NEWSನಮ್ಮಜಿಲ್ಲೆ

ಬಿಬಿಎಂಪಿಗೆ ಕೋಟ್ಯಂತರ ರೂ. ತೆರಿಗೆ ವಂಚನೆ

ಭಾಗಿಯಾಗಿರುವ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಎಎಪಿ ಆಗ್ರಹ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ವಾಣಿಜ್ಯ ಕಟ್ಟಡಗಳ ತೆರಿಗೆ ವಂಚನೆಯಲ್ಲಿ ನೇರವಾಗಿ ಭಾಗಿಯಾಗಿರುವ ಅಧಿಕಾರಿಗಳ ವಿರುದ್ಧ ಉಗ್ರ ಕ್ರಮ ಕೈಗೊಳ್ಳಬೇಕು ಎಂದು ಆಮ್ ಆದ್ಮಿ ಪಾರ್ಟಿ ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿ ಆಗ್ರಹಿಸಿದ್ದಾರೆ.

ಟೋಟಲ್ ಸ್ಟೇಷನ್ ಸರ್ವೆಯ ನಂತರ ವಾಣಿಜ್ಯ ಕಟ್ಟಡಗಳ ತೆರಿಗೆಯನ್ನು ಕಾನೂನು ಬಾಹಿರವಾಗಿ ಪಾಲಿಕೆಯ ಅಧಿಕಾರಿಗಳು ಕಡಿತ ಮಾಡಿದ್ದಾರೆ. ಪೂರ್ವ, ಯಲಹಂಕ, ಬೊಮ್ಮನಹಳ್ಳಿ, ದಕ್ಷಿಣ, ಮಹದೇವ, ಪುರವಲಯಗಳಲ್ಲಿ 105 ವಾಣಿಜ್ಯ  ಕಟ್ಟಡಗಳ ಟೋಟಲ್ ಸ್ಟೇಷನ್ ಸರ್ವೆ ನಡೆಸಿ ಇವುಗಳಲ್ಲಿ ಪೂರ್ವ ವಲಯದ 9 ಹಾಗೂ ಬೊಮ್ಮನಹಳ್ಳಿಯ 2 ಆಸ್ತಿಗಳಿಗೆ ಹಿಂದಿನ ಜಂಟಿ ಆಯುಕ್ತರು ತೆರಿಗೆ ಕಡಿತ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಅಲ್ಲದೇ ನಿಯಮಕ್ಕೆ ವಿರುದ್ಧವಾಗಿ ತೆರಿಗೆ ಕಡಿತ ಮಾಡಿರುವುದರಿಂದ ಕೋಟ್ಯಂತರ ರೂಪಾಯಿ ಅಕ್ರಮ ನಡೆದಿದೆ. ಕಡಿತ ಮಾಡಿರುವ ಆಸ್ತಿಗಳಿಂದ 321.83 ಕೋಟಿ ರೂಪಾಯಿ ಪಾಲಿಕೆಗೆ ಬರಬೇಕಿತ್ತು ಎಂದು ಹೇಳಿದ್ದಾರೆ.

ನಿಯಮಗಳನ್ನು ಗಾಳಿಗೆ ತೂರಿ ತೆರಿಗೆ ಕಡಿತ ಮಾಡುವ ಮೂಲಕ ಅಧಿಕಾರಿಗಳು ಕೋಟ್ಯಂತರ ರೂಪಾಯಿಗಳ ಅಕ್ರಮವೆಸಗಿದ್ದಾರೆ, ಪಾಲಿಕೆ ಇದರ ಬಗ್ಗೆ ಪರಿಶೀಲನೆ ನಡೆಸಲು ನೇಮಿಸಿದ್ದ ಉಪಸಮಿತಿಯ ವರದಿ ಅಪೂರ್ಣವಾಗಿದ್ದು ಮುಂದೆ  ಬಿಬಿಎಂಪಿ  ನಡೆಸುವ ತನಿಖೆಗಳ ವಿಶ್ವಾಸಾರ್ಹತೆಯು ಪ್ರಶ್ನಾರ್ಹವೇ ಆಗಿದೆ ಎಂದು ದೂರಿದ್ದಾರೆ.

ಭ್ರಷ್ಟಾಚಾರ ನಡೆಸಿರುವ ಅಧಿಕಾರಿಗಳು ಇಂದು ಮುಕ್ತವಾಗಿ ಪ್ರಭಾವಿ ಮಂತ್ರಿಗಳು ಹಾಗೂ ಮುಖ್ಯಮಂತ್ರಿಗಳ ಸುತ್ತಮುತ್ತವೇ  ಓಡಾಡಿಕೊಂಡಿದ್ದಾರೆ. ಇವರಿಗೆ ಕಾನೂನಿನ ಭಯವಿಲ್ಲವೆಂದು ತೋರುತ್ತಿದೆ. ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಿ ಅಕ್ರಮವೆಸಗಿರುವ ಅಧಿಕಾರಿಗಳ ವಿರುದ್ಧ ಕ್ರಮವನ್ನು ತೆಗೆದುಕೊಳ್ಳಬೇಕಾಗಿ  ಆಮ್ ಆದ್ಮಿ ಪಕ್ಷವು ಆಗ್ರಹಿಸಿದೆ.

ಈ ಬಗ್ಗೆ  ಪಕ್ಷದಿಂದ ಭ್ರಷ್ಟಾಚಾರ ನಿಗ್ರಹ ದಳದಲ್ಲಿ ಪ್ರಕರಣವನ್ನು ದಾಖಲು ಮಾಡಲಾಗುವುದೆಂದು  ಮೋಹನ್ ದಾಸರಿ ತಿಳಿಸಿದ್ದಾರೆ.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್