ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಮರಣ ಮೃದಂಗ ಮುಂದುವರಿದಿದ್ದು ಭಾನುವಾರ ಮಹಾಮಾರಿಗೆ ಮತ್ತೆ ಐವರು ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 89 ಕ್ಕೇರಿಕೆಯಾಗಿದೆ. (ಅನ್ಯಕಾರಣದಿಂದ ಮೂವರು ಮೃತ).
ಇಂದು 176 ಜನರಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 7000ಕ್ಕೆ ಏರಿಕೆಯಾಗಿದೆ. ಇನ್ನು 176 ಸೋಂಕಿತರಲ್ಲಿ 6 ಮಂದಿ ಅಂತಾರಾಷ್ಟ್ರೀಯ ಪ್ರಯಾಣದಿಂದ ಮರಳಿದ್ದಾರೆ.
ಇಂದು ಬೆಂಗಳೂರು ನಗರ 42, ಯಾದಗಿರಿ 22, ಉಡುಪಿ 21, ಬೀದರ್ 20, ಕಲಬುರಗಿ 13, ಧಾರವಾಡ 10, ಬಳ್ಳಾರಿ 8, ಕೋಲಾರ 7, ಉತ್ತರ ಕನ್ನಡ 6, ಮಂಡ್ಯ ಮತ್ತು ದಕ್ಷಿಣ ಕನ್ನಡ ತಲಾ 5, ಬಾಗಲಕೋಟೆ 4, ರಾಮನಗರ 3, ರಾಯಚೂರು ಮತ್ತು ಶಿವಮೊಗ್ಗದಲ್ಲಿ ತಲಾ 2, ಬೆಳಗಾವಿ, ಹಾಸನ, ವಿಜಯಪುರ, ಬೆಂಗಳೂರು ಗ್ರಾಮಾಂತರ ಮತ್ತು ಹಾವೇರಿ ಜಿಲ್ಲೆಯಲ್ಲಿ ತಲಾ ಒಂದೊಂದು ಪ್ರಕರಣಗಳು ಬೆಳಕಿಗೆ ಬಂದಿವೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಕೊರೊನಾ ಸೋಂಕಿನಿಂದ ರಾಜ್ಯದಲ್ಲಿ 24 ಗಂಟೆಯೊಳಗೆ 5 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಚೇತರಿಕೆಯ ಪ್ರಮಾಣ ಕೂಡ ಉತ್ತಮವಾಗಿದ್ದು, ಇಂದು 312 ಮಂದಿ ಗುಣಮುಖರಾಗಿದ್ದಾರೆ. ಇದರಿಂದ ಚೇತರಿಕೆ ಕಂಡವರ ಸಂಖ್ಯೆ 3955 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 2956 ಸಕ್ರಿಯ ಪ್ರಕರಣಗಳಿದ್ದು, 16 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ದೇಶದಲ್ಲಿ 322,777 ಕ್ಕೇರಿದ ಸೋಂಕಿತರ ಸಂಖ್ಯೆ
ಇನ್ನು ದೇಶದಲ್ಲಿ ಈವರೆಗೆ 322,777 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. 9,206 ಮಂದಿ ಮೃತಪಟ್ಟಿದ್ದಾರೆ. 163,019 ಮಂದಿ ರೋಗಮುಕ್ತರಾಗಿದ್ದಾರೆ. ಪ್ರಪಂಚಾದ್ಯಂತ ಈವರೆಗೆ 7,905,198 ಜನರಲ್ಲಿ ಸೋಂಕು ಇರುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಖಚಿತಪಡಿಸಿದೆ. ಇನ್ನು 432,962 ಜನರು ಮೃತಪಟ್ಟಿದ್ದಾರೆ 4,062,659 ಮಂದಿ ರೋಗದಿಂದ ಮುಕ್ತಗೊಂಡಿದ್ದಾರೆ. view by country
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail