NEWSನಮ್ಮರಾಜ್ಯಶಿಕ್ಷಣ-

ಪೊಲೀಸ್ ಕಾನ್ಸ್ ‍ಟೇಬಲ್ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ವಿಜಯಪಥ ಸಮಗ್ರ ಸುದ್ದಿ

ಹಾಸನ: 2020-21ನೇ ಸಾಲಿನ ನೇಮಕಾತಿಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್ ‍ಟೇಬಲ್ ವೃಂದದ ವಿವಿಧ ಹುದ್ದೆಗಳ ನೇರ ನೇಮಕಾತಿ ಸಂಬಂಧ ಅರ್ಜಿ ಆಹ್ವಾನಿಸಲಾಗಿದೆ.

ಪ್ರಸ್ತುತ ರಾಜ್ಯದಲ್ಲಿನ ಪರಿಸ್ಥಿತಿಯನ್ನು ಅವಲೋಕಿಸಿ ಈ ಹಿಂದೆ ನಿಗದಿಪಡಿಸಲಾಗಿದ್ದ ಅರ್ಜಿ ಅಹ್ವಾನದ ದಿನಾಂಕಗಳನ್ನು ಮಾತ್ರ ವಿಸ್ತರಿಸಲಾಗಿರುತ್ತದೆ. ಅರ್ಹತಾ ಷರತ್ತುಗಳಲ್ಲಿ (ವಯೋಮಿತಿ ಸೇರಿದಂತೆ) ಯಾವುದೇ ಬದಲಾವಣೆಗಳಿಲ್ಲ.

ಸಿ.ಪಿ.ಸಿ (ಪುರುಷ ಮತ್ತು ಮಹಿಳಾ) (ಕಲ್ಯಾಣ ಕರ್ನಾಟಕ) 558 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಮರು ನಿಗದಿಪಡಿಸಿದ್ದು, ಜುಲೈ9 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಹಾಗೂ ಶುಲ್ಕ ಪಾವತಿಸಲು ಜುಲೈ.13 ಕೊನೆಯ ದಿನವಾಗಿರುತ್ತದೆ. ಎ.ಪಿ.ಸಿ (ಪುರುಷ) (ಸಿ.ಎ.ಆರ್/ಡಿ.ಎ.ಆರ್) (ಕಲ್ಯಾಣ ಕರ್ನಾಟಕ) 444 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ.9 ಮತ್ತು  ಶುಲ್ಕ ಪಾವತಿಸಲು ಜುಲೈ.13 ಕೊನೆಯ ದಿನವಾಗಿದೆ.

ಸಿ.ಪಿ.ಸಿ (ಪುರುಷ ಮತ್ತು ಮಹಿಳಾ) 2007 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ.13 ಹಾಗೂ ಶುಲ್ಕ ಪಾವತಿಸಲು ಜುಲೈ.15  ಕೊನೆಯ ದಿನವಾಗಿದೆ.

ಎ.ಪಿ.ಸಿ (ಪುರುಷ) (ಸಿ.ಎ.ಆರ್/ಡಿ.ಎ.ಆರ್) 1005 ಹುದ್ದೆಗಳಿಗೆ  ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ.13 ಹಾಗೂ ಶುಲ್ಕ ಪಾವತಿಸಲು ಜುಲೈ.15 ಕೊನೆಯ ದಿನವಾಗಿದೆ.

ಸಿಆರ್.ಪಿ.ಸಿ(ಪುರುಷ ಮತ್ತು ಮಹಿಳಾ) (ಕೆ.ಎಸ್.ಆರ್.ಪಿ ಮತ್ತು ಐ.ಆರ್.ಬಿ) 2420 ಹುದ್ದೆಗಳು ಮತ್ತು ಸ್ಪೇ.ಆರ್.ಪಿ.ಸಿ (ಪುರುಷ) (ಬ್ಯಾಂಡ್ಸ್‍ಮನ್) (ಕೆ.ಎಸ್.ಆರ್.ಪಿ ಮತ್ತು ಐ.ಆರ್.ಬಿ) ಹುದ್ದೆಗಳಿಗೆ  ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ.6 ಹಾಗೂ ಶುಲ್ಕ ಪಾವತಿಸಲು ಜುಲೈ.8 ಕೊನೆಯ ದಿನಾಂಕವಾಗಿರುತ್ತದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

Leave a Reply

error: Content is protected !!
LATEST
KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್