NEWSದೇಶ-ವಿದೇಶರಾಜಕೀಯ

ಇಡೀ ದೇಶದಲ್ಲೇ ಮತಗಳ್ಳತನವಾಗಿದೆ- ಚುನಾವಣೆ ಆಯೋಗದಿಂದ ನಮಗೆ ನ್ಯಾಯ ಸಿಗೋದಿಲ್ಲ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ವಿಜಯಪಥ - vijayapatha.in
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಇಡೀ ಭಾರತ ದೇಶದಲ್ಲಿ ಓಟ್‌ ಕಳ್ಳತನವಾಗಿದೆ. ಚುನಾವಣೆ ಆಯೋಗದಿಂದ ನಮಗೆ ನ್ಯಾಯ ಸಿಗೋದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಕಿಡಿಕಾರಿದ್ದಾರೆ.

ಮತಗಳ್ಳತನ ಬಗ್ಗೆ ಕಾಂಗ್ರೆಸ್‌ ಪಕ್ಷದ ಸಂಸದ ರಾಹುಲ್ ಗಾಂಧಿ ಸುದ್ದಿಗೋಷ್ಠಿ ಸಂಬಂಧ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ರಾಮಲಿಂಗಾರೆಡ್ಡಿ, ಲೋಕಸಭೆ ಚುನಾವಣೆ ವೇಳೆ ಮೂರನೇ ಎಲೆಕ್ಷನ್ ಆಗುವ ಹೊತ್ತಿಗೆ ಬಿಜೆಪಿಯವರ ಪಾಪ್ಯುಲಾರಿಟಿ ಕಡಿಮೆ ಆಯಿತು. ಹೀಗಾಗಿ ಗೆಲ್ಲೋಕೆ ದೇಶದ ಎಲ್ಲ ಭಾಗದಲ್ಲಿ ಮತ ತೆಗೆಯೋ ಕೆಲಸ ಮಾಡಿದರು ಎಂದು ಆರೋಪಿಸಿದರು.

ಇನ್ನು ಮಹದೇವಪುರ, ಆಳಂದ ಸೇರಿ ಹಲವು ಕಡೆ ಹೀಗೆ ಮಾಡಿದ್ದಾರೆ. ಬಿಜೆಪಿ ಅವರು ಅಧಿಕಾರ ಇರುವ ಕಡೆ ವಿಪಕ್ಷಗಳ ಕ್ಷೇತ್ರದ ಕಡೆ ಜಾಸ್ತಿ ಮಾಡಿದ್ದಾರೆ. ಇಂತಹ ಮತ ಅಕ್ರಮ ದೇಶದಲ್ಲಿ ವ್ಯಾಪಕವಾಗಿ ನಡೆಯುತ್ತಿದೆ ಎಂದು ಹೇಳಿದರು.

ಈ ಬಗ್ಗೆ ಚುನಾವಣಾ ಆಯೋಗ ಕೇಂದ್ರದ ಕೈಗೊಂಬೆಯಾಗಿದೆ. ನಮಗೆ ಕಮಿಷನ್‌ನಿಂದ ನ್ಯಾಯ ಸಿಗುವ ಭರವಸೆ ಇಲ್ಲ. ಸುಪ್ರೀಂಕೋರ್ಟ್‌ಗೆ ಹೋಗಬೇಕು ಅಷ್ಟೆ ಎಂದು ತಿಳಿಸಿದರು.

ರಾಜ್ಯದಲ್ಲಿ ಮತ ಪರಿಷ್ಕರಣೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಚುನಾವಣಾ ಆಯೋಗ ಕೇಂದ್ರದ ಕೈಗೊಂಬೆ ಆಗಿದೆ. ಮೋದಿ, ಅಮಿತ್ ಶಾ ಅವರು ಹೇಳಿದ್ದಕ್ಕೆ ಮುದ್ರೆ ಒತ್ತುತ್ತದೆ. ಕಾಂಗ್ರೆಸ್ ಪ್ರಬಲ ಇರುವ ಕಡೆ ಅಕ್ರಮ ಮಾಡುತ್ತಿದ್ದಾರೆ. ಮತ ತೆಗೆಯೋದು ಅಲ್ಲ. ಸೇರಿಸೋ ಕೆಲಸ ಮಾಡುತ್ತಾರೆ ಎಂದು ಆರೋಪಿಸಿದರು.

ಇನ್ನು ಮಹಾರಾಷ್ಟ್ರದಲ್ಲಿ ಒಂದೇ ದಿನ 40-50 ಲಕ್ಷ ಮತ ಸೇರ್ಪಡೆ ಮಾಡಿದ್ದಾರೆ. ಇವರು ಮಹಾರಾಷ್ಟ್ರ ಚುನಾವಣೆಯಲ್ಲಿ ಮೋಸದಿಂದ ಗೆದ್ದಿದ್ದು. ಆಳಂದ, ಗಾಂಧಿನಗರ ಸೇರಿ ಬೇಕಾದಷ್ಟು ಕಡೆ ಈ ಅಕ್ರಮ ಆಗಿದೆ ಎಂದು ದೂರಿದರು.

Advertisement
Megha
the authorMegha

Leave a Reply

error: Content is protected !!