ಹುಬ್ಬಳ್ಳಿ: ಎಸ್ಸೆಸ್ಸೆಲ್ಸಿ ಪರೀಕ್ಷೆ ರದ್ದು ಮಾಡಬೇಕು ಎಂದು ಆಗ್ರಹಿಸಿ ವಾಟಾಳ್ ನಾಗರಾಜ್ ಏಕಾಂಗಿಯಾಗಿ ನಗರದ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಜಾಗಟೆ ಬಡಿದು ಪ್ರತಿಭಟನೆ ಮಾಡಿದ್ದಾರೆ.
ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳು ಪರೀಕ್ಷೆ ಬರೆಯುವುದು ಕಷ್ಟವಾಗುತ್ತದೆ. ಆದ್ದರಿಂದ ಪರೀಕ್ಷೆ ರದ್ದು ಮಾಡಿ ಎಲ್ಲರನ್ನೂ ಪಾಸ್ ಮಾಡಬೇಕು ಎಂದು ಒತ್ತಾಯಿಸಿದ್ದು, ಇದಕ್ಕೆ ಶಿಕ್ಷಣ ಇಲಾಖೆ ಸ್ಪಂದಿಸಿ ಮಕ್ಕಳ ಜೀವನವನ್ನು ರಕ್ಷಣೆ ಮಾಡುವತ್ತ ಗಮನಹರಿಸಬೇಕು ಎಂದು ಆಗ್ರಹಿಸಿದರು.
ಈಗಾಗಲೇ ತಮಿಳುನಾಡು, ತೆಲಂಗಾಣ ಸೇರಿದಂತೆ ಹಲವು ರಾಜ್ಯಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ರದ್ದು ಮಾಡಲಾಗಿದೆ. ಆದೇ ರೀತಿ ಇಲ್ಲಿಯೂ ಮಾಡಬೇಕು ಎಂದು ಒತ್ತಾಯಿಸಿದರು.
ಈ ಹಿಂದೆ ಕೊರೊನಾ ಕಡಿಮೆಯಿದ್ದಾಗ ಲಾಕ್ ಡೌನ್ ಮಾಡಿ ಜಾಸ್ತಿಯಾದ ಮೇಲೆ ಸಂತೆ ಮಾಡುತ್ತಿದ್ದೀರಿ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ವಾಟಾಳ್ ನಾಗರಾಜ್ ಆನ್ಲೈನ್ ಶಿಕ್ಷಣಕ್ಕೆ ಯಾವುದೇ ಕಾರಣಕ್ಕೂ ಅವಕಾಶ ಕೊಡಬಾರದು, ಒಂದು ವೇಳೆ ನೀವು ಆನ್ಲೈನ್ ಶಿಕ್ಷಣಕ್ಕೆ ಅವಕಾಶ ಮಾಡಿಕೊಟ್ಟರೆ ಪೋಷಕರ ಆರ್ಥಿಕ ಹೊರೆಯನ್ನು ಹೆಚ್ಚಿಸಿದಂತಾಗುತ್ತದೆ ಆದ್ದರಿಂದ ಇಂಥ ವ್ಯವಸ್ಥೆಯನ್ನು ತೊಲಗಿಸಲು ಮುಂದಾಗಬೇಕು ಎಂದು ಸಲಹೆ ನೀಡಿದರು.
![](https://vijayapatha.in/wp-content/uploads/2024/02/QR-Code-VP-1-1-300x62.png)