NEWSನಮ್ಮಜಿಲ್ಲೆನಮ್ಮರಾಜ್ಯ

ಅ.11-12ರಂದು 81ಲಕ್ಷ ನಿವೃತ್ತರಿಗೆ ಕನಿಷ್ಠ ಪಿಂಚಣಿ ಸೇರಿ ವಿವಿಧ ಸೌಲಭ್ಯಗಳ ಜಾರಿಗೆ ಆಗ್ರಹಿಸಿ ಬೃಹತ್‌ ಪ್ರತಿಭಟನೆ: ನರಗುಂದ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಇಪಿಎಸ್-95 ಎನ್‌ಎಸಿಯ ಕರ್ನಾಟಕದ ಎಲ್ಲ ಜಿಲ್ಲೆಗಳ ಜಿಲ್ಲಾ ಪದಾಧಿಕಾರಿಗಳ ಸಭೆ ಗಾಂಧಿನಗರದಲ್ಲಿರುವ (ಮೆಜೆಸ್ಟಿಕ್)  ಶ್ರೀ ಸತ್ಯನಾರಾಯಣ ಸ್ವಾಮಿ ದೇವಸ್ಥಾನದಲ್ಲಿ ನಡೆಯಿತು.

ಮಂಗಳವಾರ (ಸೆ. 23ರಂದು) ರಾಷ್ಟ್ರೀಯ ಸಂಘರ್ಷ ಸಮಿತಿ ಹಮ್ಮಿಕೊಂಡಿದೆ ಸಭೆಯಲ್ಲಿ ಸಮಿತಿಯ ಮುಖ್ಯ ರಾಷ್ಟ್ರೀಯ ಸಂಯೋಜಕ ರಮಾಕಾಂತ ನರಗುಂದ ಮಾತನಾಡಿ, ಬರುವ ಅಕ್ಟೋಬರ್‌ 11 ಮತ್ತು 12ರಂದು ಫ್ರೀಡಂ ಪಾರ್ಕ್‌ನಲ್ಲಿ ಸುಮಾರು 81ಲಕ್ಷ ನಿವೃತ್ತರಿಗೆ ಕನಿಷ್ಠ ಪಿಂಚಣಿ 7500 ರೂ. ಸೇರಿದಂತೆ ವಿವಿಧ ಸೌಲಭ್ಯಗಳನ್ನು ಕೂಡಲೇ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಬೃಹತ್‌ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಈ ವೇಳೆ ಸಭೆಗೆ ಬಂದಿದ್ದ ಎಲ್ಲ ಪದಾಧಿಕಾರಿಗಳು ಒಕ್ಕೂರಲಿನಿಂದ ಪ್ರತಿಭಟನೆಗೆ ಸಹಮತ ವ್ಯಕ್ತಪಡಿಸಿ ನಮ್ಮ ಬೇಡಿಕೆಗಳನ್ನು ಸರ್ಕಾರ ಈಡೇರಿಸಲೇಬೇಕು ಎಂದು ಒತ್ತಾಯಸಲು ನಿರ್ಣಯ ತೆಗೆದುಕೊಂಡರು.

ಇನ್ನು ದೇಶಾದ್ಯಂತ ಭವಿಷ್ಯ ನಿಧಿಯ ನೌಕರರ ಪಿಂಚಣಿ ಯೋಜನೆ-95ರಡಿಯಲ್ಲಿ 81 ಲಕ್ಷ ಪಿಂಚಣಿದಾರರಿದ್ದಾರೆ. ಈ ಯೋಜನೆಯಲ್ಲಿ ಕನಿಷ್ಠ ಪಿಂಚಣಿ 1000 ರೂ. ಗಳನ್ನು ಪ್ರಸ್ತುತ ನಿಗದಿ ಮಾಡಲಾಗಿದೆ. ನಮ್ಮ ಎಲ್ಲ ನಿವೃತ್ತ ಉದ್ಯೋಗಿಗಳು EPS 95 ಪಿಂಚಣಿ ನಿಧಿಗೆ ಕೊಡುಗೆ ನೀಡುವುದರ ಜತೆಗೆ ಸುಮಾರು 30 ರಿಂದ 35 ವರ್ಷಗಳವರೆಗೆ ಸೇವೆ ಸಲ್ಲಿಸಿದ ನಂತರ ಸರಾಸರಿ 1175 ರೂ.ಗಳನ್ನು ತಿಂಗಳಿಗೆ ಕಡಿಮೆ ಪಿಂಚಣಿ ಪಡೆಯುತ್ತಿರುವುದು ನೋವಿನ ಸಂಗತಿ ಎಂದರು.

ಈಗ ಕೊಡುತ್ತಿರುವ ಪಿಂಚಣಿ ವಯೋವೃದ್ಧ ದಂಪತಿಗಳಿಗೆ ಎರಡು ದಿನದ ಊಟಕ್ಕೂ ಸಾಲದು. ಇನ್ನು ಅವರ ಆರೋಗ್ಯ ವೆಚ್ಚದ ದರಗಳು ಹೆಚ್ಚಿರುವ ಈ ಸಮಯದಲ್ಲಿ ಸಿಗುತ್ತಿರುವ ಈ ಪಿಂಚಣಿಯಿಂದ ಹೇಗೆ ಆರೋಗ್ಯ ಕಾಪಾಡಿಕೊಳ್ಳು ಸಾಧ್ಯ ಎಂದು ಪ್ರಶ್ನಿಸಿದ ಅವರು, ಈಗಲಾದರೂ ತಾವು ನಮ್ಮ ಮೇಲೆ ಕರುಣೆ ತೋರಿಸಿ ಎಂದು ಮನವಿ ಮಾಡಿದರು.

ಇನ್ನು ನಾವು ಬಹುತೇಕ ಎಲ್ಲ ಸಂಸದರನ್ನು ಭೇಟಿಯಾಗಿ ಅವರ ಸಹಾಯ ಮತ್ತು ಮಧ್ಯಸ್ಥಿಕೆಗಳನ್ನು ಕೋರಿ ಅವರಿಗೆ ಪತ್ರಗಳನ್ನು ಸಲ್ಲಿಸಿದ್ದೇವೆ ಜತೆಗೆ ನಮ್ಮ ನಾಯಕರು ನಮ್ಮ ಪ್ರಧಾನಿಯನ್ನು ಎರಡು ಬಾರಿ ಭೇಟಿ ಮಾಡಿದ್ದಾರೆ ಮತ್ತು ಅವರು ನಮ್ಮ ಕಷ್ಟಗಳನ್ನು ಪರಿಶೀಲಿಸುವುದಾಗಿ ಭರವಸೆ ನೀಡಿದ್ದಾರೆ. ಆದರೆ ಈವರೆಗೂ ಅದು ಕಾರ್ಯರೂಪಕ್ಕೆ ಬಂದಿಲ್ಲ.

ಈ ಹಿನ್ನೆಲೆಯಲ್ಲಿ ಕಮಾಂಡರ್ ಅಶೋಕ್ ರಾವತ್ ವೀರೇಂದ್ರ ಸಿಂಗ್ ಸಮರ್ಥ ನಾಯಕತ್ವದಲ್ಲಿ ನಮ್ಮ ರಾಷ್ಟ್ರೀಯ ಸಂಘರ್ಷ ಸಮಿತಿ ಕರ್ನಾಟಕದ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ನಮ್ಮ ಸಂಘಟನೆ ಸುದೃಢವಾಗಿದ್ದು ನಮ್ಮ ಹೋರಾಟ ನಿರಂತರವಾಗಿ ನಡೆಯುತ್ತಿದೆ.

ಈ ನಮ್ಮ ಹೋರಾಟದ ನಡುವೆ ಅಕ್ಟೋಬರ್‌ 11 ಮತ್ತು 12 ರಂದು ಕೇಂದ್ರ ಸರ್ಕಾರದ ಕೇಂದ್ರೀಯ ಭವಿಷ್ಯ ನಿಧಿ ಸಂಘಟನೆಯ ಉನ್ನತ ಮಟ್ಟದ ಸಮಿತಿಯಾದ ಸಿಬಿಟಿ ಸಭೆಯನ್ನು ಬೆಂಗಳೂರಿನಲ್ಲಿ ನಡೆಸಲು ನಿರ್ಧಾರವಾಗಿದೆ. ಈ ಸಂದರ್ಭದಲ್ಲಿ ಇಪಿಎಸ್ 95 ಪಿಂಚಣಿದಾರರ ಕನಿಷ್ಠ ಪಿಂಚಣಿ ಹಾಗೂ ಇತರೆ ಬೇಡಿಕೆಗಳು ಸೇರಿ ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ಪಿಂಚಣಿ ಜಾರಿಗೊಳಿಸಿ ಎಂದು ಆಗ್ರಹಿಸಿ ಅದೇ ದಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ ಎಂದರು.

ಈ ಎಲ್ಲ ಅಂಶಗಳ ಬಗ್ಗೆ ಎನ್‌ಎಸಿ ಸೆ.23ರಂದು ನಡೆದ ಜಿಲ್ಲಾ ಪದಾಧಿಕಾರಿಗಳ ಸಭೆಯಲ್ಲಿ ಚರ್ಚಿಸಿ ನಿರ್ಣಯ ಕೈಗೊಳ್ಳಲಾಗಿದ್ದು ಅದರಂತೆ ನಮ್ಮ ಎಲ್ಲ ಪದಾಧಿಕಾರಿಗಳು ಸಹಕಾರ ನೀಡಲು ಮುಂದಾಗಿದ್ದಾರೆ ಎಂದು ನರಗುಂದ ತಿಳಿಸಿದರು.

ಸಭೆಯಲ್ಲಿ ರಾಜ್ಯ ಸಂಯೋಜಕರಾದ ಆರ್. ಸುಬ್ಬಣ್ಣ, ನಾಗಮಣಿ ಸೇರಿದಂತೆ ಹಲವರು ಇದ್ದರು.

Megha
the authorMegha

Leave a Reply

error: Content is protected !!
Latest news
NWKRTC: ಧಾರವಾಡ ಗ್ರಾ.ವಿಭಾಗದ ನಿವೃತ್ತ ಅಧಿಕಾರಿಗಳಿಗೆ ಹೃದಯಸ್ಪರ್ಷಿ ಬೀಳ್ಕೊಡುಗೆ KSRTC: ಮೂರು ದಶಕಗಳ ಸುದೀರ್ಘ ಸೇವೆ ಬಳಿಕ ಸಂಸ್ಥೆಯ ಬಸ್‌ ಚಾಲಕ ನಿವೃತ್ತಿ-  ಮರೆಯಲಾಗದ ಸಂದರ್ಭ ಸೆರೆ! ಇಂಧನ, ಗ್ಯಾಸ್ ಬೆಲೆಯೇರಿಕೆ, ವಿದ್ಯುತ್ ಖಾಸಗೀಕರಣ ವಿರೋಧಿಸಿ ರಾರೈಸಂ ಪ್ರತಿಭಟನೆ -ಸರ್ಕಾರಗಳ ವಿರುದ್ಧ ಘೋಷಣೆ KKRTC: ಬಸ್ ನಿಲ್ದಾಣದಲ್ಲಿ ಮಹಿಳೆ ಜತೆ ಅನುಚಿತ ವರ್ತನೆ-ಕಿಡಿಗೇಡಿಗೆ ಚಪ್ಪಲಿ ಏಟು ಪ್ರಮಾಣ ವಚನ ಸ್ವೀಕಾರಕ್ಕೆ ಮುಹೂರ್ತ ಫಿಕ್ಸ್ – ಜೂ.3ರಂದು ನೂತನ ಸಿಎಂಆಗಿ ಗದ್ದುಗೆ ಏರಲಿರುವ ಡಿ.ಕೆ.ಶಿವಕುಮಾರ್‌ ಪೆಟ್ರೋಲ್‌, ಡೀಸೆಲ್‌ ಬಳಿಕ CNG ದರದಲ್ಲೂ ಏರಿಕೆ- ಎರಡನೇ ಬಾರಿಗೆ 2ರೂ. ಹೆಚ್ಚಳ -ಗ್ರಾಹಕರಿಗೆ ಶಾಕ್‌ ಕೊಟ್ಟ MGL ಆದೇಶ ಕಾಯ್ದಿರಿಸಿದ 3 ತಿಂಗಳೊಳಗಾಗಿ ಎಲ್ಲ ಕೋರ್ಟ್‌ಗಳಲ್ಲೂ ಅಂತಿಮ ತೀರ್ಪು ಹೊರಬೀಳಬೇಕು: ಸುಪ್ರೀಂ ಮಹತ್ವದ ಆದೇಶ ಗೃಹಲಕ್ಷ್ಮಿ ಹಣ ಮೃತರ ಖಾತೆಗೆ ಜಮೆ ಆಗದಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಗ್ಯಾರಂಟಿ ಯೋಜನೆ ಅಧ್ಯಕ್ಷ ತಾಕೀತು ವಿದ್ಯುತ್ ಗ್ರಾಹಕರಿಗೆ ಗುಡ್‌ನ್ಯೂಸ್‌: ಬಿಲ್‌ಗಳಿಗೆ ಕನಿಷ್ಠ 15 ದಿನಗಳ ಪಾವತಿ ಅವಧಿ ಕಡ್ಡಾಯ ಮಾಡಿ KERC ಆದೇಶ- ಜೂನ್‌... BMTC KSRTC ನಿವೃತ್ತ ನೌಕರರ ಪ್ರತಿಭಟನೆ: ಕನಿಷ್ಠ ಪಿಂಚಣಿ 7500 ರೂ. ನೀಡಲು ಆಗ್ರಹ