NEWSನಮ್ಮರಾಜ್ಯಮೈಸೂರುಸಂಸ್ಕೃತಿ

ಬನ್ನಿ ಚುನಾವಣೆಯಲ್ಲಿ ರಾಜಕಾರಣ ಮಾಡೋಣ. ನಾಡಹಬ್ಬದ ವಿಚಾರದಲ್ಲಿ ಕೆಟ್ಟ ರಾಜಕಾರಣ ಬೇಡ: ಸಿಎಂ ಸಿದ್ದರಾಮಯ್ಯ

ವಿಜಯಪಥ - vijayapatha.in
ವಿಜಯಪಥ ಸಮಗ್ರ ಸುದ್ದಿ

ಮೈಸೂರು: ದಸರಾ ಉತ್ಸವ ಮತ್ತು ನಮ್ಮ ಸಾಂಸ್ಕೃತಿಕ ಹಿರಿಮೆಯ ಪರಿಚಯ ಇಲ್ಲದವರು ಬಾನು ಮುಷ್ತಾಕ್ ಅವರಿಗೆ ವಿರೋಧಿಸಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ, ನಾಡಹಬ್ಬ ಐತಿಹಾಸಿಕ ದಸರಾ ಉದ್ಘಾಟನೆ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇತಿಹಾಸ ತಿರುಚಿ, ಸ್ವಾರ್ಥ ರಾಜಕೀಯ ಮಾಡುವುದು ಅಕ್ಷಮ್ಯ ಅಪರಾಧ. ರಾಜಕಾರಣ ಮಾಡುವುದಿದ್ದರೆ ಚುನಾವಣೆಯಲ್ಲಿ ಮಾಡೋಣ. ನಾಡ ಹಬ್ಬದ ವಿಚಾರದಲ್ಲಿ ಕೆಳ ಮಟ್ಟದ ರಾಜಕಾರಣ ಮಾಡುವುದು ಕ್ಷುಲ್ಲಕ ಎಂದರು.

ನಾಡಿನ ಬಹುಸಂಖ್ಯಾತ ಸಮುದಾಯ ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟಿಸಿರುವುದನ್ನು ಸ್ವಾಗತಿಸಿದೆ. ಇದು ಹೆಮ್ಮೆಯ ಸಂಗತಿ. ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ಪುರಸ್ಕೃತರಾದ ಬಾನು ಮುಷ್ತಾಕ್ ಅವರು ದಸರಾ ಉದ್ಘಾಟಿಸಿರುವುದು ಸೂಕ್ತವಾಗಿದೆ ಎಂದು ಹೇಳಿದರು.

ಇನ್ನು ಬಾನು ಮುಷ್ತಾಕ್ ಮುಸ್ಲಿಂ ಮಹಿಳೆ ಎನ್ನುವುದಕ್ಕಿಂತ ಮಾನವೀಯ ಮೌಲ್ಯ ಪಾಲಿಸುವ ಮನುಷ್ಯರು. ನಾವು ಮನುಷ್ಯರು ಪರಸ್ಪರ ಪ್ರೀತಿಯಿಂದ ಬಾಳಬೇಕು. ದ್ವೇಷ ಮನುಷ್ಯತ್ವದ ವಿರೋಧಿ. ಆದ್ದರಿಂದ ದ್ವೇಷವನ್ನು ಆಚರಿಸುವವರು ಮನುಷ್ಯತ್ವದ ವಿರೋಧಿಗಳು ಎಂದರು.

ಸಂವಿಧಾನದ ಮೌಲ್ಯಗಳಾದ ಸಹಿಷ್ಣುತೆ ಪಾಲಿಸುವವರು ಮಾತ್ರ ಅಪ್ಪಟ ಭಾರತೀಯರು. ನಮ್ಮ ಸಂವಿಧಾನವು ಜಾತ್ಯತೀತ ಮತ್ತು ಧರ್ಮಾತೀತವಾದುದ್ದು. ಇದನ್ನೇ ಹೈಕೋರ್ಟ್- ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ. ಯಾರಿಗೆ ಭಾರತೀಯರು ಎನ್ನುವ ಹೆಮ್ಮೆ ಇರುತ್ತದೋ ಅವರಿಗೆ ಮಾತ್ರ ಸಂವಿಧಾನದ ಬಗ್ಗೆ ಹೆಮ್ಮೆ ಇರುತ್ತದೆ. ನಮಗೆ ನಮ್ಮ ಹಕ್ಕು ಮತ್ತು ಜವಾಬ್ದಾರಿಗಳು ಗೊತ್ತಾಗಬೇಕಾದರೆ ಸಂವಿಧಾನ ಗೊತ್ತಿರಬೇಕು ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಹೆಸರೇಳದೆ ಕುಟುಕಿದರು.

ರಾಷ್ಟ್ರಕವಿ ಕುವೆಂಪು ಅವರ ಮಾತನ್ನು ನಾವು ಮರೆಯಬಾರದು. ಗುಡಿ-ಚರ್ಚು-ಮಸೀದಿಗಳ ಬಿಟ್ಟು ಹೊರ ಬರಬೇಕು, ಕುವೆಂಪು ಅವರ ಆಶಯದ ಸರ್ವ ಜನಾಂಗದ ಶಾಂತಿಯ ತೋಟವನ್ನಾಗಿ ರಾಜ್ಯವನ್ನು ಗಟ್ಟಿಗೊಳಿಸಬೇಕು.

Advertisement

ಸಂವಿಧಾನದ ಆಶಯದಂತೆ ಎಲ್ಲ ಜಾತಿ, ಎಲ್ಲ ಧರ್ಮದ ಮತ್ತು ಎಲ್ಲ ಪಕ್ಷದ ಬಡವರಿಗೆ ನಾವು ಗ್ಯಾರಂಟಿ ಗಳನ್ನು ಜಾರಿ ಮಾಡಿದ್ದೇವೆ. ಬಿಜೆಪಿಯವರು ಗ್ಯಾರಂಟಿಗಳ ಫಲಾನುಭವಿಗಳಲ್ಲವೇ? ಈ ಗ್ಯಾರಂಟಿಗಳು ನಿಲ್ಲುವುದಿಲ್ಲ. ನಮ್ಮ ಗ್ಯಾರಂಟಿಗಳಿಂದಾಗಿ ನಮ್ಮ ರಾಜ್ಯದ ಜನರ ತಲಾದಾಯ ದೇಶದಲ್ಲೇ ನಂಬರ್ ಒನ್ ಆಗಿದೆ. ಈಗ ಜಿಎಸ್‌ಡಿಪಿಯಲ್ಲಿ ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ ಎಂದರು.

Megha
the authorMegha

Leave a Reply

error: Content is protected !!