ಬೆಂಗಳೂರು: ಮಾ.23 ರಂದು ನಡೆಯಬೇಕಾಗಿದ್ದ ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆಯು ಕೊರೊನಾ ಸಾಂಕ್ರಾಮಿಕ ರೋಗ ಹರಡುತ್ತಿರುವ ಭೀತಿ ಹಿನ್ನೆಲೆಯೆಲ್ಲಿ ಮುಂದೂಡಲಾಗಿತ್ತು.
vijayapatha.in - ವಿಜಯಪಥ.ಇನ್ ನಿಮಗೆ ವಿಶ್ವಾಸನೀಯ ಸುದ್ದಿಗಳನ್ನು ಪ್ರಸಾರ ಮಾಡುತ್ತಿದೆ ಎಂದು ಅನಿಸಿದರೆ ನಮಗೆ ಆರ್ಥಕವಾಗಿ ಬಲ ನೀಡಿ. ಇನ್ನಷ್ಟು ಸತ್ಯನಿಷ್ಠ ವರದಿಗಳನ್ನು ಮಾಡುವುದಕ್ಕೆ ಬೆಂಬಲ ನೀಡಿ. ಕನಿಷ್ಠ 100 ರೂ. ಒಮ್ಮೆಗೆ ಹಾಕಿ. ನಮ್ಮನ್ನು ಪ್ರೋತ್ಸಾಹಿಸಿ.
ಹೀಗಾಗಿ ಪರೀಕ್ಷೆಯನ್ನು ಇದೇ 18 ರಂದು ನಡೆಸಲು ಶೀಕ್ಷಣ ಇಲಾಖೆ ಸಜ್ಜಾಗಿದ್ದು ಎಲ್ಲಾ ತಯಾರಿಯನ್ನು ಮಾಡಿಕೊಂಡಿದೆ.
ಇನ್ನು ಸಾಮಾಜಿಕ ಅಂತರವನ್ನು ಕಾಪಾಡುವ ಹೆಚ್ಚುವರಿ ಪರಿಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದೆ.
ಎಲ್ಲಾ 32 ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಳ್ಳಲು ಸಂಬಂಧಿಸಿದ ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರಿಗೆ ಸೂಚನೆ ನೀಡಲಾಗಿದೆ.
ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಪರೀಕ್ಷಾ ಕಾರ್ಯದಲ್ಲಿ ತೊಡಗಿದ ಎಲ್ಲಾ ಸಿಬ್ಬಂದಿಗೂ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಧರಿಸಲು ಸೂಚನೆ ನೀಡಲಾಗಿದೆ.
ಕೋವಿಡ್-19ರ ಹಿನ್ನೆಲೆಯಲ್ಲಿ ಪ್ರತಿ ವಿದ್ಯಾರ್ಥಿಗಳು ತಮ್ಮದೇ ಆದ ಕುಡಿಯುವ ನೀರಿನ ಬಾಟಲ್‌ಗಳನ್ನು ಮತ್ತು ಮಾಸ್ಕ್ ಧರಿಸಿಕೊಂಡು ಬರಲು ಸೂಚನೆ ನೀಡಲಾಗಿದೆ. ಕೋವಿಡ್-19ರ ಹಿನ್ನೆಲೆಯಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೆ ಉಷ್ಣಾಂಶ ಪರೀಕ್ಷೆ ಮತ್ತು ಸ್ಯಾನಿಟೈಸ್ ಮಾಡಲಿರುವ ಕಾರಣಕ್ಕಾಗಿ ಎಲ್ಲಾ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಒಂದೂವರೆ ಗಂಟೆ ಮುಂಚಿತವಾಗಿಯೇ ಹಾಜರಿರುವಂತೆ ಸೂಚಿಸಲಾಗಿದೆ.
ಇನ್ನು ರಾಜ್ಯಾದ್ಯಂತ ಪರೀಕ್ಷೆಗೆ ಹಾಜರಾಗುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೂ ಕನ್ನಡದ ಡಿಜಿಟಲ್ ಮೀಡಿಯಾ ವಿಜಯಪಥ ದಿಂದ ಆಲ್ ದಿ ಬೆಸ್ಟ್
![](https://vijayapatha.in/wp-content/uploads/2024/02/QR-Code-VP-1-1-300x62.png)