NEWSನಮ್ಮರಾಜ್ಯಸಂಸ್ಕೃತಿ

ರೈತರ ಖಾತೆಗೆ ತಲಾ 2 ಸಾವಿರ ರೂ. ಬಿಡುಗಡೆ: ಸಿಎಂ ಬಿಎಸ್‌ವೈ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಪ್ರತಿ ರೈತರ ಖಾತೆಗಳಿಗೆ ತಲಾ ಎರಡು ಸಾವಿರ ರೂಪಾಯಿ ಪಾವತಿಸಲು ಸೋಮವಾರ ಒಂದು ಸಾವಿರ ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ಚಾಮರಾಜಪೇಟೆಯ ಶಂಕರಮಠದಲ್ಲಿ ಮಂಗಳವಾರ ರಾಜ್ಯದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ಹಮ್ಮಿಕೊಂಡಿದ್ದ ಧನ್ವಂತರಿ ಯಾಗದಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರ ಜತೆ ಮಾತನಾಡಿದರು.

ರಾಜ್ಯದ ಹಣಕಾಸು ಸ್ಥಿತಿ ಅಷ್ಟಾಗಿ ಉತ್ತಮ ವಿಲ್ಲದೆ ಇದ್ದರೂ ರೈತರಿಗೆ ತೊಂದರೆ ಆಗದಂತೆ ಅವರ ಸಮಸ್ಯೆ ನೀಗಿಸಲು ಹಣ ಬಿಡುಗಡೆ ಮಾಡಲಾಗಿದೆ. ಇದರಿಂದ ಸುಮಾರು 50 ಲಕ್ಷ ರೈತರಿಗೆ   ಪ್ರಯೋಜನವಾಗಿದೆ ಎಂದು ಹೇಳಿದರು.

ಕೇಂದ್ರ ಸರಕಾರ ಕೂಡ ಪ್ರತಿ ರೈತನಿಗೆ ಎರಡು ಕಂತುಗಳಲ್ಲಿ ತಲಾ ಮೂರು ಸಾವಿರ ರೂಪಾಯಿಯಂತೆ ಒಟ್ಟು ಆರು ಸಾವಿರ ಮತ್ತು ರಾಜ್ಯ ಸರಕಾರ ಎರಡು ಸಾವಿರ ರೂಪಾಯಿಯಂತೆ ಎರಡು ಕಂತುಗಳಲ್ಲಿ ನಾಲ್ಕು ಸಾವಿರ ರೂಪಾಯಿಗಳನ್ನು ಪಾವತಿಸುತ್ತಿದೆ. ಇದರಿಂದ ಪ್ರತಿ ರೈತನಿಗೂ ವರ್ಷಕ್ಕೆ ಹತ್ತು ಸಾವಿರ ರೂಪಾಯಿ ಸಿಗುತ್ತಿದೆ ಎಂದು ತಿಳಿಸಿದರು.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ