NEWSಕೃಷಿನಮ್ಮರಾಜ್ಯ

ಇತ್ತೀಚಿಗೆ ಆಹಾರ ಉತ್ಪಾದನಾ ಪ್ರಮಾಣ ಕಡಿಮೆ ಆಗಿದೆ: ಸಿಎಂ ಸಿದ್ದರಾಮಯ್ಯ ಆತಂಕ

ವಿಜಯಪಥ ಸಮಗ್ರ ಸುದ್ದಿ

ಧಾರವಾಡ: ಸ್ವಾತಂತ್ರ್ಯದ ಹೊಸ್ತಿಲಲ್ಲಿ ಆಹಾರ ಉತ್ಪಾದನೆಯಲ್ಲಿ ಹಿಂದೆ ಇದ್ದೆವು. ಬಳಿಕ ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಬೆಳೆಸಿಕೊಂಡು ರಫ್ತು ಮಾಡುವುದರಲ್ಲೂ ಮುಂದೆ ಬಂದೆವು. ಆದರೆ, ಇತ್ತೀಚಿಗೆ ಫಲವತ್ತತೆ ಕಡಿಮೆ ಆಗುತ್ತಾ ಆಹಾರ ಉತ್ಪಾದನಾ ಪ್ರಮಾಣ ಕಡಿಮೆ ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದ್ದಾರೆ.

ಇಂದು ಧಾರವಾಡ ಕೃಷಿ ವಿಶ್ವವಿದ್ಯಾಲಯ ಆಯೋಜಿಸಿದ್ದ ಕೃಷಿ ಮೇಳ-2025 ರಲ್ಲಿ ಅವರು ಮಾತನಾಡಿ, ಇದಕ್ಕೆ ಸ್ಪಷ್ಟ ಕಾರಣಗಳನ್ನು ಗುರುತಿಸಿ ಪರಿಹಾರ ಕಂಡುಕೊಳ್ಳುವ ದಿಕ್ಕಿನಲ್ಲಿ ಕೃಷಿ ವಿವಿಗಳು ಹೆಚ್ಚೆಚ್ಚು ಅಧ್ಯಯನ‌ ನಡೆಸಬೇಕು. ಇದಕ್ಕೆ ಅಗತ್ಯವಾದ ಹಣಕಾಸಿನ‌ ನೆರವನ್ನು ಒದಗಿಸಲು ಸರ್ಕಾರ ಸಿದ್ಧವಿದೆ ಎಂದು ಹೇಳಿದರು.

ಇನ್ನು ಸದ್ಯ ರಾಜ್ಯ ಹಾಲಿನ‌ ಉತ್ಪಾದನೆಯಲ್ಲಿ ಎರಡನೇ ಸ್ಥಾನದಲ್ಲಿದೆ. ಸದ್ಯದಲ್ಲೇ ಮಹಾರಾಷ್ಟ್ರ ರಾಜ್ಯವನ್ನು ಹಿಂದಿಕ್ಕಿ ನಾವೇ ನಂಬರ್ ಆದರೂ ಆಶ್ಚರ್ಯವಿಲ್ಲ. ಹೈನುಗಾರಿಕೆಯಲ್ಲಿ ನಾವು ಅಪಾರ ಪ್ರಗತಿ ಸಾಧಿಸಿದ್ದೇವೆ ಎಂದರು.

ಅಕ್ಕಿ, ರಾಗಿ, ಗೋಧಿಯಲ್ಲಿ ಸಕ್ಕರೆಯ ಪ್ರಮಾಣ ಹೆಚ್ಚಾಗಿದ್ದು ಡಯಾಬಿಟಿಕ್ ಸಮಸ್ಯೆ ಇರುವವರ ಪ್ರಮಾಣ ಹೆಚ್ಚುತ್ತಿದೆ. ಆದ್ದರಿಂದ ಸಕ್ಕರೆ ಪ್ರಮಾಣ ಕಡಿಮೆ ಇರುವ ಸಿರಿಧಾನ್ಯ ಕೃಷಿಗೆ ಹೆಚ್ಚೆಚ್ಚು ಪ್ರೋತ್ಸಾಹ ನೀಡುತ್ತಿದ್ದೇವೆ ಎಂದು ತಿಳಿಸಿದರು.

ಕೃಷಿ ವಿವಿಗಳು Lab to Land ಜೊತೆಗೆ Land to Lab ಕಡೆಗೆ ಗಮನ ಹರಿಸುವ ಕೆಲಸ ಮಾಡಬೇಕು. ಕಡಿಮೆ ಮಳೆಯಲ್ಲೂ ಉತ್ತಮ ಬೆಳೆ ಬೆಳೆಯುವ ರೀತಿ ಸುಸ್ಥಿರ ಕೃಷಿಗೆ ಪೂರಕವಾಗಿ ಅಧ್ಯಯನಗಳು ನಡೆಯಬೇಕು ಎಂದು ಸಲಹೆ ನೀಡಿದರು.

ಮೊದಲೆಲ್ಲಾ ಕೃಷಿ ಚಟುವಟಿಕೆಗೆ ಪೂರಕವಾಗಿ ಗ್ರಾಮ ಸಹಾಯಕರು ಇದ್ದು, ಅವರು ಗ್ರಾಮಗಳಲ್ಲೇ ನೆಲೆಸುತ್ತಿದ್ದರು. ಈಗ ಅವರ ಸಂಖ್ಯೆ ಕಡಿಮೆ ಆಗಿದ್ದು ಮತ್ತೆ ಅವರ ಪ್ರಮಾಣ ಹೆಚ್ಚಾಗುವ ದಿಕ್ಕಿನಲ್ಲಿ ಕೃಷಿ ಸಚಿವರು ಕ್ರಮ ತೆಗೆದುಕೊಳ್ಳಬೇಕಿದೆ ಎಂದು ಹೇಳಿದರು.

ಕೃಷಿ ಭೂಮಿಗಳು ಹೆಚ್ಚಾಗದೆ, ಕೃಷಿಯ ಪ್ರಮಾಣ ಹೆಚ್ಚಾಗದೆ ಕೇವಲ ಕೃಷಿ ವಿವಿಗಳನ್ನು ಹೆಚ್ಚಿಸಿದರೆ ಹೆಚ್ಚಿನ ಅನುಕೂಲಗಳು ಆಗುವುದಿಲ್ಲ. ಬೆಣ್ಣೆಹಳ್ಳಕ್ಕೆ 200 ಕೋಟಿ ಕೊಟ್ಟಿದ್ದೇವೆ. ಟೆಂಡರ್ ಕರೆಯಲಾಗಿದೆ. ಸದ್ಯದಲ್ಲೇ ಕೆಲಸ ಕೂಡ ಆರಂಭವಾಗಲಿದೆ ಎಂದರು.

ಇನ್ನು ಮಳೆಹಾನಿಯಿಂದ ಆಗಿರುವ ಬೆಳೆ ಹಾನಿ ಮತ್ತು ಅನಾಹುತಗಳ ಬಗ್ಗೆ ಧಾರವಾಡ ಜಿಲ್ಲಾಡಳಿತ ಶೇ.90 ಪರಿಹಾರ ನೀಡಿ, ಪ್ರಗತಿಯ ವರದಿ ನೀಡಿದೆ. ಇದಕ್ಕಾಗಿ ಜಿಲ್ಲಾಧಿಕಾರಿ ದಿವ್ಯಪ್ರಭು ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರಿಗೆ ಅಭಿನಂದನೆಗಳು ಎಂದರು.

Megha
the authorMegha

Leave a Reply

error: Content is protected !!
Latest news
ಟನ್‌ ಕಬ್ಬಿಗೆ 3650 ರೂ. ಎಫ್ಆರ್‌ಪಿ ದರ ಘೋಷಣೆ ಮಾಡಿರುವ ಕೇಂದ್ರ ಸರ್ಕಾರದ ನಡೆ ಸಲ್ಲ- 4500 ರೂ. ನಿಗದಿಗೊಳಿಸಬೇಕು: ಕ... KKRTC ವಿಜಯಪುರ: ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರಬರ ಭ್ರಷ್ಟಾಚಾರ ಸಾಬೀತು- ಆದರೂ ಕ್ರಮ ತೆಗೆದುಕೊಳ್ಳದ ಎಂಡ... KSRTC: ಪಲ್ಲಕ್ಕಿಯಲ್ಲಿ ಆಕಸ್ಮಿಕ ಬೆಂಕಿ- ಧಗಧಗಿಸಿದ ಬಸ್‌- ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ KSRTC ಕಡೂರು: ಘಟಕದಲ್ಲೊಬ್ಬಳು ಟಾರ್ಚರ್‌ ಟಿಸಿ- ನೌಕರರಿಗೆ ಮಾನಸಿಕ ಕಿರುಕುಳ- ರಜೆ ಬದಲು ಗೈರು ತೋರಿಸುವ ನಟ ಭಯಂಕರಿ! EPS ಪಿಂಚಣಿದಾರರ 100ನೇ ಮಾಸಿಕ, ಶತದಿನೋತ್ಸವದಲ್ಲಿ ಮುಸ್ಸಂಜೆಯ ತರುಣರ ಸಂಭ್ರಮ KSRTC: ಫ್ರೀಡಂ ಪಾರ್ಕ್‌ನಲ್ಲಿ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿಗೆ ಆಗ್ರಹಿಸಿ ಸಾರಿಗೆ ನೌಕರರ ಪ್ರತಿಭಟನೆ- ಸರ್ಕಾರ... ಗೆದ್ದ3ವರ್ಷದ ಬಳಿಕ ಶಾಸಕರಾದ ಜೀವರಾಜ್: ಅಧಿಕಾರಿಗಳ ಎಡವಟ್ಟಿಗೆ ಸೋತರು 3ವರ್ಷ ಶಾಸಕರಾಗಿದ್ದ ರಾಜೇಗೌಡ KSRTC: ಇಂದು ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡಲು ಆಗ್ರಹಿಸಿ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KSRTC: ನಾಳೆ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡದ ಸರ್ಕಾರದ ವಿರುದ್ಧ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KKRTC: ನೋಡಿ ಎಂಡಿ ಅವರೇ ನಿಮ್ಮ ಸಂಸ್ಥೆಯಲ್ಲಿ ಚಾಲನಾ ಸಿಬ್ಬಂದಿಗಳು ಮೇ 1ರಂದು ರಜೆ ತೆಗೆದುಕೊಂಡರೆ ಆಬ್ಸೆಂಟ್‌ ಹಾಕುವ ...