಲ್ಲಿ 297,205 ಕ್ಕೇರಿದ ಸೋಂಕಿತರ ಸಂಖ್ಯೆ
ಇನ್ನು ದೇಶದಲ್ಲಿ ಈವರೆಗೆ 297,205 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. 8,477 ಮಂದಿ ಮೃತಪಟ್ಟಿದ್ದಾರೆ. 146,238 ಮಂದಿ ರೋಗಮುಕ್ತರಾಗಿದ್ದಾರೆ. ಪ್ರಪಂಚಾದ್ಯಂತ ಈವರೆಗೆ 7,535,210 ಜನರಲ್ಲಿ ಸೋಂಕು ಇರುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಖಚಿತಪಡಿಸಿದೆ. ಇನ್ನು 421,158 ಜನರು ಮೃತಪಟ್ಟಿದ್ದಾರೆ 3,819,525 ಮಂದಿ ರೋಗದಿಂದ ಮುಕ್ತಗೊಂಡಿದ್ದಾರೆ. view by country

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್