Please assign a menu to the primary menu location under menu

NEWSದೇಶ-ವಿದೇಶ

ರಾಜ್ಯಸಭಾ ಚುನಾವಣೆ: 2ಸ್ಥಾನ ಕಾಂಗ್ರೆಸ್‌ಗೆ ಪಕ್ಕ ಎಂದ ಪಾಂಡೆ

ವಿಜಯಪಥ ಸಮಗ್ರ ಸುದ್ದಿ

ಜೈಪುರ: ಎರಡು ರಾಜ್ಯಸಭಾ ಸ್ಥಾನಗಳನ್ನು ಕಾಂಗ್ರೆಸ್ ಪಕ್ಷ ಗೆಲ್ಲಲಿದೆ ಎಂದು ರಾಜಸ್ಥಾನದ ಕಾಂಗ್ರೆಸ್ ಪಕ್ಷದ ನಾಯಕ ಅವಿನಾಶ್ ಪಾಂಡೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇತರ ಪಕ್ಷದ ಶಾಸಕರು ಪಕ್ಷೇತರ ಶಾಸಕರು ನಮಗೆ ಬೆಂಬಲ ನೀಡಲಿದ್ದು ಕಾಂಗ್ರೆಸ್ ಸುಲಭವಾಗಿ ಎರಡು ಸ್ಥಾನಗಳನ್ನು ಗೆಲ್ಲಲಿದೆ ಎಂಬ ವಿಶ್ವಾಸವಿದೆ ಎಂದು ಶನಿವಾರ ತಡರಾತ್ರಿ  ಹೇಳಿದರು.

ಆದರೆ ಜೂನ್‌ 19ರಂದು ನಡೆಯುವ ಚುನಾವಣೆಯಲ್ಲಿ ಬಿಜೆಪಿ ವಾಮಮಾರ್ಗದ ಮೂಲಕ ಗೆಲ್ಲುವ ಪ್ರಯತ್ನ ಮಾಡುತ್ತಿದೆ. ಅದರ ಕುದುರೆ ವ್ಯಾಪಾರದ ತಂತ್ರ ಫಲಿಸುವುದಿಲ್ಲ ಎಂದು ಪಾಂಡೆ ತಿಳಿಸಿದ್ದಾರೆ.

ಅಂದು ನಡೆಯುವ  ಚುನಾವಣೆಯಲ್ಲಿ ಬಿಜೆಪಿಗೆ ಮುಖಭಂಗವಾಗಲಿದೆ ಎಂದರು. ಕಾಂಗ್ರೆಸ್ ಕೆ.ಸಿ. ವೇಣುಗೋಪಾಲ್ ಹಾಗೂ ನೀರಜ್ ಡಾಂಗಿ ಅವರನ್ನು ಕಣಕ್ಕೆ ಇಳಿಸಿದೆ. ರಾಜಸ್ಥಾನ ವಿಧಾನಸಭೆಯ ಬಲಾಬಲದ ಪ್ರಕಾರ ಕಾಂಗ್ರೆಸ್ ಎರಡು ಬಿಜೆಪಿ ಒಂದು ಸ್ಥಾನವನ್ನು ಸುಲಭವಾಗಿ ಗೆಲ್ಲಲಿದೆ. ಆದರೆ ಬಿಜೆಪಿ ಎರಡನೇ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿರುವುದು ಕಾಂಗ್ರೆಸ್‌ನಲ್ಲಿ ಆತಂಕ ಉಂಟು ಮಾಡಿದೆ.

Leave a Reply

error: Content is protected !!
LATEST
KSRTC: ಈ ಅಧಿವೇಶನದಲ್ಲಾದರೂ ಸಿಎಂ ಸರಿ ಸಮಾನ ವೇತನ ಬಗ್ಗೆ ದಿಟ್ಟ ಹೆಜ್ಜೆ ಇಡಲಿ BMTC: ಆಧಾರ್‌ ಕಾರ್ಡ್‌ ಯಾವ ಭಾಷೆಯಲ್ಲೇ ಇರಲಿ ಕರ್ನಾಟಕದ ವಿಳಾಸವಿದ್ದರೆ ಉಚಿತ ಪ್ರಯಾಣ ಹಾವೇರಿ: ಸರ್ಕಾರಿ ಬಸ್ ಹತ್ತಲು ಹೋದ ವೃದ್ಧೆ ಕಾಲುಗಳ ಮೇಲೆ ಹಿಂಬದಿ ಚಕ್ರ ಹರಿದು ಕಾಲುಗಳು ಕಟ್‌ KSRTC ಮಡಿಕೇರಿ: ಸಹೋದ್ಯೋಗಿ ಕಂಡಕ್ಟರ್‌ ಕೊಲ್ಲುವ ಬೆದರಿಕೆ ಹಾಕಿ ಗಾಳಿಯಲ್ಲಿ ಗುಂಡ್ಹಾರಿಸಿದ ಡ್ರೈವರ್‌ ಬಂಧನ KKRTC ರಾಯಚೂರು: ಲಿಂಗಸುಗೂರು ಘಟಕ ವ್ಯವಸ್ಥಾಪಕ, ಡಿಸಿ ಅಮಾನತಿಗೆ ಕರವೇ ಆಗ್ರಹ ಮೈಸೂರು: ಸಾಲದ ಸುಳಿಗೆ ಸಿಲುಕಿದ KSRTC ಕಂಡಕ್ಟ‌ರ್: ನಾಲೆಗೆ ಹಾರಿ ಆತ್ಮಹತ್ಯೆ ಎಸ್‌.ಎಂ.ಕೃಷ್ಣ ಇನ್ನಿಲ್ಲ- ಪ್ರೇಮ ಕೃಷ್ಣಗೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮುಶೋಕ ಸಂದೇಶ ಮಾಜಿ ಸಿಎಂ ಎಸ್.ಎಂ.ಕೃಷ್ಣ ನಿಧನಕ್ಕೆ ಸಿಎಂ, ಮಾಜಿ ಸಿಎಂಗಳು ಸೇರಿ ಅನೇಕ ಗಣ್ಯರ ಸಂತಾಪ ಮಾಜಿ ಸಿಎಂ SMK ನಿಧನ: ನಾಳೆ ಶಾಲಾ- ಕಾಲೇಜು, ಕಚೇರಿಗಳಿಗೆ ರಜೆ ಘೋಷಣೆ ಅಕ್ರಮ ಪಡಿತರ ವಿರುದ್ಧ ವಿಶೇಷ ಕಾರ್ಯಾಚರಣೆ: ಆಹಾರ ಸಚಿವ ಮುನಿಯಪ್ಪ