Please assign a menu to the primary menu location under menu

NEWSಸಿನಿಪಥ

ಚಲನಚಿತ್ರ ಚಿತ್ರೀಕರಣಕ್ಕೆ ಲೈಟ್ಸ್‌, ಕ್ಯಾಮರಾ, ಆಕ್ಷನ್‌ ಎಂದ ಸರ್ಕಾರ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರುರಾಜ್ಯದಲ್ಲಿ ಅನ್ ಲಾಕ್ ಹಿನ್ನೆಲೆಯಲ್ಲಿ ಸರ್ಕಾರ ಚಲನಚಿತ್ರ ಚಿತ್ರೀಕರಣ ಮತ್ತು ಪೋಸ್ಟ್ ಪ್ರೊಡಕ್ಷನ್‌ಗೆ ಅನುಮತಿ ನೀಡುವ ಮೂಲಕ ಸ್ಯಾಂಡಲ್‌ವುಡ್‌ಗೆ ಸಿಹಿಸುದ್ದಿ ನೀಡಿದೆ.

ಟಿವಿ ಧಾರಾವಾಹಿಗಳ ಚಿತ್ರೀಕರಣಕ್ಕೆ ಈಗಾಗಲೇ ಅವಕಾಶ ಕೊಟ್ಟಿತ್ತು.  ಇನ್ನು ಮುಂದೆ ಸಿನಿಮಾ ರಂಗದವರು ಚಿತ್ರೀಕರಣ ಆರಂಭಿಸಬಹುದು ಎಂದು ತಿಳಿಸಿದೆ. ಇದರಿಂದ ಕಳೆದ ಮೂರು ತಿಂಗಳಿನಿಂದ ಕೆಲಸವಿಲ್ಲದೆ ಕಂಗೆಟ್ಟಿರುವ ಕನ್ನಡ ಚಿತ್ರರಂಗಕ್ಕೆ ಹೊಸ ಚೈತನ್ಯ ಬಂದಿದೆ.

ಕೇಂದ್ರ ಸರ್ಕಾರ ಹೊರಡಿಸಿರುವ ನಿಯಮಾವಳಿಗಳಲ್ಲಿ ಲಾಕ್ ಡೌನ್ ಸಡಿಲಿಕೆಯಲ್ಲಿ ಸಿನಿಮಾ ಚಿತ್ರೀಕರಣಕ್ಕೆ ಯಾವುದೇ ನಿರ್ಬಂಧ ವಿಧಿಸಿಲ್ಲ. ಆದ್ದರಿಂದ ಈಗ ಸಿನಿಮಾ ಚಿತ್ರೀಕರಣಕ್ಕೆ ರಾಜ್ಯ ಸರ್ಕಾರ ಅನುಮತಿನೀಡಿದೆ.

ಆದರೆ, ಕೊರೊನಾ ಹಾವಳಿ ನಿಯಂತ್ರಿಸಲು ರಾಜ್ಯ ಮತ್ತು ಕೇಂದ್ರ ಸರ್ಕಾರ ರೂಪಿಸಿರುವ ನಿಯಮಗಳನ್ನು ಚಿತ್ರೀಕರಣದ ಸಂದರ್ಭದಲ್ಲಿ ಪಾಲಿಸಬೇಕು. ಮಾಸ್ಕ್‌ ಧರಿಸುವುದು, ದೈಹಿಕ ಅಂತರ ಕಾಯ್ದುಕೊಳ್ಳುವುದು, ಸ್ಯಾನಿಟೈಸರ್ ಬಳಕೆ ಸೇರಿ ಮುಂತಾದವುಗಳನ್ನು ಪಾಲಿಸುವುದು ಕಡ್ಡಾಯವಾಗಿದೆ.

ಕೊರೊನಾ ಸಂಬಂಧ ಹೊರಡಿಸಲಾಗಿರುವ ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹೊರಡಿಸಿರುವ ಪ್ರಮಾಣಿತ ಕಾರ್ಯ ವಿಧಾನಗಳನ್ನು ಕಡ್ಡಾಯವಾಗಿ ಪಾಲಿಸುವ ಷರತ್ತಿಗೆ ಒಳಪಟ್ಟು, ಜತೆಗೆ ಕಂಟೈನ್ಮೆಂಟ್ ಜೋನ್ ಹೊರತುಪಡಿಸಿ ಉಳಿದೆಡೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರ ಜತೆಗೆ ಮುನ್ನಚ್ಚರಿಕೆ ಕ್ರಮಗಳನ್ನು ಕೈಗೊಂಡು‌ ಚಲನಚಿತ್ರ ಸೇರಿ ಧಾರವಾಹಿ ಚಿತ್ರೀಕರಣಕ್ಕೆ ಅನುಮತಿ ನೀಡಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್ ಆದೇಶ ಹೊರಡಿಸಿದ್ದಾರೆ.

Leave a Reply

error: Content is protected !!
LATEST
ಸರ್ಕಾರಿ ವಾಹನ ಚಾಲಕರಿಗೆ ಕನಿಷ್ಠ ವೇತನ ₹34,100 ನಿಗದಿಗೊಳಿಸಿ ಸರ್ಕಾರ ಆದೇಶ ಇಂದಿನಿಂದ ನಿವೃತ್ತ ಸಾರಿಗೆ ನೌಕರರಿಗೆ ಉಪಧನ, ನಿವೃತ್ತಿ ಗಳಿಕೆ ರಜೆ ನಗದೀಕರಣ ಪಾವತಿಗೆ ಎಂಡಿ ಆದೇಶ BMTC: ಡಿ.24ರಂದು ನೌಕರರಿಗೆ 7 ತಿಂಗಳ ತುಟ್ಟಿಭತ್ಯೆ ಹಿಂಬಾಕಿ ಪಾವತಿಗೆ ಎಂಡಿ ಆದೇಶ KKRTC ಸಂಸ್ಥೆಯ ಸಿಬ್ಬಂದಿಗಳಿಗೆ ಉಚಿತ ಒಂದು ಕೋಟಿ ರೂ. ಅಪಘಾತ ವಿಮೆ ಜತೆಗೆ ನೌಕರರಿಗೆ ಸಿಗುವ ಇತರ ಸೌಲಭ್ಯಗಳು KKRTC: ನಗದು ರಹಿತ ಚಿಕಿತ್ಸೆಗಾಗಿ ಸಿಬ್ಬಂದಿಗಳ ವೈಯಕ್ತಿಕ, ಅವಲಂಬಿತರ ಮಾಹಿತಿ ಸಂಗ್ರಹಿಸಿ- ಅಧಿಕಾರಿಗಳಿಗೆ ಆದೇಶ ಹೈಕೋರ್ಟ್‌ ಆದೇಶದ ಬೆನ್ನಲ್ಲೇ ದಾವಣಗೆರೆಯಲ್ಲಿ ಪೊಲೀಸರಿಂದ ಸಿ.ಟಿ.ರವಿ ಬಿಡುಗಡೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ: ಮಂಡ್ಯಕ್ಕೆ ಆಗಮಿಸಿದ ಸಮ್ಮೇಳನಾಧ್ಯಕ್ಷರಿಗೆ ಸ್ವಾಗತ ಉತ್ತಮ ಆಡಳಿತ ಸಪ್ತಾಹ: ಹಿರಿಯ ನಾಗರಿಕರಿಗೆ ಗುರುತಿನ ಚೀಟಿ ವಿತರಿಸಿದ ಡಿಸಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅಶ್ಲೀಲ ಪದ ಬಳಕೆ ಆರೋಪ: ಸಿ.ಟಿ.ರವಿ ಬಂಧನ ಸಾರ್ವಜನಿಕರ ಸಮಸ್ಯೆ ಶೀಘ್ರ ಪರಿಹರಿಸಿ: ಅಧಿಕಾರಿಗಳಿಗೆ ಡಿಸಿ ಸೂಚನೆ