Please assign a menu to the primary menu location under menu

NEWSಕೃಷಿನಮ್ಮರಾಜ್ಯ

ಜೂ.14,15ರಂದು ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ನೈಋುತ್ಯ ಮುಂಗಾರು ಚುರುಕುಗೊಂಡಿದ್ದು ಜೂನ್ ಹದಿನಾಲ್ಕು ಮತ್ತು ಹದಿನೈದರಂದು ಗುಡುಗು ಸಿಡಿಲು ಸಹಿತ ಭಾರಿ ಮಳೆ ಬೀಳುವ ಸಂಭವ ಹೆಚ್ಚಾಗಿದೆ ಎಂದು ಹವಾಮಾನ ಇಲಾಖೆ ವರದಿ ನೀಡಿದೆ.

ಈ ಭಾಗದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಈ ಎರಡೂ ದಿನಗಳು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಕರಾವಳಿಯಲ್ಲಿ ಗಂಟೆಗೆ 45 ರಿಂದ 55 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುತ್ತಿದೆ. ಈ ಹಿನ್ನೆಲೆಯಲ್ಲಿ ಮೀನುಗಾರರು ಕಡಲಿಗೆ ಇಳಿಯದಂತೆ ಇಲಾಖೆ ಸೂಚನೆ ನೀಡಿದೆ.

ಜೂನ್ 15ರ ನಂತರ ಕರಾವಳಿ ಭಾಗದಲ್ಲಿ ಮಳೆ ಪ್ರಮಾಣ ಕೊಂಚ ತಗ್ಗಲಿದ್ದು ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಹಲವೆಡೆ ಮುಂದಿನ 48 ಗಂಟೆಗಳಲ್ಲಿ ಸಾಧಾರಣ ಮಳೆಯಾಗುವ  ಸಾಧ್ಯತೆ ಇದೆ ಎಂದು ತಿಳಿಸಿದೆ.

ಇಂದು ಅಂಕೋಲಾದಲ್ಲಿ ಗರಿಷ್ಠ

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ಶನಿವಾರ 20 ಸೆಂಟಿಮೀಟರ್ ಅತಿ ಹೆಚ್ಚು ಮಳೆಯಾಗಿದ್ದು ಕೋಟ, ಕೊಲ್ಲೂರು 9, ಕುಂದಾಪುರ, ಹೊನ್ನಾವರದಲ್ಲಿ ತಲಾ 8,  ಗೋಕರ್ಣ, ಸಿದ್ದಾಪುರದಲ್ಲಿ ತಲಾ 6 ಕಾರವಾರ ಮತ್ತು ಕಾರ್ಕಳದಲ್ಲಿ ತಲಾ ನಾಲ್ಕು, ಮೂಡಬಿದಿರೆ ಮಂಗಳೂರು ನಿಪ್ಪಾಣಿ ಹೊಸನಗರದಲ್ಲಿ ತಲಾ ಮೂರು ಸೆಂಟಿಮೀಟರ್‌ ಮಳೆಯಾಗಿದೆ.

ಜತೆಗೆ ಚಿಕ್ಕೋಡಿ ಹುಂಚದಕಟ್ಟೆ   ಹಾಗೂ ಕಮ್ಮರಡಿಯಲ್ಲಿ ತಲಾ 2 ಸೆಂಟಿ ಮೀಟರ್ ಮಳೆಯಾಗಿದ್ದು ಕೊಪ್ಪಳದಲ್ಲಿ 38.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿತ್ತು.

Leave a Reply

error: Content is protected !!
LATEST
KSRTC: ಈ ಅಧಿವೇಶನದಲ್ಲಾದರೂ ಸಿಎಂ ಸರಿ ಸಮಾನ ವೇತನ ಬಗ್ಗೆ ದಿಟ್ಟ ಹೆಜ್ಜೆ ಇಡಲಿ BMTC: ಆಧಾರ್‌ ಕಾರ್ಡ್‌ ಯಾವ ಭಾಷೆಯಲ್ಲೇ ಇರಲಿ ಕರ್ನಾಟಕದ ವಿಳಾಸವಿದ್ದರೆ ಉಚಿತ ಪ್ರಯಾಣ ಹಾವೇರಿ: ಸರ್ಕಾರಿ ಬಸ್ ಹತ್ತಲು ಹೋದ ವೃದ್ಧೆ ಕಾಲುಗಳ ಮೇಲೆ ಹಿಂಬದಿ ಚಕ್ರ ಹರಿದು ಕಾಲುಗಳು ಕಟ್‌ KSRTC ಮಡಿಕೇರಿ: ಸಹೋದ್ಯೋಗಿ ಕಂಡಕ್ಟರ್‌ ಕೊಲ್ಲುವ ಬೆದರಿಕೆ ಹಾಕಿ ಗಾಳಿಯಲ್ಲಿ ಗುಂಡ್ಹಾರಿಸಿದ ಡ್ರೈವರ್‌ ಬಂಧನ KKRTC ರಾಯಚೂರು: ಲಿಂಗಸುಗೂರು ಘಟಕ ವ್ಯವಸ್ಥಾಪಕ, ಡಿಸಿ ಅಮಾನತಿಗೆ ಕರವೇ ಆಗ್ರಹ ಮೈಸೂರು: ಸಾಲದ ಸುಳಿಗೆ ಸಿಲುಕಿದ KSRTC ಕಂಡಕ್ಟ‌ರ್: ನಾಲೆಗೆ ಹಾರಿ ಆತ್ಮಹತ್ಯೆ ಎಸ್‌.ಎಂ.ಕೃಷ್ಣ ಇನ್ನಿಲ್ಲ- ಪ್ರೇಮ ಕೃಷ್ಣಗೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮುಶೋಕ ಸಂದೇಶ ಮಾಜಿ ಸಿಎಂ ಎಸ್.ಎಂ.ಕೃಷ್ಣ ನಿಧನಕ್ಕೆ ಸಿಎಂ, ಮಾಜಿ ಸಿಎಂಗಳು ಸೇರಿ ಅನೇಕ ಗಣ್ಯರ ಸಂತಾಪ ಮಾಜಿ ಸಿಎಂ SMK ನಿಧನ: ನಾಳೆ ಶಾಲಾ- ಕಾಲೇಜು, ಕಚೇರಿಗಳಿಗೆ ರಜೆ ಘೋಷಣೆ ಅಕ್ರಮ ಪಡಿತರ ವಿರುದ್ಧ ವಿಶೇಷ ಕಾರ್ಯಾಚರಣೆ: ಆಹಾರ ಸಚಿವ ಮುನಿಯಪ್ಪ